This is the title of the web page
This is the title of the web page

Please assign a menu to the primary menu location under menu

State

ಚುನಾವಣಾ ಪ್ರಚಾರದಲ್ಲಿ ಮಕ್ಕಳನ್ನು ಬಳಸಿಕೊಳ್ಳದಂತೆ ಸೂಚನೆ


ಕೊಪ್ಪಳ ಏಪ್ರಿಲ್ ೨೦ : ಮಕ್ಕಳಿಂದ ಚುನಾವಣಾ ಪ್ರಚಾರ ಮಾಡಿಸಿದ ಹಾಗೂ ಮಕ್ಕಳನ್ನು ಪ್ರಚಾರ ಕಾರ್ಯದಲ್ಲಿ ಬಳಸಿಕೊಂಡ ವಿವಿಧ ರಾಜಕೀಯ ಪಕ್ಷಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಆದ್ದರಿಂದ ವಿಧಾನಸಭಾ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ಚುನಾವಣಾ ಪ್ರಚಾರದಲ್ಲಿ ಮಕ್ಕಳನ್ನು ಬಳಸಿಕೊಳ್ಳದಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ಪದ್ಮಾವತಿ ಜಿ ಅವರು ತಿಳಿಸಿದ್ದಾರೆ.
ಭಾರತ ಸರಕಾರವು ವಿಶ್ವಸಂಸ್ಥೆಯು ಅನುಮೋದಿತ “ಮಕ್ಕಳ ಹಕ್ಕುಗಳ ಒಡಂಬಡಿಕೆಗೆ ೧೧ ಡಿಸೆಂಬರ ೧೯೯೨ರಲ್ಲಿ ಒಪ್ಪಿ ಅನುಮೋದಿಸಿರುತ್ತದೆ”. ಈ ಮಕ್ಕಳ ಹಕ್ಕುಗಳ ಒಡಂಬಡಿಕೆ ಹಾಗೂ ಮಕ್ಕಳ ನ್ಯಾಯ (ಮಕ್ಕಳ ಪೋಷಣೆ ಮತ್ತು ರಕ್ಷಣೆ ಕಾಯ್ದೆ)-೨೦೧೫ರನ್ವಯ ‘೧೮ ವರ್ಷದೊಳಗಿನ ಎಲ್ಲಾ ಮಾನವಜೀವಿಗಳು ಮಕ್ಕಳು ಎಂದು ಪರಿಗಣಿತವಾಗಿದೆ’.
ಮಕ್ಕಳ ಹಕ್ಕುಗಳ ಒಡಂಬಡಿಕೆಯ ಕಲಂ ೩೨ ಮತ್ತು ೩೬ರಲ್ಲಿ “ಮಕ್ಕಳ ಆರೋಗ್ಯ ಮತ್ತು ಶಿಕ್ಷಣಕ್ಕೆ ಅಪಾಯಕಾರಿಯಾದ ಕ್ಷೇತ್ರಗಳಲ್ಲಿ, ಮಕ್ಕಳು ಕಾರ್ಯನಿರ್ವಹಿಸದಂತೆ ಹಾಗೂ ಮಕ್ಕಳ ಬೆಳವಣೆಗೆಗೆ ತೊಡಕನ್ನುಂಟು ಮಾಡುವ ಯಾವುದೇ ಚಟುವಟಿಕೆಯಲ್ಲಿ ಮಕ್ಕಳು ಭಾಗವಹಿಸದಂತೆ ಸೂಕ್ತ ಕ್ರಮಗಳನ್ನು ಕೈಗೊಳ್ಳಲು ನಿರ್ದೇಶಿಸಿರುತ್ತದೆ”.
