This is the title of the web page
This is the title of the web page

Please assign a menu to the primary menu location under menu

State

ರಾಷ್ಟ್ರೀಯ ಲೋಕ್ ಅದಾಲತ್ : ಪೂರ್ವಬಾವಿ ಸಭೆ ಸೆ. ೩೧ ರೊಳಗೆ ರಾಜಿಯಾಗದ ಪ್ರಕರಣಗಳ ಮಾಹಿತಿ ಸಲ್ಲಿಸಿ : ನ್ಯಾ. ದೇವೇಂದ್ರ ಪಂಡಿತ್


ಕೊಪ್ಪಳ, ಸೆ.೧೯ : ನಿಮ್ಮ ಇಲಾಖೆಯಲ್ಲಿ ಇತ್ಯರ್ಥವಾಗದ ಮತ್ತು ವ್ಯಾಜ್ಯ ಪೂರ್ವ ಪ್ರಕರಣಗಳ ಮಾಹಿತಿಯನ್ನು ಇದೆ ತಿಂಗಳ (ಸೆ.೩೧) ಅಂತ್ಯದೊಳಗೆ ಕಾನೂನು ಸೇವಾ ಪ್ರಾಧಿಕಾರಕ್ಕೆ ಸಲ್ಲಿಸಿ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ದೇವೇಂದ್ರ ಪಂಡಿತ್ ಅವರು ಸಂಬಂದಿಸಿದ ಅಧಿಕಾರಿಗಳಿಗೆ ಅವರು ತಿಳಿಸಿದರು.
ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ವತಿಯಿಂದ ರಾಷ್ಟ್ರೀಯ ಲೋಕ್ ಅದಾಲತ್ ಕುರಿತು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಕಚೇರಿಯಲ್ಲಿ ಸೋಮವಾರದಂದು ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಹಮ್ಮಿಕೊಂಡಿದ್ದ ಪೂರ್ವಬಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ರಾಜೀ ಆಗಬಹುದಾದ ಎಲ್ಲಾ ತರಹದ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಲು ನವಂಬರ್೧೨ ರಂದು “ರಾಷ್ಟ್ರೀಯ ಲೋಕ್ ಅದಾಲತ್” ಕಾರ್ಯಕ್ರಮವನ್ನು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರವು ಆಯೋಜಿಸಲಾಗಿದ್ದು ನಿಮ್ಮ ಇಲಾಖೆಯಲ್ಲಿನ ಇತ್ಯಥ್ವಾಗದೆ ಹಲವು ದಿನಗಳಿಂದ ಉಳಿದುಕೊಂಡಿರುವ ಪ್ರಕರಣಗಳನ್ನು ಈ ಬಾರಿ ನಡೆಯಲಿರುವ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ಪರಿಹರಿಕೊಳ್ಳುವಂತೆ ಸಲಹೇ ನೀಡಿದರು.
ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ಶೀಘ್ರ ಮತ್ತು ಉಚಿತ ಪರಿಹಾರವಾಗುವ ಸಿ.ಆರ್.ಪಿ.ಸಿ. ೩೨೦ ಕಾಯ್ದೆಯಡಿ ಬರುವ ರಾಜೀ ಆಗಬಹುದಾದ ಎಲ್ಲಾ ತರಹದ ಪ್ರಕರಣಗಳನ್ನು ಇತ್ಯರ್ಥಪಡಿಸಲಾಗುವುದು. ಈ ನಿಟ್ಟಿನಲ್ಲಿ ಮುಂಬರುವ ನವಂಬರ್ ೧೨ ರಂದು ರಾಜ್ಯಾದ್ಯಂತ ರಾಷ್ಟ್ರೀಯ ಲೋಕ್ ಅದಾಲತ್ ನಡೆಯಲಿದ್ದು, ಇದರ ಭಾಗವಾಗಿ ಜಿಲ್ಲೆಯಾದ್ಯಂತವೂ ಸಹ ರಾಷ್ಟ್ರೀಯ ಲೋಕ್ ಅದಾಲತ್ ಜರುಗಲಿದೆ. ಜಿಲ್ಲೆಯ ಸಾರ್ವಜನಿಕರು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಲು ಸಂಬಂಧಿಸಿದ ಎಲ್ಲಾ ಇಲಾಖೆಯ ಅಧಿಕಾರಿಗಳು ಸಹಕರಿಸಬೇಕು ಈ ಕುರಿತು ನಿಮ್ಮ ಇಲಾಖಾವಾರು ಸಾರ್ವಜನಿಕರಿಗೆ ಮಾಹಿತಿ ನೀಡಿ ಎಂದು ಹೇಳಿದರು.
ರಾಷ್ಟ್ರೀಯ ಲೋಕ್ ಅದಾಲತ್ ನಲ್ಲಿ ಪ್ರಕರಣಗಳು ಇತ್ಯರ್ಥವಾಗುವುದಲ್ಲದೇ ಸರ್ಕಾರದ ಖಜಾನೆಗೂ ಹಣ ಬರುತ್ತದೆ. ಸಾರ್ವಜನಿಕರಿಗೂ ಸಮಯ ಹಾಗೂ ಹಣದ ಉಳಿತಾಯವಾಗುತ್ತದೆ. ಕಳೆದ ಜುಲೈ ಮಾಹೆಯಲ್ಲಿ ರಾಷ್ಟ್ರೀಯ ಲೋಕ್ ಅದಾಲತ್ ಕಾರ್ಯಕ್ರಮದಲ್ಲಿ ರಾಜ್ಯಾದ್ಯಾಂತ ೮ ಲಕ್ಷ ಹಾಗೂ ನಮ್ಮ ಜಿಲ್ಲೆಯಲ್ಲಿ ೧೧,೪೪೧ ಪ್ರಕರಣಗಳನ್ನು ಇತ್ಯರ್ಥವಾಗಿವೆ. ನವಂಬರ್ ೧೨ ರಂದು ಜಿಲ್ಲೆಯಾದ್ಯಂತ ನಡೆಯುವ ರಾಷ್ಟ್ರೀಯ ಲೋಕ್ ಅದಾಲತ್ ಕಾರ್ಯಕ್ರಮದಲ್ಲಿ ಹೆಚ್ಚಿನ ಪ್ರಕರಣಗಳ ಇತ್ಯರ್ಥಕ್ಕೆ ಕೈ ಜೋಡಿಸುವುದಲ್ಲದೇ ಈ ಕಾರ್ಯಕ್ರಮದ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ನಗರ ಸ್ಥಳೀಯ ಸಂಸ್ಥೆಗಳು ತಮ್ಮ ವಾಹನಗಳ ಮೂಲಕ ಇನ್ನೂ ಹೆಚ್ಚು ಪ್ರಚಾರ ಮಾಡಿ, ರಾಜೀ ಆಗಬಹುದಾದ ಎಲ್ಲಾ ತರಹದ ಪ್ರಕರಣಗಳನ್ನು ಬಾಕಿ ಉಳಿಸದೆ ಇತ್ಯರ್ಥಪಡಿಸಲು ಸಹಕರಿಸಬೇಕು ಎಂದರು.
ಸಭೆಯಲ್ಲಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಅಬಕಾರಿ, ಕಂದಾಯ, ಗಣಿ ಮತ್ತು ಭೂ ವಿಜ್ಞಾನ, ನಗರಸಭೆ, ಕಾರ್ಮಿಕ ಇಲಾಖೆ, ಕೆಎಸ್‌ಆರ್‌ಟಿಸಿ ಸೇರಿದಂತೆ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ ಪಾಲ್ಗೊಂಡಿದ್ದರು.


Gadi Kannadiga

Leave a Reply