ಕೊಪ್ಪಳ ಡಿಸೆಂಬರ್ ೩೧ : ಕೊಪ್ಪಳ ಜೆಸ್ಕಾಂನಿಂದ ಇ.ಎಚ್.ಟಿ/ಹೆಚ್.ಟಿ ವಿದ್ಯುತ್ ಗ್ರಾಹಕರ ಕುಂದು ಕೊರತೆಗಳ ಸಭೆಯನ್ನು ೨೦೨೩ರ ಜನವರಿ ೦೩ ರಂದು ಬೆಳಗ್ಗೆ ೧೦.೩೦ ಗಂಟೆಗೆ ನಗರದ ಕಾರ್ಯ ಮತ್ತು ಪಾಲನಾ ವಿಭಾಗ ಕಚೇರಿಯಲ್ಲಿ ಆಯೋಜಿಸಲಾಗಿದೆ.
ಜಿಲ್ಲೆಯ ಕೊಪ್ಪಳ ಮತ್ತು ಗಂಗಾವತಿ ವಿಭಾಗ ವ್ಯಾಪ್ತಿಯಲ್ಲಿ ಬರುವ ಇ.ಎಚ್.ಟಿ/ಹೆಚ್.ಟಿ ವಿದ್ಯುತ್ ಗ್ರಾಹಕರ ಕುಂದು ಕೊರತೆಗಳನ್ನು ನಿವಾರಿಸುವ ನಿಟ್ಟಿನಲ್ಲಿ.ಚೆಸ್ಕಾಂ ಕಾರ್ಯ ಮತ್ತು ಪಾಲನಾ ಬಳ್ಳಾರಿ ವಲಯ ಕಛೇರಿಯ ಮುಖ್ಯ ಅಭಿಯಂತರರು(ವಿ) ಇರವರ ಅಧ್ಯಕ್ಷತೆಯಲ್ಲಿ ಸಭೆಯನ್ನು ಜನವರಿ ೦೩ ರಂದು ಬೆಳಗ್ಗೆ ೧೦.೩೦ ಗಂಟೆಗೆ ಕಾರ್ಯ ಮತ್ತು ಪಾಲನಾ ವಿಭಾಗ ಕಛೇರಿ, ಗು.ವಿ.ಸ.ಕಂ.ನಿ, ಕೊಪ್ಪಳದಲ್ಲಿ ನಿಗದಿಪಡಿಸಲಾಗಿದೆ.
ಆದಕಾರಣ ಕೊಪ್ಪಳ ಜಿಲ್ಲೆ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಇಹೆಚ್.ಟಿ/ಹೆಚ್.ಟಿ ವಿದ್ಯುತ್ ಗ್ರಾಹಕರು ಈ ಸಭೆಗೆ ಹಾಜರಾಗಬೇಕು ಎಂದು ಜೆಸ್ಕಾಂ ಕಾರ್ಯ ಮತ್ತು ಪಾಲನಾ ಕೊಪ್ಪಳ ವೃತ್ತದ ಅಧೀಕ್ಷಕ ಅಭಿಯಂತರರು(ವಿ) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Gadi Kannadiga > State > ಜನವರಿ ೦೩ ರಂದು ಕೊಪ್ಪಳದಲ್ಲಿ ವಿದ್ಯುತ್ ಗ್ರಾಹಕರ ಕುಂದು ಕೊರತೆಗಳ ಸಭೆ