ಕೊಪ್ಪಳ ಡಿಸೆಂಬರ್ ೧೩ : ರಾಷ್ಟ್ರೀಯ ನಗರ ಆರೋಗ್ಯ ಅಭಿಯಾನದಡಿ ೧೫ನೇ ಹಣಕಾಸು ಯೋಜನೆಯಡಿಯಲ್ಲಿ ಕೊಪ್ಪಳ ಜಿಲ್ಲೆಗೆ ಮೂರು ನಮ್ಮ ಕ್ಲಿನಿಕ್‌ಗಳು ಮಂಜೂರಾಗಿದ್ದು, ಡಿ.೧೪ ರಂದು ಆನ್‌ಲೈನ್ ವರ್ಚುವಲ್ ಮೂಲಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಉದ್ಘಾಟನೆ ಮಾಡಲಿದ್ದಾರೆ.
ಜಿಲ್ಲೆಯ ಕೊಪ್ಪಳ, ಕುಷ್ಟಗಿ, ಕಾರಟಗಿಯಲ್ಲಿ ನಮ್ಮ ಕ್ಲಿನಿಕ್‌ಗಳು ಮಂಜೂರಾಗಿವೆ. ನಗರ ಪ್ರದೇಶದಲ್ಲಿ ಸಮುದಾಯಕ್ಕೆ ಸಮಗ್ರ ಪ್ರಾಥಮಿಕ ಆರೋಗ್ಯ ಸೇವೆಗಳನ್ನು ಒದಗಿಸುವ ಹಾಗೂ ಜನರಿಗೆ ಅವರು ವಾಸವಿರುವ ಸ್ಥಳದ ಸಮೀಪದಲ್ಲೇ ಆರೋಗ್ಯ ಸೇವೆ ಒದಗಿಸುವ ಮತ್ತು ಆರೋಗ್ಯ ಸೇವೆಗಳಿಗಾಗಿ ಸಾರ್ವಜನಿಕರು ತಮ್ಮ ಸ್ವಂತ ಹಣದ ಖರ್ಚನ್ನು ಕಡಿಮೆ ಮಾಡುವ ಉದ್ದೇಶದಿಂದ ನಮ್ಮ ಕ್ಲಿನಿಕ್‌ಗಳನ್ನು ಆರಂಭಿಸಲಾಗಿದೆ. ನಗರ ಪ್ರದೇಶಗಳಲ್ಲಿ ಪ್ರಾಥಮಿಕ ಆರೋಗ್ಯ ಸೇವೆಗಳನ್ನು ವಿಕೇಂದ್ರೀಕರಿಸುವ ಜೊತೆಗೆ ಸಾಂಕ್ರಾಮಿಕ ರೋಗಗಳ ಕಣ್ಗಾವಲು ವ್ಯವಸ್ಥೆಯನ್ನು ಚಲನೆಗೊಳಿಸುವ ಉದ್ದೇಶವನ್ನು ಕೂಡ ಹೊಂದಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಅಲಕನಂದಾ ಮಳಗಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Gadi Kannadiga > State > ಜಿಲ್ಲೆಯಲ್ಲಿ ಇಂದು ನಮ್ಮ ಕ್ಲಿನಿಕ್ ಆರಂಭ
More important news
ವಿದ್ಯುತ್ ವ್ಯತ್ಯಯ
23/03/2023
ಚುನಾವಣೆಯಲ್ಲಿ ಮಕ್ಕಳ ಬಳಕೆ ಸಲ್ಲದು
23/03/2023
ಮಾರ್ಚ ೨೪ ರಂದು ನಗರಸಭೆಯಲ್ಲಿ ಸಾಮಾನ್ಯ ಸಭೆ
23/03/2023