This is the title of the web page
This is the title of the web page

Please assign a menu to the primary menu location under menu

Local News

ಸುವರ್ಣ ವಿಧಾನ ಸೌಧದ ೧ ಕಿ.ಮೀ ವ್ಯಾಪ್ತಿ ನಿಷೇದಾಜ್ಞೆ ಜಾರಿಗೋಳಿಸಿ ಪೊಲೀಸ್ ಆಯುಕ್ತ ಡಾ. ಎಂ.ಬಿ, ಬೋರಲಿಂಗಯ್ಯ ಆದೇಶ


ಬೆಳಗಾವಿ, ಡಿ.೧೩ : ಬೆಳಗಾವಿ ನಗರದ ಪೊಲೀಸ್ ಕಮೀಷನರ್ ವ್ಯಾಪ್ತಿಯಲ್ಲಿನ ಸುರ್ವಣ ಸೌಧದ ಸುತ್ತ ಮುತಲ್ತು ೧ ಕೀ.ಮಿ ವ್ಯಾಪ್ತಿಯಲ್ಲಿ: ಡಿಸೆಂಬರ್ ೧೨, ಬೆಳಿಗ್ಗೆ ೧೦ ಗಂಟೆಯಿಂದ ಜನವರಿ ೧, ೨೦೨೩ ರಂದು ಮಧ್ಯ ರಾತ್ರಿಯವರೆಗೆ ನಿಷೇದಾಜ್ಞೆ ಜಾರಿಗೋಳಿಸಿ ಹೆಚ್ಚುವರಿ ಜಿಲ್ಲಾ ದಂಡಾಧಿಕಾರಿ ಹಾಗೂ ನಗರ ಪೊಲೀಸ್ ಆಯುಕ್ತರಾದ ಡಾ. ಎಂ.ಬಿ, ಬೋರಲಿಂಗಯ್ಯ ಅವರು ಆದೇಶ ಹೋರಡಿಸಿರುತ್ತಾರೆ.
ಬೆಳಗಾವಿ ನಗರದ ಸುವರ್ಣ ಸೌಧದ ಎಡಬದಿಯಿಂದ ಟೋಯಟಾ ಶೋರೂಮ್ ವರೆಗೆ ಮತ್ತು ಸುವರ್ಣ ಸೌಧದ ಬಲಬದಿ ದಿಂದ ಹಲಗಾ ಗ್ರಾಮದವರೆಗೆ ಅದರಂತೆ ಎದರುಗಡೆ ಜೀನಗೌಡಾ ಆಸ್ಪತ್ರೆ ವರೆಗೆ ೧ ಕೀ.ಮಿ ವ್ಯಾಪ್ತಿಯಲ್ಲಿ ೦೫ ಕ್ಕಿಂತ ಹೆಚ್ಚು ಜನರು ಗುಂಪು ಸೇರುವುದು, ಮೇರವಣಿಗೆ ಅಥವಾ ಸಭೆ ಸಮಾರಂಭ ಜರುಗಿಸುವುದನ್ನು ನಿಷೇಧಿಸಿದೆ.
ಶಸ್ತ್ರ, ಬಡಿಗೆ, ಬರ್ಚಿ, ಖಡ್ಗ, ಗದೆ, ಬಂದೂಕು, ಚೂರಿ, ಲಾಠಿ, ಡೊಣ್ಣೆ, ಚಾಕು ಅಥವಾ ದೇಹಕ್ಕೆ ಅಪಾಯವನ್ನು ಉಂಟು ಮಾಡಬಹುದಾದ ಯಾವುದೇ ಮಾರಕಾಸ್ತ್ರವನ್ನು ತೆಗೆದುಕೊಂಡು ಹೋಗುವುದನ್ನು ಮತ್ತು ತಿರುಗಾಡುವುದನ್ನು ಪ್ರತಿಬಂಧಿಸಲಾಗಿದೆ.
ಕಲ್ಲುಗಳನ್ನು, ಕ್ಷಾರಪದಾರ್ಥ, ಪಟಾಕಿ ಇಲ್ಲವೆ ಸ್ಪೋಟಕ ವಸ್ತುಗಳು ಯಾವುದೇ ದಾಹಕ ವಸ್ತುಗಳು ಇತ್ಯಾದಿಗಳನ್ನು ಸದರಿ ಸ್ಥಳಕ್ಕೆ ತೆಗೆದುಕೊಂಡು ಹೋಗುವುದನ್ನು ಹಾಗೂ ಶೇಖರಿಸುವುದನ್ನು ನಿಷೇಧಿಸಲಾಗಿದೆ.
ಕಲ್ಲುಗಳನ್ನು ಮತ್ತು ಎಸೆಯುವಂತಹ ವಸ್ತುಗಳನ್ನು ಅಥವಾ ಬಿಡುವ ಸಾಧನಗಳನ್ನು ತೆಗೆದುಕೊಂಡು ಹೋಗುವುದನ್ನು ಪ್ರತಿಬಂಧಿಸಲಾಗಿದೆ.
