ಗದಗ ಫೆಬ್ರುವರಿ ೪: ಜಿಲ್ಲೆಯಲ್ಲಿ ಫೆಬ್ರುವರಿ ೧೧ ರಂದು ರಾಷ್ಟ್ರೀಯ ಲೋಕ ಅದಾಲತ್ ಹಮ್ಮಿಕೊಳ್ಳಲಾಗಿದ್ದು ಸಾರ್ವಜನಿಕರು, ಪಕ್ಷಗಾರರು ತಮ್ಮ ವ್ಯಾಜ್ಯಗಳನ್ನು ಪರಸ್ಪರ ರಾಜೀ ಸಂಧಾನ ಮಾಡಿಕೊಳ್ಳುವ ಮೂಲಕ ಪ್ರಕರಣಗಳನ್ನು ತ್ವರಿತ ಇತ್ಯರ್ಥಪಡಿಸಿಕೊಳ್ಳಲು ಸದಾವಕಾಶವಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಬಸವರಾಜ ಅವರು ತಿಳಿಸಿದರು.
ಅವರು ಜಿಲ್ಲಾ ನ್ಯಾಯಾಲಯದ ವಿಡಿಯೋ ಕಾನ್ಪರನ್ಸ ಹಾಲ್‌ನಲ್ಲಿ ಶನಿವಾರದಂದು ಏರ್ಪಡಿಸಲಾಗಿದ್ದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು. ರಾಜೀ ಸಂಧಾನದಲ್ಲಿ ಪಾಲ್ಗೊಂಡು ತಮಗಾಗುವ ಆರ್ಥಿಕ ಹೊರೆ ಹಾಗೂ ಸಮಯ ಪೋಲಾಗುವುದನ್ನು ತಪ್ಪಿಸಲು, ಮತ್ತು ರಾಜಿ ಸಂಧಾನದಲ್ಲಿ ಪ್ರಕರಣ ಇತ್ಯರ್ಥವಾದರೆ ನ್ಯಾಯಾಲಯಕ್ಕೆ ತುಂಬಿದ ಶುಲ್ಕವನ್ನು ಸಂಪೂರ್ಣ ಮರುಪಾವತಿ ಮಾಡಲಾಗುವುದು. ಪ್ರಕರಣ ರಾಜೀ ಆದಲ್ಲಿ ಉಭಯ ಪಕ್ಷಗಾರರಿಗೆ ಮೇಲ್ಮನವಿ ಸಲ್ಲಿಸಲು ಅವಕಾಶವಿರುವುದಿಲ್ಲ ಇಲ್ಲಿಗೆ ಪ್ರಕರಣ ಮುಕ್ತಾಯಗೊಂಡು ತಮ್ಮ ಮೊದಲಿನ ಬಾಂದsವ್ಯ ಉಳಿಸಿಕೊಳ್ಳಲು ಸಹಾಯಕವಾಗುತ್ತದೆ ಎಂದರು. ಜಿಲ್ಲೆಯಲ್ಲಿ ರಾಜೀ ಸಂಧಾನಕ್ಕಾಗಿ ಪ್ರತಿಯೊಂದು ನ್ಯಾಯಾಲಯಕ್ಕೆ ಒಂದು ಬೆಂಚಿನಂತೆ, ಗದಗದಲ್ಲಿ ೬ ಹಾಗೂ ರೋಣದಲ್ಲಿ ೩, ಲಕ್ಷ್ಮೇಶ್ವರದಲ್ಲಿ ೨, ಮುಂಡರಗಿಯಲ್ಲಿ ೨ ಹಾಗೂ ನರಗುಂದದಲ್ಲಿ ೧ ಸೇರಿ ಒಟ್ಟು ೧೪ ಬೆಂಚಗಳನ್ನು ರಚಿಸಲಾಗಿದೆ. ಜಿಲ್ಲೆಯಲ್ಲಿ ಒಟ್ಟು ೧೮೦೫೬ ವಿವಿಧ ಚಾಲ್ತಿಪ್ರಕರಣಗಳಿದ್ದು ಅದರಲ್ಲಿ ಈಗಾಗಲೇ ರಾಜೀ ಆಗಬಹುದಾದ ೪೩೨೩ ಪ್ರಕರಣಗಳನ್ನು ಗುರುತಿಸಿದೆ. ಇದರಲ್ಲಿ ಸಿವಿಲ್ ದಾವೆಗಳು ಅಂದರೆ ಜಮೀನುಗಳಿಗೆ ಸಂಬಂಧಪಟ್ಟ ವ್ಯಾಜ್ಯಗಳು ಮನೆ ಹಾಗೂ ನಿವೇಶನಗಳಿಗೆ ಸಂಬಂಧಪಟ್ಟ ವ್ಯಾಜ್ಯಗಳು, ¨ÀsÆಸ್ವಾಧೀನ ಪ್ರಕರಣಗಳು, ಬ್ಯಾಂಕ ವಸೂಲಾತಿ ಪ್ರಕರಣಗಳು, ದರಖಾಸ್ತು ಅರ್ಜಿಗಳು, ಕಾರ್ಮಿಕ ಪ್ರಕರಣಗಳು, ಮರಳು ಕಳ್ಳ ಸಾಗಾಣಿಕೆೆ ಪ್ರಕರಣಗಳು, ಚೆಕ್‌ಬೌನ್ಸ್ ಪ್ರಕರಣಗಳು, ಮೋಟರ್ ವಾಹನ ಅಪಘಾತ ಪ್ರಕರಣಗಳು, ವೈವಾಹಿಕ ಪ್ರಕರಣಗಳು ಹಾಗೂ ರಾಜೀ ಆಗಲು ಅರ್ಹವಿರುವ ಕ್ರಿಮಿನಲ್ ಕಂಪೌಂಡೆಬಲ್ ಪ್ರಕರಣಗಳು ಸೇರಿದಂತೆ ಹಲವಾರು ಪ್ರಕರಣಗಳನ್ನು ರಾಜೀಗಾಗಿ ಗುರುತಿಸಲಾಗಿದೆ ಎಂದರು.ಪ್ರತಿದಿನ ರಾಜೀಗಾಗಿ ಆಯ್ಕೆ ಮಾಡಿದ ಪ್ರಕರಣಗಳನ್ನು ಸಂಬಂದsಪಟ್ಟ ವಕೀಲರು ಹಾಗೂ ಪಕ್ಷಗಾರರೊಂದಿಗೆ ಮುಂಚಿತವಾಗಿಯೇ ರಾಜೀ ಸಂಧಾನದಿಂದ ಆಗುವ ಪ್ರಯೋಜನಗಳ ಬಗ್ಗೆ ತಿಳಿಸಿ ಅವರ ಮನ ಒಲಿಸಿ ರಾಜೀ ಸಂಧಾನ ಮಾಡಿಕೊಳ್ಳಲು ತಿಳಿಯಪಡಿಸಲಾಗುವುದು, ಪ್ರಕರಣಗಳಿಗೆ ಸಂಬಂದsಪಟ್ಟ ವಕೀಲರು, ಕಕ್ಷಿದಾರರು ಹಾಗೂ ವಿವಿದs ಇಲಾಖೆಗಳಿಗೆ ಸಂಬಂದsಪಟ್ಟ ಅಧಿಕಾರಿಗಳು, ಇಲಾಖೆಗಳವರು ಫೆಬ್ರುವರಿ ೧೧ ರಂದು ಜರಗುವ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ಪಾಲ್ಗೊಂಡು ತಮ್ಮ ವ್ಯಾಜ್ಯಗಳನ್ನು ರಾಜೀ ಸಂಧಾನ ಮೂಲಕ ಪರಿಹರಿಸಿಕೊಳ್ಳಬಹುದಾಗಿದೆ. ಪಕ್ಷಗಾರರು ನ್ಯಾಯಾಲಯಗಳಲ್ಲಿರುವ ತಮ್ಮ ವ್ಯಾಜ್ಯಗಳನ್ನು ರಾಜೀ ಸಂಧಾನದ ಮೂಲಕ ಇತ್ಯರ್ಥಪಡಿಸಿಕೊಳ್ಳಲು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬೇಕೆಂದರು.
