ಬೆಳಗಾವಿ :ವಿಧಾನ ಪರಿಷತ್ ಚುನಾವಣಾ ಕಾವು ದಿದಿಂದ ದಿನಕ್ಕೆ ರಂಗೇರುತ್ತಿದ್ದು ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ ಭರದಿಂದ ಸಾಗಿದ್ದು ಇಂದು ಎನ್. ಬಿ. ಬನ್ನೂರ ಪಕ್ಷೇತರರಾಗಿ ನಾಮಪತ್ರ ಸಲ್ಲಿಸಿದ್ದಾರೆ.
ಸೋಮವಾರ ಬೆಳಗಾವಿಯಲ್ಲಿ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರವನ್ನು ಸಲ್ಲಿಸಿದರು ಬಳಿಕ ಅವರು ಮಾತನಾಡಿ ವಿಧಾನ ಪರಿಷತ್ ಚುನಾವಣೆಗೆ ವಾಯವ್ಯ ಶಿಕ್ಷಕರ ಮತಕ್ಷೇತ್ರದಿಂದ ಕಾಂಗ್ರೆಸ್ ಟಿಕೇಟ್ ಸಿಗದ ಕಾರಣದಿಂದ ಪಕ್ಷೇತರವಾಗಿ ಸ್ಪರ್ದೇಗಿಳಿದ್ದೇನೆ. ಕಳೆದ ಚುನಾವಣೆಯಲ್ಲಿ ಸ್ವಲ್ಪ ಮತಗಳ ಅಂತರದಲ್ಲಿ ಸೋತಿದ್ದೇ ಈ ಭಾರಿ ಕಾಂಗ್ರೆಸ್ ಟಿಕೆಟ್ ಸಿಗದ ಕಾರಣ ಪಕ್ಷೇತರ ಅಭ್ಯರ್ಥಿಯಾಗಿ ಚುನಾವಣಾ ಕಣಕ್ಕಿಳಿದಿದ್ದೇನೆ ಎಂದರು.
ಈಗಾಗಲೇ ಆಯ್ಕೆಯಾಗಿ ಹೋದವರು ಶಿಕ್ಷಕರಿಗಾಗಿ ಯಾವುದೇ ಕೆಲಸವನ್ನು ಮಾಡಿಲ್ಲ, ಶಿಕ್ಷಕರ ಯಾವುದೇ ಬೇಡಿಕೆಯನ್ನು ಈಡೇರಿಸಿಲ್ಲ. ಶಿಕ್ಷಕರ ಸಮಸ್ಯೆಗೆ ಸ್ಪಂದಿಸುತ್ತಿಲ್ಲ ಆದ್ದರಿಂದ ಈ ಭಾರಿ ಅಭ್ಯರ್ಥಿಗಳ ಬದಲಾವಣೆ ಅವಶ್ಯವಾಗಿದೆ ಎಂದರು.
ಕಳೆದ ಮೂವತ್ತು ವರ್ಷಗಳಿಂದ ಶಿಕ್ಷಕರ ಸಲುವಾಗಿ ಸಾಕಷ್ಟು ಹೋರಾಟಗಳನ್ನು ಮಾಡಿರುವೆ. ಶಿಕ್ಷಕರ ಸೇವೆಯನ್ನು ನಿರಂತರ ಮಾಡುತ್ತಾ ಬಂದಿದ್ದೆವೆ. ಅವರೆಲ್ಲರ ಆಶೀರ್ವಾದದಿಂದ ನನ್ನ ಗೆಲುವು ಖಚಿತ ಎಂದು ಅವರು ಆತ್ಮವಿಶ್ವಾಸ ವ್ಯಕ್ತಪಡಿಸಿದರು.