This is the title of the web page
This is the title of the web page

Please assign a menu to the primary menu location under menu

Local News

ಚಿಕ್ಕೋಡಿಯಲ್ಲಿ ಪಾಕಿಸ್ತಾನದ ನೋಟು ಪತ್ತೆ


ಬೆಳಗಾವಿ: ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಕರೋಶಿ ಗ್ರಾಮದಲ್ಲಿ ಪಾಕಿಸ್ತಾನದ ನೋಟು ಪತ್ತೆಯಾಗಿದ್ದು ಗ್ರಾಮದಲ್ಲಿ ತೀವ್ರ ಸಂಚಲನವನ್ನು ಮೂಡಿಸಿದೆ. ಈ ಕುರಿತು ಪೊಲೀಸರು ತನಿಖೆಯನ್ನು ಆರಂಭಿಸಿದ್ದಾರೆ.

ಗುರುವಾರ ಬೆಳಗ್ಗೆ 11 ಗಂಟೆ ಸುಮಾರಿಗೆ ಕರೋಶಿ ಬಸ್ ನಿಲ್ದಾಣದ ರಸ್ತೆಯಲ್ಲಿ ಯುವಕನಿಗೆ ನೋಟೊಂದು ಬಿದ್ದಿರುವುದು ಕಂಡುಬಂದಿದೆ.

ಅದು ಪಾಕಿಸ್ತಾನದ ದೇಶದ ನೋಟಾಗಿದ್ದು, ಅದರಲ್ಲಿ ಪಾಕಿಸ್ತಾನದ ಸಂಸ್ಥಾಪಕ ಮೊಹಮ್ಮದ್ ಅಲಿ ಜಿನ್ನಾ ಅವರ ಭಾವಚಿತ್ರ ಇದೆ. ಉರ್ದು ಭಾಷೆಯ ಅಕ್ಷರಗಳು ಇವೆ.

ಇದು 10 ರೂಪಾಯಿ ನೋಟಾಗಿದ್ದು, ಸಿಕ್ಕ ನೋಟನ್ನು ಯುವಕನು ಚಿಕ್ಕೋಡಿ ಪೊಲೀಸ ಠಾಣೆಗೆ ಒಪ್ಪಿಸಿದ್ದಾ‌ನೆ. ಈ‌ ಕುರಿತು ಚಿಕ್ಕೋಡಿ ಪೊಲೀಸರು ಹಾಗೂ ಗುಪ್ತಚರ ಇಲಾಖೆಯವರು ತನಿಖೆಯನ್ನು ಆರಂಭಿಸಿದ್ದಾರೆ.

Gadi Kannadiga

Leave a Reply