This is the title of the web page
This is the title of the web page

Please assign a menu to the primary menu location under menu

Local News

ಪ್ಲಾಸ್ಟಿಕ್ ಮುಕ್ತ ಅಭಿಯಾನ ಕಾರ್ಯಕ್ರಮ


ಯರಗಟ್ಟಿ : ಪಟ್ಟಣ ಪಂಚಾಯತ ಆಯೋಜಿಸಿದ ಪ್ಲಾಸ್ಟಿಕ್ ಮುಕ್ತ ಅಭಿಯಾನ ಕಾರ್ಯಕ್ರಮದಲ್ಲಿ ಕಿರಾಣಿ ವರ್ತಕರು ಸಂಘ ಹಾಗೂ ಬೀದಿ ಬದಿ ವ್ಯಾಪಾರಸ್ಥ ಸಂಘದವರೊಂದಿಗೆ ಪ್ಲಾಸ್ಟಿಕ್ ಉಪಯೋಗಿಸುವುದರಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ಪಟ್ಟಣ ಪಂಚಾಯತ ಪ್ರಭಾರಿ ಮುಖ್ಯಾಧಿಕಾರಿ ಪಿ. ಎನ್. ಪಾಟೀಲ ಮಾತನಾಡಿದರು. ಪ್ಲಾಸ್ಟಿಕ್ ಬಳಸುವುದರಿಂದ ತ್ಯಾಜ್ಯ ಹೆಚ್ಚಾಗುತ್ತದೆ ಹಾಗೂ ಪ್ಲಾಸ್ಟಿಕ್ ಕೊಳೆಯುವುದಿಲ್ಲ ಇದರಿಂದ ಪರಿಸರ ಮಾಲಿನ್ಯ ಹೆಚ್ಚಾಗುತ್ತದೆ. ಆರೋಗ್ಯಕ್ಕೂ ಸಹ ಇದು ಒಳ್ಳೆಯದಲ್ಲ ಎಂದರು.
ಈ ಸಂದರ್ಭದಲ್ಲಿಪಟ್ಟಣದ ಪ್ರಮುಖ ಬೀದಿಗಳಲ್ಲಿ ಪ್ಲಾಸ್ಟಿಕ್ ಮುಕ್ತ ಅಭಿಯಾನದ ಕರಪತ್ರಗಳನ್ನು ಹಂಚುವ ಮೂಲಕ ಸಾಮಾಜಿಕರಿಗೆ ತಿಳಿಸಲಾಯಿತು. ಈ ವೇಳೆ ಪಟ್ಟಣ ಪಂಚಾಯತ ಪೌರಕಾರ್ಮಿಕರು ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.


Leave a Reply