ಬೆಳಗಾವಿ, ಆ.೩೦ : ಕೋಟ್ಟಾ-೨೦೦೩ ರ ಕಾಯ್ದೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ಉದ್ದೇಶದಿಂದ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಜಿಲ್ಲಾ ಮಟ್ಟದ ಸಮನ್ವಯ ಸಮಿತಿಯ ತ್ರೆöÊಮಾಸಿಕ ಸಭೆಯಲ್ಲಿ ನಿರ್ಣಯಿಸಿದಂತೆ ಸಾರ್ವಜನಿಕ ಆರೋಗ್ಯದ ಹಿತದೃಷ್ಟಿಯಿಂದ ಜಿಲ್ಲಾಧಿಕಾರಿಗಳ ಕಛೇರಿ, ತಹಶೀಲ್ದಾರ ಕಛೇರಿ, ಜಿಲ್ಲಾ ನ್ಯಾಯಲಯ, ತಾಲೂಕಾ ನ್ಯಾಯಲಯ ಹಾಗೂ ಸಾರ್ವಜನಿಕ ಆಸ್ಪತ್ರೆಯ ಆವರಣದಿಂದ ೧೦೦ ಮೀಟರ ಅಂತರದಲ್ಲಿ ತಂಬಾಕು ಉತ್ಪನ್ನ ಹಾಗೂ ಮಾರಾಟ ನಿಷೇಧಗೊಳಿಸಲಾಗಿದೆ.
ಕಾರಣ ಸದರಿ ಕಛೇರಿಯ/ನ್ಯಾಯಲಯ ಆವರಣದ ೧೦೦ ಮೀ ಅ೦ತರದೊಳಗೆ ತಂಬಾಕು ಉತ್ಪನ್ನ ಮಾರಾಟ ಕಂಡು ಬಂದರೆ ಕಾನೂನು ಪ್ರಕಾರ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Gadi Kannadiga > Local News > ತಂಬಾಕು ಉತ್ಪನ್ನ ಮಾರಾಟ ಮಾಡದಂತೆ ಸೂಚನೆ
ತಂಬಾಕು ಉತ್ಪನ್ನ ಮಾರಾಟ ಮಾಡದಂತೆ ಸೂಚನೆ
Suresh30/08/2023
posted on