ಕೊಪ್ಪಳ, ನವೆಂಬರ್ ೨೪ : ಕರ್ನಾಟಕ ಸಹಕಾರ ಸಂಘಗಳ ನಿಯಮಗಳು ೧೯೬೦ ನಿಯಮ ೨೯-ಬಿ(೮) ಹಾಗೂ ಕರ್ನಾಟಕ ಸೌಹಾರ್ದ ಸಹಕಾರಿ ನಿಯಮಗಳು ೨೦೦೪ ನಿಯಮ ೮-ಬಿ (೮) ಅನ್ವಯ ಲೆಕ್ಕಪರಿಶೋಧಕರ ನೇಮಕಾತಿ ಮಾಡಿಕೊಂಡಿರುವ ಬಗ್ಗೆ ಸಹಕಾರ ಸಂಘಗಳ ಲೆಕ್ಕಪರಿಶೋಧನಾ ಇಲಾಖೆಯ ಕೊಪ್ಪಳ ಜಿಲ್ಲಾ ಉಪ ನಿರ್ದೇಶಕರ ಕಛೇರಿಗೆ ಮಾಹಿತಿಯನ್ನು ಕಡ್ಡಾಯವಾಗಿ ಸಲ್ಲಿಸಬೇಕು ಎಂದು ಜಿಲ್ಲಾ ಸಹಕಾರ ಸಂಘಗಳ ಲೆಕ್ಕಪರಿಶೋಧನಾ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.
ಜಿಲ್ಲೆಯ ಬಹಳಷ್ಟು ಸಹಕಾರ ಸಂಘಗಳ ಮತ್ತು ಸೌಹಾರ್ದ ಸಹಕಾರಿಗಳ ಆಡಳಿತ ಮಂಡಳಿಗಳು ಇಲ್ಲಿಯವರೆಗೆ ಲೆಕ್ಕಪರಿಶೋಧಕರ ನೇಮಕಾತಿ ಬಗ್ಗೆ ಕಛೇರಿಗೆ ಮಾಹಿತಿ ಸಲ್ಲಿಸಿರುವುದಿಲ್ಲ. ಹಾಗಾಗಿ, ಸನ್ ೨೦೨೨-೨೩ ನೇ ಸಾಲಿನ ಲೆಕ್ಕಪರಿಶೋಧನೆಗಾಗಿ ವಾರ್ಷಿಕ ಮಹಾಸಭೆಯಲ್ಲಿ ಲೆಕ್ಕಪರಿಶೋಧಕರ ನೇಮಕಾತಿ ಮಾಡಿಕೊಂಡಿರುವ ಬಗ್ಗೆ ಮುಂದಿನ ೦೭ ದಿನಗಳ ಒಳಗಾಗಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಹಾಗೂ ಅಧ್ಯಕ್ಷರ ರುಜುವಿನೊಂದಿಗೆ ವಾರ್ಷಿಕ ಮಹಾಸಭೆಯ ನಡವಳಿಯೊಂದಿಗೆ ಮಾಹಿತಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ದೂ.ಸಂ: ೦೮೫೩೯-೨೨೨೩೨೧ ಗೆ ಸಂಪರ್ಕಿಸಬಹುದು ಎಂದು ಕೊಪ್ಪಳ ಸಹಕಾರ ಸಂಘಗಳ ಲೆಕ್ಕಪರಿಶೋಧನಾ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Gadi Kannadiga > State > ಲೆಕ್ಕ ಪರಿಶೋಧಕರ ನೇಮಕಾತಿ ಮಾಹಿತಿ ಸಲ್ಲಿಸಲು ಸೂಚನೆ