ಮೂಡಲಗಿ: ಪಟ್ಟಣದ ಮೂಡಲಗಿ ಶಿಕ್ಷಣ ಸಂಸ್ಥೆಯ ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯದ ಐ.ಕ್ಯೂ.ಎ.ಸಿ, ಯುಥ ರೆಡ್ ಕ್ರಾಸ್, ರಾಷ್ಟ್ರೀಯ ಸೇವಾ ಯೋಜನೆ ಮತ್ತು ರೋವರ್ ಸ್ಕೌಟ್ಸ ಘಟಕಗಳ ಆಶ್ರಯದಲ್ಲಿ ಸ್ವಾಮಿ ವಿವೇಕಾನಂದರ ಜಯಂತಿ ಹಾಗೂ ರಾಷ್ಟ್ರೀಯ ಯುವ ಸಪ್ತಾಹ ಆಚರಣೆ ಕಾರ್ಯಕ್ರಮ ಜ.೧೬ ರಂದು ಮುಂಜಾನೆ ೧೦-೩೦ಕ್ಕೆ ಏರ್ಪಡಿಸಲಾಗಿದೆ ಎಂದು ಕಾಲೇಜಿನ ಪ್ರಾಚಾರ್ಯ ಪ್ರೊ.ಎ.ಪಿ.ರಡ್ಡಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಸಮಾರಂಭದ ಅಧ್ಯಕ್ಷತೆಯನ್ನು ಸಂಸ್ಥೆಯ ಅಧ್ಯಕ್ಷ ವಿಜಯಕುಮಾರ ಸೋನವಾಲ್ಕರ ವಹಿಸುವರು, ಮುಖ್ಯ ಅತಿಥಿಗಳಾಗಿ ನಾಗನೂರ ಅಥರ್ವ ವಿಜ್ಞಾನ ಕಾಲೇಜಿನ ಉಪನ್ಯಾಸಕ ಪ್ರೊ.ಚೇತನ ಜೋಗನ್ನವರ ಮತ್ತು ಸಂಸ್ಥೆಯ ಉಪಾಧ್ಯಕ್ಷ ಎಸ್.ಆರ್.ಸೋನವಾಲ್ಕರ ಭಾಗವಹಿಸುವರು.
Gadi Kannadiga > Local News > ಜ.೧೬ರಂದು ರಾಷ್ಟ್ರೀಯ ಯುವ ಸಪ್ತಾಹ ಆಚರಣೆ