This is the title of the web page
This is the title of the web page

Please assign a menu to the primary menu location under menu

Local News


ದೆಹಲಿ: ರಾಷ್ಟ್ರೀಯ ತನಿಖಾ ಸಂಸ್ಥೆ ಬೆಳ್ಳಂಬೆಳಗ್ಗೆ ದೇಶದ ಹಲವು ರಾಜ್ಯಗಳಲ್ಲಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಸಂಸ್ಥೆಗೆ ಸಂಬಂಧಿಸಿದ ನಿವೇಶನಗಳ ಹಾಗೂ ಮುಖಂಡರ ಮನೆಗಳ ಮೇಲೆ ದಾಳಿ ನಡೆಸಿ 100 ಜನರನ್ನು ಪೊಲೀಸ್ ವಶಕ್ಕೆ ಪಡೆಯಲಾಗಿದೆ.

ಹಿಂದೂ ಸಂಘಟನೆ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣವನ್ನು ​ಎನ್ಐಎ ತನಿಖೆ ನಡೆಸುತ್ತಿದೆ. ಇದಕ್ಕಾಗಿ ಮಂಗಳೂರಿನ ಸ್ಥಳೀಯ ಪೊಲೀಸರು ಸಹ ರಸ್ತೆಯಲ್ಲಿ ಉಪಸ್ಥಿತರಿದ್ದು, ಭದ್ರತೆ ಒದಗಿಸಿದ್ದಾರೆ.

ಈ ವೇಳೆ ಗೋ ಬ್ಯಾಕ್ ಎನ್‌ಐಎ ಎಂದು ಪಿಎಫ್‌ಐ ಕಾರ್ಯಕರ್ತರು ಘೋಷಣೆ ಕೂಗಿ ಪ್ರತಿಭಟನೆ ನಡೆಸಿದ್ದು, ಎನ್‌ಐಎ ದಾಳಿ ಹಿನ್ನಲೆಯಲ್ಲಿ ಪೊಲೀಸರು ಬಿಗಿ ಭದ್ರತೆ ಕೈಗೊಂಡಿದ್ದಾರೆ. ಪ್ರತಿಭಟನೆ ನಡೆಸಿ ಹೈಡ್ರಾಮಾ ಮಾಡಿದ ಹಲವು ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.


Gadi Kannadiga

Leave a Reply