ಗದಗ ಅಗಸ್ಟ ೨೨ : ಗದಗ ಜಿಲ್ಲಾಡಳಿತ, ಜಿ.ಪಂ. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಡಿ. ದೇವರಾಜ ಅರಸು ಜನ್ಮದಿನಾಚರಣೆಯನ್ನು ನಗರದ ಕನಕ ಭವನದಲ್ಲಿ ಅಗಸ್ಟ ೨೮ ಬೆಳಿಗ್ಗೆ ೧೦ ಗಂಟೆಗೆ ಅರ್ಥಪೂರ್ಣವಾಗಿ ಆಚರಿಸಬೇಕೆಂದು ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್. ತಿಳಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಇತ್ತೀಚೆಗೆ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸುರವರ ೧೦೮ ನೇ ಜನ್ಮ ದಿನಾಚರಣೆ ಕುರಿತು ಹಮ್ಮಿಕೊಳ್ಳಲಾಗಿದ್ದ ಪೂರ್ವಬಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿ ರವಿ ಗುಂಜೀಕರ್ ಅವರು ಮಾತನಾಡಿ ಕಳೆದ ವರ್ಷ ಡಿ.ದೇವರಾಜ ಅರಸುರವರ ಜನ್ಮದಿನಾಚರಣೆ ಸಂದರ್ಭದಲ್ಲಿ ಮೂರು ದಿನಗಳ ಕಾಲ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ಪ್ರಸಕ್ತ ವರ್ಷ ಡಿ.ದೇವರಾಜ ಅರಸುರವರ ಜನ್ಮದಿನಾಚರಣೆ ನಿಮಿತ್ತ ಅಗಸ್ಟ ೨೮ ರಂದು ಕಾರ್ಯಕ್ರಮಕ್ಕೂ ಮುನ್ನ ಬೆಳಿಗ್ಗೆ ೭ : ೩೦ ಕ್ಕೆ ನಗರದ ಚೆನ್ನಮ್ಮ ವೃತ್ತದಿಂದ ಕನಕ ಭವನದವರೆಗೆ ಡಿ.ದೇವರಾಜ ಅರಸು ಅವರ ಭಾವ ಚಿತ್ರ ಮೆರವಣಿಗೆ ಜರುಗುವುದು. ಮೆರವಣಿಗೆಯಲ್ಲಿ ವಿವಿಧ ಕಲಾ ತಂಡಗಳ ಕಲಾವಿದರಿಂದ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ೨೦೨೨-೨೩ ನೇ ಸಾಲಿನಲ್ಲಿ ಹತ್ತನೇ ತರಗತಿ ಹಾಗೂ ಧ್ವೀತಿಯ ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಗಳಿಸಿದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಶಾಲಾ ಮಕ್ಕಳಿಗೆ ರಂಗೋಲಿ ಸ್ಪರ್ಧೆ ಮತ್ತು ವಿವಿಧ ಕ್ರೀಡಾ ಚಟುವಟಿಕೆಗಳನ್ನು ಆಯೋಜಿಸಲಾಗುವುದು.
ಕನಕ ಭವನದ ಮುಖ್ಯ ಪ್ರವೇಶದಲ್ಲಿ ಡಿ ದೇವರಾಜ ಅರಸು ಅವರ ಜೀವನ ಚರಿತ್ರೆಯ ಬಗ್ಗೆ ಛಾಯಾ ಚಿತ್ರಗಳೊಂದಿಗೆ ಶಾಲಾ ಮಕ್ಕಳಿಗೆ ವಿವರಗಳನ್ನು ನೀಡಲಾಗುವುದು ಎಂದು ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿಗಳು ರವಿ ಗುಂಜಿಕರ ತಿಳಿಸಿದರು.
ಸಭೆಯಲ್ಲಿ ಕಾರ್ಯಕ್ರಮದ ಸ್ಥಳದ ಸ್ವಚ್ಛತೆ, ವೇದಿಕೆ ವ್ಯವಸ್ಥೆ, ಸಾಂಸ್ಕೃತಿಕ ಕಾರ್ಯಕ್ರಮಗಳು, ಶಿಷ್ಟಾಚಾರದನ್ವಯ ಆಮಂತ್ರಿಕ ಪತ್ರಿಕೆ ಮುದ್ರಣ, ಉಪನ್ಯಾಸಕರ ನೇಮಕ, ಬ್ಯಾನರ್ ಅಳವಡಿಕೆ, ಬಹುಮಾನ ವಿತರಣೆ ಕುರಿತು ಚರ್ಚಿಸಲಾಯಿತು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಸಿ.ಆರ್.ಮುಂಡರಗಿ, ಮಹಿಳಾ ಮತ್ತು ಮಕ್ಕಳ ಅಬಿವೃದ್ಧಿ ಇಲಾಖೆ ಉಪನಿರ್ದೇಶಕ ಪಿ.ವೈ.ಶೆಟ್ಟೆಪ್ಪನವರ, ಹಿಂದುಳಿದ ವರ್ಗಗಳ ಸಮಾಜದ ಒಕ್ಕೂಟ ಅಧ್ಯಕ್ಷ ಮಲ್ಲಿಕಾರ್ಜುನ ಐಲಿ, ಹಾಲುಮತ ಮಹಾಸಭಾ ರಾಜಾಧ್ಯಕ್ಷ ರುದ್ರಪ್ಪ ಗುಳಗುಳಿ, ಗದಗ ಜಿಲ್ಲಾ ಕುರುಬರ ಸಂಘದ ಅಧ್ಯಕ್ಷ ಫಕ್ಕೀರಪ್ಪ ಹೆಬಸೂರ, ಜಿಲ್ಲಾ ಹೆಳವರ ಸಮಾಜದ ಅಧ್ಯಕ್ಷ ಕೆಂಚಪ್ಪ ಹೆಳವರ, ಹಿಂದುಳಿದ ಸಮುದಾಯಗಳ ಮಹಾಮಂಡಳಿಯ ಕಾರ್ಯದರ್ಶಿ ಹರೀಶ ಪೂಜಾರ, ಜಿಲ್ಲಾ ಮಡಿವಾಳ ಸಂಘದ ಅಧ್ಯಕ್ಷ ಫಕ್ಕೀರಪ್ಪ ಮಡಿವಾಳ, ಜಿಲ್ಲಾ ವಿಶ್ವ ಕರ್ಮ ಸಂಘದ ಅಧ್ಯಕ್ಷ ಆರ್.ಡಿ.ಕಡ್ಲಿಕೊಪ್ಪ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಸೇರಿದಂತೆ ವಿವಿಧ ಇಲಾಖೆಯ ಜಿಲ್ಲಾಮಟ್ಟದ ಅಧಿಕಾರಿಗಳು ಹಾಜರಿದ್ದರು.
Gadi Kannadiga > State > ಡಿ.ದೇವರಾಜ ಅರಸು ಜನ್ಮದಿನಾಚರಣೆ : ಪೂರ್ವ ಸಿದ್ಧತಾ ಸಭೆ
ಡಿ.ದೇವರಾಜ ಅರಸು ಜನ್ಮದಿನಾಚರಣೆ : ಪೂರ್ವ ಸಿದ್ಧತಾ ಸಭೆ
Suresh22/08/2023
posted on

More important news
ಬೆಳಗಾವಿಯ ಹುಡುಗರ ಸಾಹಸ ” ಪರ್ಯಾಯ”
18/09/2023