This is the title of the web page
This is the title of the web page

Please assign a menu to the primary menu location under menu

Local News

ಸರಕಾರಿ, ಖಾಸಗಿ ಕಚೇರಿಗಳಲ್ಲಿ ರಾಷ್ಟ್ರಗೀತೆ ಹಾಡುವಂತೆ ಆಗ್ರಹಿಸಿ ಜಿಲ್ಲಾಧಿಕಾರಿಗಳಿಗೆ ಮನವಿ


ಬೆಳಗಾವಿ: ಸರ್ಕಾರಿ ಮತ್ತು ಖಾಸಗಿ ಹಾಗೂ ಸಂಘ ಸಂಸ್ಥೆಗಳಲ್ಲಿ ಪ್ರತಿದಿನ ರಾಷ್ಟ್ರಗೀತೆಯ ಮೂಲಕ ಚಟುವಟಿಕೆಗಳನ್ನು ಪ್ರಾರಂಭಿಸಬೇಕೆಂದು ಆಗ್ರಹಿಸಿ ಮೂಲ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯ ರಾಷ್ಟ್ರೀಯ ರೈತ ಸಂಘದಿಂದ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.

ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದ ಅವರು ಸರಕಾರಿ ಮತ್ತು ಖಾಸಗಿ ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸುವ ಸಿಬ್ಬಂದಿಗಳು ಪ್ರತಿದಿನ ಕಚೇರಿಗಳಲ್ಲಿ ಕಾರ್ಯಚಟುವಟಿಕೆಗಳನ್ನು ಪ್ರಾರಂಭಿಸುವ ಮೊದಲು ರಾಷ್ಟ್ರಗೀತೆಯನ್ನು ಹಾಡಬೇಕು ನನ್ನ ದೇಶವನ್ನು ನಾನು ಪ್ರೀತಿಸುತ್ತೇನೆ, ಗೌರವಿಸುತ್ತೇನೆ, ದೇಶ ಮತ್ತು ಸಮಾಜದ ವಿರುದ್ಧ ಯಾವುದೇ ಚಟುವಟಿಕೆ ಮಾಡುವುದಿಲ್ಲ ಎಂದು ಸಂಕಲ್ಪ ಮಾಡಿ ವಂದೇ ಮಾತರಂ, ಭಾರತ್ ಮಾತಾಕಿ ಜೈ ಘೋಷಣೆ ಕೂಗಬೇಕೆಂದು ಆಗ್ರಹಿಸಿದರು.

ಈ ಸಂದರ್ಭದಲ್ಲಿ ರೈತ ಮುಖಂಡರಾದ ಪ್ರಕಾಶ ನಾಯಿಕ್, ರಾಘವೇಂದ್ರ ನಾಯಿಕ್, ಶಿವಾನಂದ ಮುಗಳಿಹಾಳ, ಸುರೇಶ ಪರಗನ್ನವರ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.


Gadi Kannadiga

Leave a Reply