This is the title of the web page
This is the title of the web page

Please assign a menu to the primary menu location under menu

State

ಅಂತರರಾಷ್ಟ್ರೀಯ ಸಿರಿಧಾನ್ಯಗಳ ವರ್ಷಾಚರಣೆ; ಚಿತ್ರಕಲಾ ಸ್ಪರ್ಧೆ ಆಯೋಜನೆ


ಹೊಸಪೇಟೆ(ವಿಜಯನಗರ),ಜ.೧೮: ಅಂತರರಾಷ್ಟ್ರೀಯ ಸಿರಿಧಾನ್ಯಗಳ ವರ್ಷಾಚರಣೆ ಅಂಗವಾಗಿ ಕೃಷಿ ಇಲಾಖೆ ಮತ್ತು ಹಂಪಿ ಕನ್ನಡ ವಿಶ್ವವಿದ್ಯಾಲಯದ ಸಂಯುಕ್ತಾಶ್ರಯದಲ್ಲಿ ಚಿತ್ರಕಲಾ ಸ್ಪರ್ಧೆ ಆಯೋಜಿಸಲಾಗಿತ್ತು.
ಜ.೧೧ರಂದು ವಿಶ್ವವಿದ್ಯಾಲಯದ ದೃಶ್ಯಕಲಾ ವಿಭಾಗದಲ್ಲಿ ಆಯೋಜಿಸಲಾದ ಸ್ಪರ್ಧೆಯಲ್ಲಿ ಒಟ್ಟು ೪೨ ಜನ ಕಲಾವಿದರು ಭಾಗವಹಿಸಿದ್ದರು. ಅಂತಿಮವಾಗಿ ತಾರಕ್ ನಾಯಕ, ರಮೇಶ್ ದೀಕ್ಷಿತ್, ಹಾಗೂ ತನುಜಾ ಕೆ.ಎಸ್ ಕ್ರಮವಾಗಿ ಪ್ರಥಮ, ದ್ವಿತೀಯ ಹಾಗೂ ತೃತೀಯ ಸ್ಥಾನ ಪಡೆದಿರುತ್ತಾರೆ ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಶರಣಪ್ಪ ಮುದಗಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಾರ್ಯಕ್ರಮದ ಚಾಲನೆಯನ್ನು ಕೃಷಿ ಇಲಾಖೆಯ ಉಪ ಕೃಷಿ ನಿರ್ದೇಶಕರಾದ ಮಂಜುಳಾ ಬಸವರೆಡ್ಡಿ ಭಾಗವಹಿಸಿ ಚಾಲನೆ ನೀಡಿದರು. ಕನ್ನಡ ವಿಶ್ವ ವಿದ್ಯಾಲಯ, ಹಂಪಿಯ ದೃಶ್ಯಕಲಾ ವಿಭಾಗದ ಮುಖ್ಯಸ್ಥರಾದ ಡಾ|| ಮೋಹನ್ ರಾವ್ ಬಿ. ಪಂಚಾಳ ಸೇರಿದಂತೆ ಕೃಷಿ ಇಲಾಖೆ ಅಧಿಕಾರಿಗಳಾದ ವಾಮದೇವಕೊಳ್ಳಿ, ಮನೋಹರಗೌಡ, ಸುಭಾನ್ ಎಸ್., ರಾಜ ಜಿ.ಎ ಇದ್ದರು.


Gadi Kannadiga

Leave a Reply