ಅಧ್ಯಕ್ಷರು, ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ನವದೆಹಲಿ ರವರು ‘ಚುನಾವಣಾ ಕಾರ್ಯಗಳಲ್ಲಿ ಮತ್ತು ಯಾವುದೇ ಪಕ್ಷಗಳು ತಮ್ಮ ಚುನಾವಣಾ ಪ್ರಚಾರ ಕಾರ್ಯದಲ್ಲಿ ೧೮ ವರ್ಷದೊಳಗಿನ ಮಕ್ಕಳನ್ನು ಬಳಸಿಕೊಳ್ಳದಂತೆ ಅಗತ್ಯ ಸೂಕ್ತ ಕ್ರಮಗಳನ್ನು ಕೈಗೊಳ್ಳಲು ಕೋರಿದ್ದು, ಚುನಾವಣಾಧಿಕಾರಿಗಳು, ಮುಖ್ಯ ಚುನಾವಣಾಧಿಕಾರಿಗಳ ಕಾರ್ಯಾಲಯ, ನವದೆಹಲಿರವರು, ಈ ಕುರಿತು ಸೂಕ್ತ ಕ್ರಮಗಳನ್ನು ಕೈಗೊಳ್ಳಲು ಸೂಚಿಸಿರುತ್ತಾರೆ. ಅಧ್ಯಕ್ಷರು, ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ಬೆಂಗಳೂರುರವರು ಬೇಸಿಗೆ ರಜೆಗಳು ಪ್ರಾರಂಭವಾಗಿದ್ದು, ಅಲ್ಲದೇ ರಾಜ್ಯದಲ್ಲಿ ಬಿಸಿಲಿನ ಪ್ರಖರತೆ ಹೆಚ್ಚಾಗಿರುವದರಿಂದಾಗಿ, ಮಕ್ಕಳನ್ನು ಚುನಾವಣಾ ಪ್ರಚಾರ ಕಾರ್ಯದಲ್ಲಿ ಬಳಸಿಕೊಂಡು, ಮಕ್ಕಳನ್ನು ಶೋಷಿಸುವದನ್ನು ತಡೆಗಟ್ಟುವಂತೆ ಕೋರಿರುತ್ತಾರೆ.
ಈ ಎಲ್ಲಾ ಕಾರಣದಿಂದಾಗಿ ಬಾಲ ಕಾರ್ಮಿಕ ಪದ್ಧತಿ ನಿಷೇಧ-೧೯೮೬ ಮತ್ತು ಹದಿ ಹರೆಯದ ಮಕ್ಕಳ ದುಡಿಮೆ ನಿಯಂತ್ರಣ ತಿದ್ದುಪಡಿ ಕಾಯ್ದೆ-೨೦೧೬ ಕಾಯ್ದೆಯನ್ವಯ ೧೪ ವರ್ಷದೊಳಗಿನ ಮಕ್ಕಳು ಯಾವುದೇ ದುಡಿಮೆ ಕಾರ್ಯದಲ್ಲಿ ಅಥವಾ ದುಡಿಮೆ ಚಟುವಟಿಕೆಗಳಲ್ಲಿ ಮಕ್ಕಳನ್ನು ಬಳಸಿಕೊಳ್ಳುವದನ್ನು ನಿಷೇಧಿಸಿದೆ ಮತ್ತು ೧೮ ವರ್ಷದೊಳಗಿನ ಮಕ್ಕಳು ಅಪಾಯಕಾರಿ ಕ್ಷೇತ್ರಗಳಲ್ಲಿ ಕಾರ್ಯನಿರ್ವಹಿಸುವದನ್ನು ನಿಷೇಧಿಸಿಲಾಗಿದೆ.
ಚುನಾವಣಾ ಕಾರ್ಯದಲ್ಲಿ ೧೮ ವರ್ಷದೊಳಗಿನ ಮಕ್ಕಳನ್ನು ಬಳಕೆ ಮಾಡುವಂತಿಲ್ಲ ಎಂದು ಏಪ್ರಿಲ್ ೧೨ರಂದು ಜಿಲ್ಲಾಧಿಕಾರಿಗಳು ಪತ್ರಿಕಾ ಪ್ರಕಟಣೆಯನ್ನು ಹೊರಡಿಸಿರುತ್ತಾರೆ. ಅದಾಗ್ಯೂ ವಿವಿಧ ರಾಜಕೀಯ ಪಕ್ಷಗಳು ತಮ್ಮ ಚುನಾವಣಾ ಪ್ರಚಾರ ಕಾರ್ಯದಲ್ಲಿ ಮಕ್ಕಳನ್ನು ಬಳಸಿದ್ದು ಕಂಡುಬಂದಿದ್ದರಿಂದಾಗಿ ಗಂಗಾವತಿ ನಗರ ಪೊಲೀಸ್ ಠಾಣೆಯಲ್ಲಿ ಏಪ್ರಿಲ್ ೧೯ರಂದು ಎಫ್.ಐ.ಆರ್ ೭೬/೨೦೨೩, ೭೭/೨೦೨೩, ೭೮/೨೦೨೩ ಮತ್ತು ೭೯/೨೦೨೩ ರಲ್ಲಿ ಒಟ್ಟು ನಾಲ್ಕು ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ಎಂದು ಪ್ರಕಟಣೆ ತಿಳಿಸಿದೆ.


Leave a Reply