ಕೊಪ್ಪಳ ಮೇ ೦೨: ಭಾಗ್ಯನಗರ ಪಟ್ಟಣ ಪಂಚಾಯತಿ ವ್ಯಾಪ್ತಿಯಲ್ಲಿನ ಪ್ರತಿಯೊಬ್ಬ ಉದ್ದಿಮೆದಾರರು ಪುರಸಭೆ ಅಧಿನಿಯಮ ೧೯೬೪ರ ಕಲಂ ೨೫೬ರಡಿ ಉದ್ದಿಮೆ ಪರವಾನಿಗೆ ಪಡೆಯುವುದು ಕಡ್ಡಾಯವಾಗಿದೆ. ಸನ್ ೨೦೨೩-೨೪ನೇ ಸಾಲಿನ ಉದ್ದಿಮೆ ಪರವಾನಿಗೆಯನ್ನು ಪಡೆಯಬೇಕು ಮತ್ತು ಪ್ರತಿವರ್ಷ ಪರವಾನಿಗೆಯನ್ನು ನವೀಕರಣ ಮಾಡಿಸಿಕೊಳ್ಳಬೇಕು. ಅದರೊಂದಿಗೆ ನೀರಿನ ಕರ, ಆಸ್ತಿ ತೆರಿಗೆಯನ್ನು ಕಡ್ಡಾಯವಾಗಿ ಭರಿಸಬೇಕು. ತಪ್ಪಿದ್ದಲ್ಲಿ, ಕಾನೂನು ಕ್ರಮ ಕೈಗೊಳ್ಳಲಾಗುವುದು ಹಾಗೂ ನ್ಯಾಯಾಲಯದಲ್ಲಿ ದಾವೆ ಹೂಡಲಾಗುವುದೇಂದು ಪ.ಪಂ ಕಾರ್ಯಾಲಯದ ಪ್ರಕಟಣೆ ತಿಳಿಸಿದೆ.
Gadi Kannadiga > State > ಉದ್ದಿಮೆ ಪರವಾನಿಗೆ ಪಡೆಯಲು ಸೂಚನೆ