This is the title of the web page
This is the title of the web page

Please assign a menu to the primary menu location under menu

Local News

“ಮೆಟ್ರಿಕ್-ನಂತರದ ವಿದ್ಯಾರ್ಥಿವೇತನ ಅರ್ಜಿ ಅವಧಿ ವಿಸ್ತರಣೆ


ಬೆಳಗಾವಿ, ಡಿ.೩೦ : ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಅಲೆಮಾರಿ/ಅರೆಅಲೆಮಾರಿ ವಿದ್ಯಾರ್ಥಿಗಳಿಂದ, ೨೦೨೨-೨೩ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ “ಮೆಟ್ರಿಕ್-ನಂತರದ ವಿದ್ಯಾರ್ಥಿವೇತನ”, “ಶುಲ್ಕ ವಿನಾಯಿತಿ”, “ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ”, ಮತ್ತು “ನರ್ಸಿಂಗ್ ವಿದ್ಯಾರ್ಥಿಗಳಿಗೆ ಶಿಷ್ಯವೇತನ”, ಸೌಲಭ್ಯಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ೨೦೨೨, ದಿಸೆಂಬರ್ ೩೧ ರಂದು ಅರ್ಜಿ ಸಲ್ಲಿಸುವ ಅಂತಿಮ ದಿನಾಂಕವನ್ನು ನಿಗದಿಪಡಿಸಲಾಗಿತ್ತು.
ಅರ್ಜಿ ಸಲ್ಲಿಸುವ ದಿನಾಂಕವನ್ನು ವಿಸ್ತರಿಸುವಂತೆ ಪೋಷಕರು/ವಿದ್ಯಾರ್ಥಿಗಳು/ಶಿಕ್ಷಣ ಸಂಸ್ಥೆಗಳು ಮನವಿ ಸಲ್ಲಿಸಿದ್ದು, ಪ್ರಯುಕ್ತ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನು ಜನವರಿ,೩೧, ೨೦೨೩ ರವರೆಗೆ ವಿಸ್ತರಿಸಲಾಗಿದೆ.
ಆನ್‌ಲೈನ್ ವೆಬ್ಸೆöÊಟ್ ತಿತಿತಿ.ssಠಿ.ಠಿosಣmಚಿಣಡಿiಛಿ.ಞಚಿಡಿಟಿಚಿಣಚಿಞಚಿ.gov.iಟಿ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಕಾರ್ಯಕ್ರಮಗಳ ವಿವರ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳು ಹಾಗೂ ವಿದ್ಯಾರ್ಥಿವೇತನಕ್ಕೆ ಸಂಬಂಧಿಸಿದ ಸರ್ಕಾರಿ ಅದೇಶಗಳ ಬಗ್ಗೆ ಮಾಹಿತಿಗಾಗಿ ಸೈಟ್ ವಿಳಾಸ: ತಿತಿತಿ.bಛಿತಿಜ.ಞಚಿಡಿಟಿಚಿಣಚಿಞಚಿ.gov.iಟಿ ಯನ್ನು ಸಂಪರ್ಕಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಇಲಾಖಾ ಸಹಾಯವಾಣಿ ಸಂಖ್ಯೆ : ೮೦೫೦೭೭೦೦೦೫ / ೮೦೫೦೭೭೦೦೦೪ ಇಮೇಲ್: bಛಿತಿಜ.sಛಿhoಟಚಿಡಿshiಠಿ@ಞಚಿಡಿಟಿಚಿಣಚಿಞಚಿ.gov.iಟಿ ಹಾಗೂ ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದ ಸಹಾಯವಾಣಿ ಸಂಖ್ಯೆ: ೦೮೦-೩೫೨೫೪೭೫೭ ಅಥವಾ ಠಿosಣmeಣಡಿiಛಿheಟಠಿಜesಞ@ಞಚಿಡಿಟಿಚಿಣಚಿಞಚಿ.gov.iಟಿ ಇಮೇಲ್ ಐಡಿ ಸಂಪರ್ಕಿಸಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳಾದ ಲಕ್ಷö್ಮಣ ಬಬಲಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ


Gadi Kannadiga

Leave a Reply