This is the title of the web page
This is the title of the web page

Please assign a menu to the primary menu location under menu

Local News

ವಾಯವ್ಯ ಶಿಕ್ಷಕರ/ಪದವೀಧರ ಕ್ಷೇತ್ರದ ಚುನಾವಣೆ-೨೦೨೨ ಜೂನ್ ೧೧ ರ ಸಂಜೆ ೫ ಗಂಟೆಗೆ ಬಹಿರಂಗ ಪ್ರಚಾರ ಅಂತ್ಯ: ಜಿಲ್ಲಾಧಿಕಾರಿ ನಿತೇಶ್ ಪಾಟೀಲ


ಬೆಳಗಾವಿ,ಜೂ.೯: ಕರ್ನಾಟಕ ವಿಧಾನ ಪರಿಷತ್ತಿನ ವಾಯವ್ಯ ಶಿಕ್ಷಕರ ಹಾಗೂ ವಾಯವ್ಯ ಪದವೀಧರ ಕ್ಷೇತ್ರದ ಚುನಾವಣೆಗೆ ಜೂನ್ ೧೩ ರಂದು ಮತದಾನ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಜೂನ್ ೧೧ ರ ಸಂಜೆ ೫ ಗಂಟೆಗೆ ಬಹಿರಂಗ ಪ್ರಚಾರ ಅಂತ್ಯಗೊಳ್ಳಲಿದೆ. ಪ್ರಜಾ ಪ್ರತಿನಿಧಿ ಕಾಯ್ದೆ ೧೯೫೧ ರ ಸೆಕ್ಷನ್ ೧೨೬ ರ ಪ್ರಕಾರ ಮತದಾನ ಮುಕ್ತಾಯವಾಗುವ ೪೮ ಗಂಟೆಗಳ ಮುನ್ನ ಸಾರ್ವಜನಿಕ ಸಭೆ, ಸಮಾ ರಂಭ ಹಾಗೂ ಬಹಿರಂಗ ಪ್ರಚಾರ ಚಟುವಟಿಕೆಗಳನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಗಳಾಗಿರುವ ನಿತೇಶ್ ಪಾಟೀಲ ತಿಳಿಸಿದ್ದಾರೆ.ಈ ಕುರಿತು ಆದೇಶ ಹೊರಡಿಸಿರುವ ಅವರು, ಜಿಲ್ಲೆಯಾದ್ಯಂತ ರ್ಯಾಲಿ, ಬಹಿರಂಗ ಸಭೆಗಳನ್ನು ಆಯೋಜಿಸುವುದು, ಉದ್ದೇಶಿಸಿ ಮಾತನಾಡುವುದನ್ನು ನಿಷೇಧಿಸ ಲಾಗಿದೆ.ಮತದಾರರ ಮೇಲೆ ಪ್ರಭಾವ ಬೀರುವಂತಹ ಯಾವುದೇ ಚಟುವಟಿಕೆಗಳನ್ನು ನಡೆಸಬಾರದು. ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಲ್ಪಟ್ಟಿರುವ ಅಧಿಕಾರಿ, ಸಿಬ್ಬಂದಿ ಹೊರತುಪಡಿಸಿ, ಇತರೆ ವ್ಯಕ್ತಿಗಳು ಒಂದೇ ಸ್ಥಳದಲ್ಲಿ ೫ ಕ್ಕಿಂತ ಹೆಚ್ಚು ಜನ ಸೇರುವುದನ್ನು ನಿರ್ಬಂಧಿಸಲಾಗಿದೆ. ಈ ಆದೇಶವು ಜೂನ್ ೧೧ ರ ಸಂಜೆ ೫ ಗಂಟೆಯಿಂದ ಜೂನ್ ೧೩ ರ ಮಧ್ಯರಾತ್ರಿಯವರೆಗೆ ಜಾರಿಯಲ್ಲಿರುತ್ತದೆ ಎಂದು ಜಿಲ್ಲಾಧಿಕಾರಿಗಳು ಆದೇಶದಲ್ಲಿ ವಿವರಿಸಿದ್ದಾರೆ.


Gadi Kannadiga

Leave a Reply