State

ಪಂಚ-ಗಂಗಾ ಒಣದ್ರಾಕ್ಷಿ ಸಂಸ್ಕರಣಾ ಘಟಕಕ್ಕೆ ಚಾಲನೆ ನೀಡಿದ ಸಚಿವ ಎಂ.ಬಿ.ಪಾಟೀಲ

WhatsApp Group Join Now
Telegram Group Join Now

ವಿಜಯಪುರ, ಮಾ. 09: ಉದ್ಯಮಿ ಅಣ್ಣಾರಾಯ ಎಸ್. ಬಿರಾದಾರ ಆರಂಭಿಸಿದ ಪಂಚ-ಗಂಗಾ ಒಣದ್ರಾಕ್ಷಿ ಸಂಸ್ಕರಣಾ ಘಟಕಕ್ಕೆ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಚಾಲನೆ ಇಂದು ನೀಡಿದರು.

ಅವರು ಪಂಚ-ಗಂಗಾ ಒಣದ್ರಾಕ್ಷಿ ಸಂಸ್ಕರಣಾ ಘಟಕದ ಯಂತ್ರದಲ್ಲಿ ಒಣದ್ರಾಕ್ಷಿಯನ್ನು ಹಾಕುವ ಮೂಲಕ ಸಚಿವ ಎಂ. ಬಿ. ಪಾಟೀಲ ವಿಂಗಡಣೆ ಯಂತ್ರಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಅಣ್ಣಾರಾಯ ಎಸ್. ಬಿರಾದಾರ, ನಿತೀನ ಎ. ಬಿರಾದಾರ, ವಿಠ್ಠಲ ಕಟಕದೊಂಡ, ಎಸ್.ಎಂ.ಪಾಟೀಲ ಗಣಿಹಾರ, ಪ್ರಕಾಶಗೌಡ ಪಾಟೀಲ, ಮುಂತಾದವರು ಉಪಸ್ಥಿತರಿದ್ದರು.

ನಗರದ ಸೋಲಾಪುರ ರಸ್ತೆಯ ಯಶೋಧಾ ಆಸ್ಪತ್ರೆ ಹಿಂದೆ ಇರುವ ಒಣದ್ರಾಕ್ಷಿ ಸಂಸ್ಕರಣಾ ಘಟಕದಲ್ಲಿ ಇಂದು ಶನಿವಾರ ಈ ಕಾರ್ಯಕ್ರಮ ನಡೆಯಿತು.

ಘಟಕದ ಕಾರ್ಯವನ್ನು ವೀಕ್ಷಿಸಿ, ಒಣದ್ರಾಕ್ಷಿ ಸಂಗ್ರಹ, ಸಂಸ್ಕರಣೆ, ಮಾರಾಟ ಹಾಗೂ ರಫ್ತು ಮಾಡುವ ಕುರಿತು ಮಾಹಿತಿ ಪಡೆದರು. ಅಲ್ಲದೇ, ಈ ಘಟಕ ಉತ್ತರೋತ್ತರವಾಗಿ ಅಭಿವೃದ್ಧಿಯಾಗಲಿ ಎಂದು ಅಣ್ಣಾರಾಯ ಎಸ್. ಬಿರಾದಾರ ಮತ್ತು ಅವರ ಪುತ್ರ ನಿತೀನ ಎ.ಬಿರಾದಾರ ಅವರಿಗೆ ಶುಭ ಕೋರಿದರು.

ಈ ಸಂದರ್ಭದಲ್ಲಿ ವಿಜಯಪುರ ಜ್ಞಾಯೋಗಾಶ್ರಮದ ಶ್ರೀ ಬಸವಲಿಂಗ ಸ್ವಾಮೀಜಿ, ನಾಗಠಾಣ ಶಾಸಕ ವಿಠ್ಠಲ ಕಟಕದೊಂಡ, ಪಶ್ಚಿಮ ಬಂಗಾಳ ನಿವೃತ್ತ ಡಿಜಿಪಿ ಜಿ.ಎಂ.ಪಿ ರೆಡ್ಡಿ, ಉದ್ಯಮಿಗಳಾದ ಪ್ರಕಾಶಗೌಡ ಪಾಟೀಲ, ಮುಖಂಡರಾದ ಎಸ್.ಎಂ.ಪಾಟೀಲ ಗಣಿಹಾರ, ಬಸವರಾಜ ದೇಸಾಯಿ, ಡಾ.ಮಹಾಂತೇಶ ಬಿರಾದಾರ ಮುಂತಾದವರು ಉಪಸ್ಥಿತರಿದ್ದರು.

WhatsApp Group Join Now
Telegram Group Join Now

Related Posts