This is the title of the web page
This is the title of the web page

Please assign a menu to the primary menu location under menu

Local News

ಮಹಿಳೆಯರಿಗೆ ಗೌರವ ಕೊಡದೇ ಯಾವ ದೇವಸ್ಥಾನಕ್ಕೆ ಹೋದ್ರೂ ದೇವರು ಒಲಿಯಲ್ಲ : ಹುಕ್ಕೇರಿ ಮಠದ ಸ್ವಾಮೀಜಿ


ಚಿಕ್ಕೋಡಿ: ಮಹಿಳೆಯರಿಗೆ ಗೌರವ ಕೊಡದೇ ಯಾವ ದೇವಸ್ಥಾನಕ್ಕೆ ಹೋದ್ರೂ ದೇವರು ಒಲಿಯಲ್ಲ ಎಂದು ಹುಕ್ಕೇರಿ ಹಿರೇಮಠದ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಹೇಳಿದರು.

ಪ್ರತಿವರ್ಷ ಅದ್ಧೂರಿಯಾಗಿ ಹುಕ್ಕೇರಿಯಲ್ಲಿ ನಡೆಯುತ್ತಿದ್ದ ಹಿರೇಮಠದ ದಸರಾ ಉತ್ಸವ ಈ ಬಾರಿ ಸರಳವಾಗಿ ಆಚರಣೆ ಮಾಡಲು ನಿರ್ಧರಿಸಲಾಗಿದೆ.

ಈ ಹಿನ್ನೆಲೆಯಲ್ಲಿ ಇಂದು ಸರಳಾ ದಸರಾ ಉತ್ಸವಕ್ಕೆ ಚಾಲನೆ ನೀಡಿ ಮಾತನಾಡಿದ ಶ್ರೀಗಳು, 9 ದಿನಗಳ ಕಾಲ ನಡೆಯುತ್ತಿದ್ದ ಹಿರೇಮಠ ದಸರಾ ಉತ್ಸವವನ್ನು ಕ್ಷೇತ್ರದ ಶಾಸಕ ಹಾಗೂ ಹಿರಿಯ ಸಚಿವ ಉಮೇಶ್ ಕತ್ತಿ ನಿಧನದಿಂದ ಸರಳವಾಗಿ ಆಚರಣೆ ನಡೆಸಲು ನಿರ್ಧರಿಸಲಾಗಿದೆ.

ಪ್ರತಿವರ್ಷ ಒರ್ವ ಸಾಧಕರ ಸಾಧನೆಯನ್ನು ಗುರುತಿಸಿ ಅವರಿಗೆ ಶ್ರೀಮಠದಿಂದ ರೇಣುಕಶ್ರೀ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿತ್ತು.

ಆದರೆ ಈ ಬಾರಿ ಉಮೇಶ್ ಕತ್ತಿಯವರ ಅಕಾಲಿಕ ನಿಧನದಿಂದ ಸರಳವಾಗಿ ದಸರಾ ಆಚರಣೆ ಮಾಡಲು ನಿರ್ಧರಿಸಲಾಗಿದೆ ಹಾಗೂ ಲೋಕ ಕಲ್ಯಾಣಕ್ಕಾಗಿ 9 ದಿನಗಳ ಕಾಲ ಚಂಡಿಕಾ ಯಾಗ ಮಾಡಲಾಗುತ್ತೀದೆ ಎಂದರು.


Gadi Kannadiga

Leave a Reply