ಸುರ್ವಣ ಸೌಧದ ಸುತ್ತಮುತ್ತಲಿನ ೧ ಕೀ. ಮೀ ವ್ಯಾಪ್ತಿಯಲ್ಲಿ ಸಾರ್ವಜನಿಕವಾಗಿ ಯಾವುದೇ ವ್ಯಕ್ತಿ ಪ್ರಚೋದನಾತ್ಮಕ ಹಾಗೂ ಉದ್ರೇಕಕಾರಿ ಹಾಡುಗಳು ಕೂಗಾಟ ಮಾಡುವುದನ್ನು ಹಾಗೂ ವ್ಯಕ್ತಿಗಳ ತೇಜೋವಧೆ ಮಾಡುವಂತಹ ಚಿತ್ರಗಳು ಚಿಹ್ನೆಗಳು, ಪ್ರತಿಕೃತಿಗಳು ಮುಂತಾದವುಗಳನ್ನು ಪ್ರದರ್ಶಿಸುವುದಾಗಲಿ ಹಾಗೂ ಸಾರ್ವಜನಿಕರ ಗಾಂಭಿರ್ಯ ಹಾಗೂ ನೈತಿಕತೆಗೆ ಭಂಗ ತರುವಂತಹ ಅಥವಾ ಕಾನೂನು ಮತ್ತು ಸುವ್ಯವಸ್ಥೆಗೆ ಭಂಗ ತರುವಂತಹ ಯಾವುದೇ ಕೃತ್ಯಗಳಲ್ಲಿ ತೊಡಗುವುದನ್ನು ಪ್ರತಿಬಂಧಿಸಲಾಗಿದೆ.
ಯಾವುದೇ ವ್ಯಕ್ತಿ ಸಾರ್ವಜನಿಕರಾಗಲಿ ಮಾರಕಾಸ್ತ್ರಗಳು, ಸ್ಪೋಟಕ ವಸ್ತುಗಳು, ವಿನಾಶಕಾರಿ ವಸ್ತುಗಳು ಹಾಗೂ ಇತರ ಆಕ್ಷೇಪಾರ್ಹ ವಸ್ತುಗಳನ್ನು ಹೊಂದಿದ್ದು ಕಂಡುಬಂದ ಕೂಡಲೇ ಅವುಗಳನ್ನು ವಶಪಡಿಸಿಕೊಳ್ಳಲು ಯಾವುದೇ ಪೊಲೀಸ್ ಅಧಿಕಾರಿಗಳಿಗೆ ಅಧಿಕಾರ ಇರುತ್ತದೆ. ಅಂತಹ ಮಾರಕಾಸ್ತ್ರಗಳನ್ನು ಸರಕಾರಕ್ಕೆ ಮುಟ್ಟುಗೋಲು ಮಾಡಿಕೊಳ್ಳಲಾಗುವುದು. ಅಲ್ಲದೆ ಸಂಬಂಧಿಸಿದ ವ್ಯಕ್ತಿಗಳ ಮೇಲೆ ಕಾನೂನು ರೀತ್ಯಾ ಕ್ರಮ ಜರುಗಿಸಲಾಗುವುದು.
ಶವ ಸಂಸ್ಕಾರಕ್ಕೆ ಅಥವಾ ಮದುವೆ ಮತ್ತು ಧಾರ್ಮಿಕ ಮೆರವಣಿಗೆಗಳಿಗೆ ಈ ಆಜ್ಞೆ ಅನ್ವಯಿಸುವುದಿಲ್ಲ. ಮದುವೆ ಮತ್ತು ಇತರೆ ಧಾರ್ಮಿಕ ಮೆರವಣಿಗೆಗಳು ಹಾಗೂ ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆ ತರದಂತೆ ನಿಯಮಗಳನ್ನು ಪಾಲಿಸುವುದು.
ರಾಷ್ಟ್ರೀಯ ಹೆದ್ದಾರಿ-೪೮ ರಲ್ಲಿ ರಸ್ತೆ ತಡೆ ಮಾಡಿ ಪ್ರತಿಭಟನೆ ಮಾಡುವದು, ರಾಷ್ಟ್ರೀಯ ಹೆದ್ದಾರಿಯ ಸಂಚಾರಕ್ಕೆ ತಡೆ ಒಡ್ಡಿ ಹೆದ್ದಾರಿಯಲ್ಲಿ ಒಡಾಡುತ್ತಿರುವ ಅವಶ್ಯಕ ರೋಗಿಗಳನ್ನು ಸಾಗಿಸುವ ಅಂಬುಲೆನ್ಸ್ ಹಾಗೂ ಇತರೆ ಅವಶ್ಯಕ ವಸ್ತುಗಳನ್ನು ಸಾಗಿಸುವ ವಾಹನಗಳನ್ನು ತಡೆದಲ್ಲಿ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವದು.
ಪ್ರತಿಭಟನಾಕಾರರು ಸುವರ್ಣ ವಿಧಾನ ಸಭೆಯ ಕಲಾಪ ನಡೆಯುವ ಸಮಯದಲ್ಲಿ ಪ್ರತಿಭಟನೆ ಮಾಡಲು ಅನುಮತಿ ಪಡೆದವರು ಮಾತ್ರ ಪ್ರತಿಭಟನೆ ಮಾಡುವುದಕ್ಕೆ ಅನುಮತಿ ನೀಡಲಾಗಿರುತ್ತದೆ. ಸದರಿ ಆದೇಶವನ್ನು ಉಲ್ಲಂಘಿಸುವವರ ವಿರುದ್ಧ ಭಾರತೀಯ ದಂಡ ಪ್ರಕ್ರೀಯೆ ಸಂಹಿತೆಯ ಕಲಂ ೧೮೮ರ ಪ್ರಕಾರ ಕ್ರಮ ಜರುಗಿಸಲಾಗುವುದು ಎಂದು ಬೆಳಗಾವಿ ನಗರ ಪೋಲಿಸ್ ಆಯುಕ್ತರು ಹಾಗೂ ಹೆಚ್ಚುವರಿ ಜಿಲ್ಲಾ ದಂಡಾಧಿಕಾರಿಗಳಾದ ಡಾ. ಎಂ. ಬಿ ಬೋರಲಿಂಗಯ್ಯ ಅವರು ಆದೇಶದಲ್ಲಿ ತಿಳಿಸಿದ್ದಾರೆ.


Leave a Reply