This is the title of the web page
This is the title of the web page

Please assign a menu to the primary menu location under menu

Local News

ರಾಜಕುಮಾರ ಟಾಕಳೆ ನನ್ನ ಗಂಡ ಎಂದ ನವ್ಯಾಶ್ರೀ ಬೆಳಗಾವಿಯಲ್ಲಿ ಹೊಸ ತಿರುವು ಪಡೆದ ಕಾಂಗ್ರೆಸ್ ನಾಯಕಿಯ ಪ್ರಕರಣ


ಬೆಳಗಾವಿ: ಕಾಂಗ್ರೆಸ್ ಯುವ ನಾಯಕಿ ನವ್ಯಶ್ರೀ ಪ್ರಕರಣ ಬೆಳಗಾವಿಯಲ್ಲಿ ತಿರುವು ಪಡೆದುಕೊಳ್ಳುತ್ತಿದೆ. ಎಪಿಎಂಸಿ ಠಾಣೆಯಲ್ಲಿ ನವ್ಯಶ್ರೀ ವಿರುದ್ಧ ಎಫ್ ಐ ಆರ್ ದಾಖಲಾಗುತ್ತಿದ್ದಂತೆ ರಾಜಕುಮಾರ ಟಾಕಳೆ ನನ್ನ ಗಂಡ ಎಂದು ಮಾದ್ಯಮಗಳಿಗೆ ಸ್ಪೋಟಕ ಮಾಹಿತಿ ನೀಡಿದ್ದಾರೆ.

ಈ ಬಗ್ಗೆ ಬೆಳಗಾವಿಯಲ್ಲಿ ಮಾದ್ಯಮಗಳೊಂದಿಗೆ ಮಾತನಾಡಿರುವ ನವ್ಯಶ್ರೀ, ತಮ್ಮ ವಿರುದ್ಧ ಕೇಳಿ ಬಂದಿರುವ ಆರೋಪಗಳು ಸುಳ್ಳು. ಇದೊಂದು ಷಡ್ಯಂತ್ರ ಎಂದು ತಿಳಿಸಿದ್ದಾರೆ. ಕಳೆದ 15 ದಿನಗಳಿಂದ ನಾನು ಭಾರತದಲ್ಲಿ ಇರಲಿಲ್ಲ. ದುಬೈಗೆ ಹೋಗಿದ್ದೆ. ಅಲ್ಲಿ ನನಗೆ ಪ್ರಶಸ್ತಿ ವಿತರಣಾ ಕಾರ್ಯಕ್ರಮವಿತ್ತು. ನಾನು ದುಬೈನಿಂದ ನಿನ್ನೆ ಬಂದಿದ್ದು, ಬರುವಷ್ಟರಲ್ಲಿ ನನ್ನ ವಿರುದ್ಧ ಕೆಲ ಗಂಭೀರ ಆರೋಪಗಳನ್ನು ಮಾಡಲಾಗುತ್ತಿದೆ. ಸಾಮಾಜಿಕ ಜಾಲತಾಣಗಳಲ್ಲಿಯೂ ನನ್ನ ಬಗ್ಗೆ ಕೆಟ್ಟದಾಗಿ ಬಿಂಬಿಸಲಾಗುತ್ತಿದೆ ಎಂದರು.

ರಾಜಕುಮಾರ್ ಟಾಕಳೆ ನನ್ನ ಗಂಡ ಅವರು ನನಗೆ ಹೀಗೇಕೆ ಮೋಸ ಮಾಡುತ್ತಿದ್ದಾರೆ ಎಂದು ನನಗೆ ಗೊತ್ತಾಗುತ್ತಿಲ್ಲ ಅವರಿಗೆ ನಾನು ತೊಂದರೆ ಕೊಟ್ಟಿದ್ದೇನೆ ಎಂಬುದು ಸುಳ್ಳು. ನನ್ನಿಂದ ಅವರಿಗೆ ಯಾವುದೇ ತೊಂದರೆ, ಸಮಸ್ಯೆಯೂ ಆಗಿಲ್ಲ. ನನ್ನ ವಿರುದ್ಧ ಸುಳ್ಳು ಆರೋಪ ಮಾಡಲಾಗುತ್ತಿದೆ. ಜೊತೆಗೆ ಪಕ್ಷದ ಹೆಸರನ್ನು ಎಳೆದು ತರಲಾಗುತ್ತಿದೆ. ಇದರ ಹಿಂದೆ ಬೇರೆ ಯಾರದ್ದೋ ಕೈವಾಡವಿದೆ. ಇದು ನನ್ನ ವಿರುದ್ಧ ನಡೆದಿರುವ ಷಡ್ಯಂತ್ರ. ನಾನು ಕಮಿಷನರ್ ಅವರ್ನ್ನು ಭೇಟಿಯಾಗಿ ದೂರು ನೀಡಿದ್ದೇನೆ ಎಂದು ಹೇಳಿದರು.


Gadi Kannadiga

Leave a Reply