This is the title of the web page
This is the title of the web page

Please assign a menu to the primary menu location under menu

State

ನೂತನ ಕೊಪ್ಪಳ ವಿಶ್ವವಿದ್ಯಾಲಯಕ್ಕೆ ಮುಖ್ಯಮಂತ್ರಿಗಳಿಂದ ಚಾಲನೆ


ಕೊಪ್ಪಳ ಮಾರ್ಚ್ ೨೮ : ನೂತನವಾಗಿ ಸ್ಥಾಪಿತವಾಗಿರುವ ಕೊಪ್ಪಳ ವಿಶ್ವವಿದ್ಯಾಲಯವನ್ನು ರಾಜ್ಯದ ಮುಖ್ಯಮಂತ್ರಿಗಳಾದ ಮಾನ್ಯ ಬಸವರಾಜ ಬೊಮ್ಮಾಯಿ ಅವರು ಮಾರ್ಚ ೨೮ರಂದು ಲೋಕಾರ್ಪಣೆಗೊಳಿಸಿದರು.
ಇದಕ್ಕಾಗಿ ತಳಕಲ್ ಸರ್ಕಾರಿ ಎಂಜಿನಿಯರಿಂಗ್ ಕಾಲೇಜಿನಲ್ಲಿರುವ ಕೊಪ್ಪಳ ಸ್ನಾತಕೋತ್ತರ ಕೇಂದ್ರವನ್ನು ಶೃಂಗಾರಗೊಳಿಸಲಾಗಿತ್ತು.
ಪೂರ್ವ ನಿಗದಿಯಂತೆ ಮುಖ್ಯಮಂತ್ರಿಗಳು ಬೆಳಗ್ಗೆ ಆನ್‌ಲೈನ್ ಮೋಡ್ ಮೂಲಕ ಕೊಪ್ಪಳ ಸೇರಿದಂತೆ ರಾಜ್ಯದ ನೂತನ ೭ ವಿಶ್ವವಿದ್ಯಾಲಯಗಳನ್ನು ಲೋಕಾರ್ಪಣೆಗೊಳಿಸುತ್ತಿದ್ದಂತೆ ಕೊಪ್ಪಳ ಸ್ನಾತಕೋತ್ತರ ಸಭಾಂಗಣದಲ್ಲಿ ಹಬ್ಬದ ಸಂಭ್ರಮ ಕಂಡುಬಂದಿತು.
ಈ ಕಾರ್ಯಕ್ರಮಕ್ಕೆ ಉನ್ನತ ಶಿಕ್ಷಣ ಸಚಿವರಾದ ಅಶ್ವತ್ಥ ನಾರಾಯಣ, ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವರಾದ ಮುರಗೇಶ್ ಆರ್ ನಿರಾಣಿ, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್, ಶಿಕ್ಷಣ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಎಸ್.ಆರ್.ಉಮಾಶಂಕರ್ ಹಾಗೂ ಉನ್ನತ ಶಿಕ್ಷಣ ಅಧಿಕಾರಿಗಳು, ವಿವಿಧ ವಿಶ್ವ ವಿದ್ಯಾಲಯಗಳ ಕುಲಪತಿಗಳು ಸಾಕ್ಷಿಯಾದರು.
ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ಮಾತನಾಡಿ, ರಾಜ್ಯ ಸರ್ಕಾರವು ಶಿಕ್ಷಣ ಮತ್ತು ಆರೋಗ್ಯಕ್ಕೆ ವಿಶೇಷ ಒತ್ತು ನೀಡಿದೆ ಎಂದರು. ರಾಜ್ಯದಲ್ಲಿ ಹೊಸದಾಗಿ ಏಳು ವಿವಿಗಳು ಆರಂಭವಾಗುತ್ತಿರುವುದು ಸಂತಷ ತಂದಿದೆ. ಈ ರೀತಿಯ ವಿಶ್ವ ವಿದ್ಯಾಲಯಗಳು ದೇಶದಲ್ಲಿಯೇ ಪ್ರಥಮವಾಗಿ ಪ್ರಾರಂಭವಾಗಿವೆ ಎಂದರು.
ಕಾರ್ಯಕ್ರಮದಲ್ಲಿ ಕೊಪ್ಪಳ ಜಿಲ್ಲಾಧಿಕಾರಿಗಳಾದ ಎಂ.ಸುಂದರೇಶ್ ಬಾಬು, ಕೊಪ್ಪಳ ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ.ಬಿ.ಕೆ.ರವಿ, ಮಾಜಿ ವಿಧಾನ ಪರಿಷತ್ ಸದಸ್ಯರಾದ ಕರಿಯಣ್ಣ ಸಂಗಟಿ, ಕೊಪ್ಪಳ ಸ್ನಾತಕೋತ್ತರ ಕೇಂದ್ರದ ನಿರ್ದೇಶಕರಾದ ಡಾ.ಮನೋಜ್ ಡೊಳ್ಳಿ, ಯಲಬುರ್ಗಾ ಸ್ನಾತಕೋತ್ತರ ಕೇಂದ್ರದ ನಿರ್ದೇಶಕ ಡಾ. ಪ್ರಕಾಶ್ ಯಳವಟ್ಟಿ ಸೇರಿದಂತೆ ಹಲವು ಗಣ್ಯರು ಭಾಗವಹಿಸಿದ್ದರು.


Leave a Reply