ಕೊಪ್ಪಳ ಏಪ್ರಿಲ್ ೨೭ : ಭಾರತ ಚುನಾವಣಾ ಆಯೋಗವು ಮೇ.೧೦ರಂದು ಮತದಾನ ನಿಗದಿಪಡಿಸಿದೆ. ಈ ದಿನದಂದು ರಾಜ್ಯಾದ್ಯಂತ ಎಲ್ಲಾ ಕಾರ್ಖಾನೆಗಳು, ಅಂಗಡಿಗಳು, ವಾಣಿಜ್ಯ ಸಂಸ್ಥೆಗಳು ಹಾಗೂ ಇತರೆ ಸಂಸ್ಥೆಗಳಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ೧೯೫೧ರ ಪ್ರಜಾ ಪ್ರತಿನಿಧಿ ಕಾಯ್ದೆ ಸೆಕ್ಷನ್ ೧೩೫(ಬಿ) ರಡಿ ಹಾಗೂ ಕೈಗಾರಿಕಾ ಸಂಸ್ಥೆಗಳ (ರಾಷ್ಟ್ರೀಯ ಮತ್ತು ಹಬ್ಬದ ರಜೆಗಳು) ಕಾಯ್ದೆ-೧೯೬೩ ಕಲಂ ೩(ಎ) ರನ್ವಯ ಅರ್ಹ ಮತದಾರರಿಗೆ ವೇತನ ಸಹಿತ ರಜೆ ಘೋಷಿಸಿ ಸಂವಿಧಾನಾತ್ಮಕ ಹಕ್ಕಾದ ಮತವನ್ನು ಚಲಾಯಿಸುವುದಕ್ಕಾಗಿ ಎಲ್ಲಾ ಮಾಲೀಕರು/ ನಿಯೋಜಕರು ಅನುವು ಮಾಡಿ ಕೊಡಬೇಕಾಗಿರುತ್ತದೆ. ಆದ್ದರಿಂದ ಚುನಾವಣೆ ನಡೆಯುವ ಕ್ಷೇತ್ರಗಳ ವ್ಯಾಪ್ತಿಯ ಎಲ್ಲಾ ಕಾರ್ಖಾನೆಗಳು ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳ ಮಾಲೀಕರು ಸದರಿ ದಿನದಂದು ಕಾಯ್ದೆಯನ್ವಯ ಅರ್ಹ ಕಾರ್ಮಿಕರು ಮತದಾನ ಮಾಡಲು ಅನುಕೂಲವಾಗುವಂತೆ ವೇತನ ಸಹಿತ ರಜೆ ನೀಡುವಂತೆ ಈ ಮೂಲಕ ತಿಳಿಸಲಾಗಿದೆ. ತಪ್ಪಿದ್ದಲ್ಲಿ ಸಂಬಂಧಪಟ್ಟ ಸಂಸ್ಥೆ ನಿಯೋಜಕರ ವಿರುದ್ಧ ನಿಯಮಾನುಸಾರಿ ಕಾನೂನು ಕ್ರಮ ಜರುಗಿಸಲಾಗುವುದೆಂದು ಕೊಪ್ಪಳ ಉಪ ವಿಭಾಗದ ಕಾರ್ಮಿಕ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Gadi Kannadiga > State > ಮತದಾನ ಮಾಡುವುದಕ್ಕಾಗಿ ಅರ್ಹ ಕಾರ್ಮಿಕರಿಗೆ ವೇತನ ಸಹಿ ರಜೆ ನೀಡಲು ಸೂಚನೆ
ಮತದಾನ ಮಾಡುವುದಕ್ಕಾಗಿ ಅರ್ಹ ಕಾರ್ಮಿಕರಿಗೆ ವೇತನ ಸಹಿ ರಜೆ ನೀಡಲು ಸೂಚನೆ
Suresh27/04/2023
posted on
More important news
ಬೀಟ್ ಮೀಟಿಂಗ್
29/05/2023
ಸಚಿವ ಎಚ್.ಕೆ.ಪಾಟೀಲ ಅವರ ಜಿಲ್ಲಾ ಪ್ರವಾಸ
29/05/2023
ಶ್ರೀ ಯಾಜ್ಞವಲ್ಕö್ಯ ಗುರುಗಳ ಜಯಂತಿ
29/05/2023
ಅಧಿಕಾರ ಸ್ವೀಕಾರ
29/05/2023