ಕಳೆದ ನವೆಂಬರ್-೨೦೨೨ ರಂದು ಜರುಗಿದ ಲೋಕ ಅದಾಲತ್‌ನಲ್ಲಿ ೨೫೨೯ ಚಾಲ್ತಿ ಪ್ರಕರಣಗಳನ್ನು, ೭೩೬೪ ವ್ಯಾಜ್ಯಪೂರ್ವ ಪ್ರಕರಣಗಳನ್ನು ಸೇರಿ ಒಟ್ಟು ೯೮೯೩ ಪ್ರಕರಣಗಳ್ನು ರಾಜಿ ಮೂಲಕ ಇತ್ಯರ್ಥಪಡಿಸಲಾಗಿದೆ. ಇದರಲ್ಲಿ ವಿಶೇಷವಾಗಿ ೫ ಕೌಟುಂಬಿಕ ಪ್ರಕರಣಗಳನ್ನು ಪುನಃ ಒಂದುಗೂಡಿಸಿ ಕಳುಹಿಸಲಾಗಿದೆ. ಈ ಲೋಕ ಅದಾಲತ್‌ನಲ್ಲಿಯೂ ಕೂಡ ಹೆಚ್ಚಿನ ಪ್ರಕರಣಗಳನ್ನು ರಾಜಿ ಮೂಲಕ ಇತ್ಯರ್ಥಪಡಿಸಿ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಲಾಗುವುದು ಎಂದರು.
ಸಂಚಾರಿ ನಿಯಮಗಳನ್ನು ಉಲ್ಲಂಘಿಸಿದ ವಾಹನ ಚಾಲಕರು ಫೆಬ್ರುವರು ೧೧ ರೊಳಗೆ ದಂಡ ಪಾವತಿಸಿದರೆ ಅಂತಹವರಿಗೆ ದಂಡ ಪಾವತಿ ಶುಲ್ಕದಲ್ಲಿ ಶೇ೫೦ % ರಷ್ಟು ವಿನಾಯತಿ ನೀಡಲಾಗುವುದು ಎಂದರು.
ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಕೆ.ಗುರುಪ್ರಸಾದ, ವಾರ್ತಾ ಇಲಾಖೆಯ ಸಹಾಯಕ ನಿರ್ದೇಶಕ ವಸಂತ ಮಡ್ಲೂರ ಮತ್ತಿತರರು ಹಾಜರಿದ್ದರು.
Gadi Kannadiga > State > ಫೆಬ್ರುವರಿ ೧೧ ರಂದು ರಾಷ್ಟ್ರೀಯ ಲೋಕ ಅದಾಲತ್ ಪ್ರಕರಣಗಳ ತ್ವರಿತ ಇತ್ಯರ್ಥಕ್ಕೆ ಸದಾವಕಾಶ
More important news
ಲಿಂಗಾಯತ ಸಂಘಟನೆಯಿಂದ ಮಹಿಳಾ ದಿನಾಚರಣೆ
20/03/2023
ಶ್ರೀ ರೇಣುಕಾಚಾರ್ಯ ಜಯಂತಿ ಮಾ.೧೯ಕ್ಕೆ
17/03/2023
ಸಾರ್ವಜನಿಕರ ಗಮನಕ್ಕೆ
17/03/2023
ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
17/03/2023
ಸಂತೆ ಕರ ಲಿಲಾವು
16/03/2023