ಕೊಪ್ಪಳ ಮೇ ೧೧ ಮೇ.೧೦ರಂದು ಮತದಾನ ಶಾಂತಯುತವಾಗಿ ಮುಕ್ತಾಯಗೊಂಡಿದ್ದು ಕೊಪ್ಪಳದ ಶ್ರೀ ಗವಿಸಿದ್ಧೇಶ್ವರ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯದಲ್ಲಿ ಮೇ.೧೩ರಂದು ಮತ ಎಣಿಕೆ ನಡೆಯಲಿದ್ದು, ಇದಕ್ಕಾಗಿ ಎಲ್ಲ ರೀತಿಯ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳಾದ ಎಂ.ಸುಂದರೇಶಬಾಬು ಅವರು ತಿಳಿಸಿದ್ದಾರೆ.
ಮತ ಎಣಿಕೆ ಕೇಂದ್ರದಲ್ಲಿ ೦೬ ಭದ್ರತಾ ಕೊಠಡಿಗಳ ನಿರ್ಮಾಣ ಮಾಡಲಾಗಿದೆ. ಮತ ಎಣಿಕೆ ಕಾರ್ಯಕ್ಕಾಗಿ ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ೦೨ ಪ್ರತ್ಯೇಕ ಕೊಠಡಿಗಳ ವ್ಯವಸ್ಥೆ ಮಾಡಲಾಗಿದ್ದು, ಒಂದರಲ್ಲಿ ವಿದ್ಯುನ್ಮಾನ ಮತಯಂತ್ರಗಳ ಮತ ಎಣಿಕೆ ಕಾರ್ಯ ಮತ್ತೊಂದರಲ್ಲಿ ಅಂಚೆ ಮತಪತ್ರಗಳ ಎಣಿಕೆ ಕಾರ್ಯವನ್ನು ಕೈಗೊಳ್ಳಲಾಗುವುದು.
ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ಇವಿಎಂಗಳ ಮತ ಎಣಿಕೆ ಕಾರ್ಯಕ್ಕಾಗಿ ೧೫ ಟೇಬಲ್‌ಗಳು ಮತ್ತು ಅಂಚೆ ಮತಪತ್ರಗಳ ಎಣಿಕೆಗಾಗಿ ೦೩ ಟೇಬಲ್‌ಗಳು ಸೇರಿ ಒಟ್ಟು ೧೮ ಟೇಬಲ್‌ಗಳ ವ್ಯವಸ್ಥೆ ಮಾಡಲಾಗಿರುತ್ತದೆ.
ಮತ ಎಣಿಕೆಗಾಗಿ ೧೧೦ ಎಣಿಕೆ ಮೇಲ್ವಿಚಾರಕರು, ೧೨೫ ಎಣಿಕೆ ಸಹಾಯಕರು ಮತ್ತು ೧೧೦ ಸ್ಟಾಟಿಕ್ ಅಬ್ಜರ್ವರು ಸೇರಿ ಒಟ್ಟು ೩೪೫ ಜನರನ್ನು ನೇಮಕಾತಿ ಮಾಡಲಾಗಿದೆ. ಎಲ್ಲಾ ಅಧಿಕಾರಿ ಸಿಬ್ಬಂದಿ, ಮತ ಎಣಿಕೆ ಸಿಬ್ಬಂದಿ, ಎಣಿಕೆ ಏಜೆಂಟರುಗಳು, ಅಭ್ಯರ್ಥಿಗಳು ಮತ್ತು ಯಾವುದೇ ವ್ಯಕ್ತಿಯು ಮತ ಎಣಿಕಾ ಕೇಂದ್ರದಲ್ಲಿ ಮೊಬೈಲ್ ಫೋನ್ ತೆಗೆದುಕೊಂಡು ಹೋಗುವುದನ್ನು ನಿಷೇಧಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
Gadi Kannadiga > State > ವಿಧಾನಸಭಾ ಚುನಾವಣೆ: ಮತ ಎಣಿಕೆಗೆ ಅಗತ್ಯ ಸಿದ್ಧತೆ
ವಿಧಾನಸಭಾ ಚುನಾವಣೆ: ಮತ ಎಣಿಕೆಗೆ ಅಗತ್ಯ ಸಿದ್ಧತೆ
Suresh11/05/2023
posted on
More important news
ಪ್ರತಿಬಂಧಕಾಜ್ಞೆ ಜಾರಿ
08/06/2023