This is the title of the web page
This is the title of the web page

Please assign a menu to the primary menu location under menu

Local News

ನೂತನ ಎಂ.ಎಲ್.ಸಿ ಚನ್ನರಾಜ ಹಟ್ಟಿಹೊಳಿ ನಾಳೆ ಬೆಳಗಾವಿಗೆ


ಬೆಳಗಾವಿ – ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಅವರು ಪ್ರಮಾಣ ವಚನ ಸ್ವೀಕರಿಸಿದ ನಂತರ ಮೊದಲ ಬಾರಿಗೆ ಸೋಮವಾರ ಬೆಳಗಾವಿಗೆ ಆಗಮಿಸಲಿದ್ದಾರೆ.

ಸೋಮವಾರ ಬೆಳಗ್ಗೆ 11 ಗಂಟೆಗೆ ಆರ್ ಟಿಒ ವೃತ್ತದಲ್ಲಿರುವ ಕಾಂಗ್ರೆಸ್ ಭವನಕ್ಕೆ ಆಗಮಿಸುವ ಅವರು, ಅಲ್ಲಿ ಕಾರ್ಯಕರ್ತರನ್ನು ಭೇಟಿ ಮಾಡಿ, ಅವರೊಂದಿಗೆ ಸಮಾಲೋಚನೆ ನಡೆಸಲಿದ್ದಾರೆ.

ನಂತರ ಚನ್ನಮ್ಮ ವೃತ್ತಕ್ಕೆ ತೆರಳಿ ಕಿತ್ತೂರು ರಾಣಿ ಚನ್ನಮ್ಮ ಪುತ್ಥಳಿಗೆ ಮಾಲಾರ್ಪಣೆ ಮಾಡುವರು. ಅಲ್ಲಿಂದ ಅಂಬೇಡ್ಕರ್ ಗಾರ್ಡನ್ ಗೆ ತೆರಳಿ ಡಾ.ಬಾಬಾಸಾಹೇಬ ಅಂಬೇಡ್ಕರ್ ಪುತ್ಥಳಿಗೆ, ಜಿಲ್ಲಾ ಪಂಚಾಯಿತಿ ಆವರಣದಲ್ಲಿರುವ ವೀರ ಸಂಗೊಳ್ಳಿ ರಾಯಣ್ಣ ಪುತ್ಥಳಿಗೆ, ಶಿವಾಜಿ ಗಾರ್ಡನ್ ನಲ್ಲಿರುವ ಛತ್ರಪತಿ ಶಿವಾಜಿ ಮಹಾರಾಜರ ಪುತ್ಥಳಿಗೆ, ಬಸವೇಶ್ವರ ವೃತ್ತದಲ್ಲಿರುವ ಬಸವೇಶ್ವರರ ಪುತ್ಥಳಿಗೆ ಹಾಗೂ ಹಿಂಡಲಗಾ ಗಣಪತಿ ಮಂದಿರದ ಸಮೀಪವಿರುವ ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿಯವರ ಪುತ್ಥಳಿಗೆ ಮಾಲಾರ್ಪಣೆ ಮಾಡಲಿದ್ದಾರೆ.

ಡಿಸೆಂಬರ್ 10ರಂದು ನಡೆದ ವಿಧಾನ ಪರಿಷತ್ ಚುನಾವಣೆಯಲ್ಲಿ ಭಾರಿ ಬಹುಮತದಿಂದ ಆಯ್ಕೆಯಾಗಿರುವ ಚನ್ನರಾಜ ಹಟ್ಟಿಹೊಳಿ ಅವರು ಜನೆವರಿ 6ರಂದು ವಿಧಾನಪರಿಷತ್ ಸಭಾಭವನದಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ


Gadi Kannadiga

Leave a Reply