This is the title of the web page
This is the title of the web page

Please assign a menu to the primary menu location under menu

State

ತುಂಗಭದ್ರಾ ಜಲಾಶಯಕ್ಕೆ ಬಾಗಿನ ಅರ್ಪಣೆ


 

ಕೊಪ್ಪಳ/ವಿಜಯನಗರ/ಬಳ್ಳಾರಿ :- ಸತತ ಸುರಿಯುತ್ತಿರುವ ಮಳೆಯಿಂದಾಗಿ ಜಲಾಶಯಕ್ಕೆ ನೀರು ಬಂದು ಜಲಾಶಯ ಸಂಪೂರ್ಣ ಭರ್ತಿಯಾದ ಹಿನ್ನೆಲೆಯಲ್ಲಿ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಪ್ರವಾಸೋದ್ಯಮ ಹಾಗೂ ಪರಿಸರ ಇಲಾಖೆ ಸಚಿವರಾದ ಆನಂದ್ ಸಿಂಗ್, ತುಂಗಭದ್ರಾ ಜಲಾಶಯಕ್ಕೆ ಪೂಜೆ ಸಲ್ಲಿಸಿ ಬಾಗಿನ ಅರ್ಪಿಸಲಿದ್ದಾರೆ. ಈ ಕಾರ್ಯಕ್ರಮಕ್ಕೆ ಜಲಸಂಪನ್ಮೂಲ ಸಚಿವರಾದ ಗೋವಿಂದ ಕಾರಜೋಳ, ಮುಜರಾಯಿ ಇಲಾಖೆ ಸಚಿವರಾದ ಶ್ರೀಮತಿ ಶಶಿಕಲಾ ಅಣ್ಣ ಸಾಹೇಬ್ ಜೊಲ್ಲೆ, ಸಾರಿಗೆ ಸಚಿವರು ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರು ಆದ ಬಿ. ಶ್ರೀರಾಮುಲು. ಕೈಮಗ್ಗ ಮತ್ತು ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಖಾತೆ ಸಚಿವರು ಹಾಗೂ ರಾಯಚೂರು ,ಬೀದರ್ ಜಿಲ್ಲಾ ಉಸ್ತುವಾರಿ ಸಚಿವರಾದ ಶಂಕರ್ ಬಿ ಪಾಟೀಲ್ ಮುನಿಯನ್ಕೊಪ್ಪ. ಗಣಿ ಮತ್ತು ಭೂ ವಿಜ್ಞಾನ ಇಲಾಖೆ,ಮತ್ತು ಮಹಿಳಾ ಹಾಗೂ ಮಕ್ಕಳ ಕಲ್ಯಾಣ ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಹಾಲಪ್ಪ ಆಚಾರ್. ಸೇರಿದಂತೆ ಕೊಪ್ಪಳ. ರಾಯಚೂರು ಬಳ್ಳಾರಿ ಜಿಲ್ಲೆಗಳ ಸಂಸದರು,ಶಾಸಕರುಗಳು ಸೇರಿದಂತೆ ತುಂಗಭದ್ರಾ ಜಲಾಶಯದ ಇಲಾಖೆ ಅಧಿಕಾರಿಗಳು ಉಪಸ್ಥಿತರಿರುವರು.

ಆರ್ ಶರಣಪ್ಪ ಗುಮಗೇರಾ
ಕೊಪ್ಪಳ


Gadi Kannadiga

Leave a Reply