ಖಾನಾಪುರ:ಬೆಳಗಾವಿಯಲ್ಲಿ ನಡೆದ ಚಳಿಗಾಲದ ಅಧಿವೇಶನದ ಸಂದರ್ಭದಲ್ಲಿ, ಮಕ್ಕಳ ಕಲ್ಯಾಣ ಮತ್ತು ಮಹಿಳಾ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಕ್ಕಾಗಿ ಮಾಜಿ ರಾಜ್ಯ ಸಚಿವ ಮತ್ತು ಹಿರಿಯ ಬಿಜೆಪಿ ನಾಯಕ ಸಿ.ಟಿ. ರವಿ ಅವರನ್ನು ಪೊಲೀಸರು ಬಂಧಿಸಿ ಖಾನಾಪುರ ಪೊಲೀಸ್ ಠಾಣೆಗೆ ಕರೆತಂದಿದ್ದರು.
ಆ ಸಂದರ್ಭದಲ್ಲಿ ಅವರನ್ನು ಭೇಟಿ ಮಾಡಲು ಮಾಜಿ ಉಪಮುಖ್ಯಮಂತ್ರಿ ಮತ್ತು ಪ್ರಸ್ತುತ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ್,ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕ ಮಾಜಿ ಸಚಿವ ಬಸನಗೌಡ ಪಾಟೀಲ್-ಯತ್ನಾಳ್, ಖಾನಾಪುರ ಶಾಸಕ ವಿಠ್ಠಲರಾವ್ ಹಲ್ಗೇಕರ್, ಮಾಜಿ ಶಾಸಕ ಸಂಜಯ್ ಪಾಟೀಲ್, ಬೆಳಗಾವಿ ಜಿಲ್ಲಾಧ್ಯಕ್ಷ ಸುಭಾಷ್ ಪಾಟೀಲ್, ಬಿಜೆಪಿ ಯುವ ನಾಯಕ ಪಂಡಿತ್ ಓಗಲೆ ಮತ್ತು ರಾಜ್ಯದ ಇತರ ಕೆಲವು ಬಿಜೆಪಿ ಶಾಸಕರು ಸಿಟಿ ರವಿಯನ್ನ ಭೇಟಿ ಮಾಡಲು ಪೊಲೀಸ್ ಠಾಣೆಗೆ ಹೋಗಿದ್ದರು.
ಬೆಟಿಗೆ ಹೋದ ಸಂದರ್ಭದಲ್ಲಿನ ಪೊಟೊಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿ ಇದಕ್ಕೆ ತಪ್ಪಿತಸ್ಥರೆಂದು ಆಗಿನ ಪಿಆಯ್ ಮಂಜುನಾಥ ನಾಯಕ್ ಅವರನ್ನು ಅಮಾನತ್ತು ಮಾಡಿ ಆದೇಶ ಹೊರಡಿಸಲಾಗಿತ್ತು.
ಈ ಸಂಬಂಧ ನ್ಯಾಯ ಕೋರಿ ಪಿಐ ಮಂಜುನಾಥ್ ನಾಯಕ್ ಅವರು ಕರ್ನಾಟಕ ಮೇಲ್ಮನವಿ ನ್ಯಾಯಮಂಡಳಿ (ಕೆಎಟಿ)ಗೆ ಅರ್ಜಿ ಕೂಡ ಸಲ್ಲಿಸಿದ್ದರು. ಅವರ ವಾದ ಆಲಿಸಿದ ನಂತರ ಉಚ್ಚ ನ್ಯಾಯಾಲಯ ಮಂಜುನಾಥ ನಾಯಕ್ ಅವರ ಅಮಾನತು ಆದೇಶ ರದ್ದುಗೊಳಿಸಿ ಮೂರು ತಿಂಗಳೊಳಗೆ ಅವರು ಈ ಹಿಂದೆ ಕೆಲಸ ಮಾಡುತ್ತಿದ್ದ ಅದೇ ಸ್ಥಳಕ್ಕೆ (ಖಾನಾಪುರ) ಮರು ನಿಯೋಜಿಸಲು ಆದೇಶಿಸಲಾಗಿದೆ ಹಾಗೂ ಅವರಿಗೆ ಮೊದಲಿನಂತೆ ಎಲ್ಲಾ ಸರ್ಕಾರಿ ಸೌಲಭ್ಯಗಳನ್ನು ಒದಗಿಸುವಂತೆಯೂ ಆದೇಶಿಸಲಾಗಿದ್ದು ಇದು ನ್ಯಾಯಕ್ಕೆ ಸಂದ ಜಯ ಎಂದು ಜನ ಮಾತನಾಡಿಕೊಳ್ಳುತ್ತಿದ್ದಾರೆ.