ಗದಗ ಮೇ ೨೪: ಕರ್ನಾಟಕ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗವು “ಗ್ರಾಹಕ ಸಂರಕ್ಷಣಾ ಕಾಯ್ದೆ ೨೦೧೯” ರ ಕುರಿತು ಗ್ರಾಹಕರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಜೂನ್ ೧ ರಂದು ರಾತ್ರಿ ೮.೦೦ ರಿಂದ ೮.೩೦ ಘಂಟೆಯವರೆಗೆ ಆಕಾಶವಾಣಿಯಲ್ಲಿ ಫೋನ್-ಇನ್ ನೇರ ಪ್ರಸಾರ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಗ್ರಾಹಕರು ಯಾವುದೇ ಪ್ರಶ್ನೆಗಳಿದ್ದಲ್ಲಿ ಮೇಲೆ ತಿಳಿಸಿರುವ ದಿನಾಂಕ ಹಾಗೂ ಸಮಯದಲ್ಲಿ ದೂರವಾಣಿ ಸಂಖ್ಯೆ ೦೮೦-೨೨೩೭೦೪೭೭/ ೨೨೩೭೦೪೮೮/ ೨೨೩೭೦೪೯೯ಕ್ಕೆ ಕರೆ ಮಾಡಿ ಮಾಹಿತಿಯನ್ನು ಪಡೆದುಕೊಳ್ಳಬಹುದಾಗಿದೆ. ಗ್ರಾಹಕರು ತಮ್ಮ ಪ್ರಶ್ನೆಗಳನ್ನು ಮಿಂಚಂಚಿ ಛಿoಟಿsumeಡಿgಡಿievಚಿಟಿಛಿes.queಡಿ[email protected]ಚಿiಟ.ಛಿom ಮೂಲಕ ಮೇ ೩೧ ರೊಳಗೆ ಕಳುಹಿಸಬಹುದಾಗಿದೆ. ಗ್ರಾಹಕರು ತಮ್ಮ ಸಮಸ್ಯೆ ನಿವಾರಿಸಿಕೊಳ್ಳಲು ಆಕಾಶವಾಣಿಯಲ್ಲಿ ಫೋನ್ ಇನ್ ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಪರಿಹಾರ ಪಡೆಯಲು ಇದೊಂದು ಸುವರ್ಣ ಅವಕಾಶವಾಗಿದೆ ಎಂದು ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷರಾದ ಡಿ.ವೈ ಬಸಾಪುರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.