This is the title of the web page
This is the title of the web page

Please assign a menu to the primary menu location under menu

Local News

ತುರ್ತು ನಿರ್ವಹಣಾ ಕಾರ್ಯ: ಜೂ.೨೫ ರಂದು ವಿದ್ಯುತ್ ವ್ಯತ್ಯಯ


ಬೆಳಗಾವಿ,ಜೂನ್೨೪: ಕ.ವಿ.ಪ್ರ.ನಿ.ನಿ. ವತಿಯಿಂದ ಮೊದಲನೇಯ ತ್ರೆöÊಮಾಸಿಕ ಹಾಗೂ ತುರ್ತು ನಿರ್ವಹಣಾ ಕಾರ್ಯಗಳನ್ನು ಕೈಗೊಳ್ಳುತ್ತಿರುವುದರಿಂದ ೧೧೦ ಕೆ.ವ್ಹಿ. ಖಾನಾಪೂರ ಉಪಕೇಂದ್ರದಿಂದ ಸರಬರಾಜು ಆಗುವ ವಿದ್ಯತ್‌ನ್ನು ಜೂನ್ ೨೫ ರಂದು ಬೆಳಿಗ್ಗೆ ೯ ಗಂಟೆಯಿಂದ ಸಂಜೆ ೪ ಗಂಟೆಯವರೆಗೆ ಸ್ಥಗಿತಗೊಳಿಸಲಾಗುವುದು.
ಲೈಲಾ ಶುಗರ ಕಾರ್ಖಾನೆ, ದೇವಲತ್ತಿ, ಬಿದರಭಾವಿ, ಭಂಡಾರಗಾಳಿ, ಗರ್ಲಗುಂಜಿ, ತೋಪಿನಕಟ್ಟಿ, ಬೋರಗಾಂವ, ನಿಡಗಲ, ದೊಡ್ಡಹೊಸೂರ, ಸಣ್ಣಹೊಸೂರ, ಕರಂಬಳ, ಜಳಗಾ, ಕುಪ್ಪಟಗಿರಿ, ಲೋಕೋಳ್ಳಿ, ಲಕ್ಕೇಬೈಲ, ಯಡೋಗಾ, ಬಳೋಗಾ, ಜೈನಕೊಪ್ಪ, ಗಾಂಧಿನಗರ, ಹಲಕರ್ಣಿ, ಕೋರ್ಟ ಪ್ರದೇಶ, ಕೈಗಾರಿಕಾ ಪ್ರದೇಶ, ಬಾಚೋಳ್ಳಿ, ಕೌಂದಲ, ಝಾಡನಾವಗಾ, ಲಾಲವಾಡಿ, ಹೆಬ್ಬಾಳ, ನಂದಗಡ, ಕಸಬಾ ನಂದಗಡ, ಕಾರಲಗಾ, ಶಿವೊಳ್ಳಿ ಹಾಗೂ ಚಾಪಗಾಂವ ಗ್ರಾಮಗಳಿಗೆ ಹಾಗೂ ಸದರಿ ಗ್ರಾಮಗಳ ನೀರಾವರಿ ಪಂಪ್‌ಸೆಟ್‌ಗಳ ಏರಿಯಾಗಳಿಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.
ಅದೇ ರೀತಿ ೩೩ಕೆ.ವ್ಹಿ. ಲೋಂಡಾ ಹಾಗೂ ಖಾನಾಪೂರ ಉಪಕೇಂದ್ರದಲ್ಲಿಯೂ ತುರ್ತು ನಿರ್ವಹಣಾ ಕಾರ್ಯ ಕೈಗೊಳ್ಳುತ್ತಿರುವುರಿಂದ ಜೂನ್ ೨೫ ರಂದು ಬೆಳಿಗ್ಗೆ ೯ ಗಂಟೆಯಿಂದ ಸಂಜೆ ೪ ಗಂಟೆಯವರೆಗೆ ಈ ವಿದ್ಯುತ್ ವಿತರಣಾ ಕೇಂದ್ರ ವ್ಯಾಪ್ತಿಯ ನಾಗರಗಾಳಿ, ನಾಗರಗಾಳಿ ರೇಲ್ವೆ ಸ್ಟೇಶನ್, ಮುಂಡವಾಡ, ಕುಂಬರ್ಡಾ, ತಾರವಾಡ, ಲೋಂಡಾ, ಲೋಂಡಾ ರೇಲ್ವೆ ಸ್ಟೇಶನ್, ಗುಂಜಿ, ಮೋಹಿಶೇಟ, ವಾಟ್ರೆ, ಭಾಲ್ಕೆ ಬಿ.ಕೆ, ಭಾಲ್ಕೆ ಕೆ.ಎಚ್, ಶಿಂದೋಳ್ಳಿ, ಹೊನ್ಕಲ, ಸಾವರಗಾಳಿ, ಅಂಬೇವಾಡಿ, ತಿವೊಳ್ಳಿ, ಡೋಕೆಗಾಳಿ, ಖಾನಾಪೂರ ಪಟ್ಟಣ, ಶಿವಾಜಿ ನಗರ, ರುಮೇವಾಡಿ, ಓತೋಳ್ಳಿ, ಮೊದೇಕೊಪ್ಪ, ನಾಗುರ್ಡಾ, ರಾಮಗುರವಾಡಿ, ಅಂಬೋಳಿ, ಹರಸನವಾಡಿ, ಅಸೋಗಾ, ನೇರಸಾ, ಅಶೋಕ ನಗರ, ಮಂತುರ್ಗಾ, ಶೇಡೇಗಾಳಿ ಹಾಗೂ ಹೆಮ್ಮಡಗಾ ಪ್ರದೇಶಗಳಿಗೆ ಹಾಗೂ ಸದರಿ ಗ್ರಾಮಗಳ ನೀರಾವರಿ ಪಂಪ್‌ಸೆಟ್‌ಗಳ ಏರಿಯಾಗಳಿಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಬೆಳಗಾವಿ ಗ್ರಾಮೀಣ ವಿಭಾಗದ ಕಾರ್ಯನಿರ್ವಾಹಕ ಇಂಜಿನೀಯರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Gadi Kannadiga

Leave a Reply