ಬೆಳಗಾವಿ: ಮಹಾನಗರ ಪಾಲಿಕೆ, ಪುರಸಭೆ, ನಗರಸಭೆಗಳ ಪಿಂಚಣಿದಾರರು/ಕುಟುಂಬ ಪಿಂಚಣಿದಾರರು ಆಯಾ ತಾಲೂಕಿನ ಉಪ ಖಜಾನೆಗಳಿಗೆ ಅಥವಾ ಜಿಲ್ಲಾ ಖಜಾನೆ ಏಪ್ರಿಲ್ 3ರೊಳಗಾಗಿ ಜೀವಿತ ಪ್ರಮಾಣ ಪತ್ರಗಳನ್ನು ಸಲ್ಲಿಸಬೇಕು.
ಒಂದುವೇಳೆ ನಿಗದಿತ ಅವಧಿಯಲ್ಲಿ ಜೀವಿತ ಪ್ರಮಾಣ ಪತ್ರವನ್ನು ಸಲ್ಲಿಸದೇ ಇದ್ದರೇ ಪಿಂಚಣಿ ಪಾವತಿಯನ್ನು ಸ್ಥಗಿತಗೊಳಿಸಲಾಗುವುದು ಎಂದು ಜಿಲ್ಲಾ ಖಜಾನೆ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.