ಯರಗಟ್ಟಿ: ೭೬ನೇ ಸ್ವಾತಂತ್ರ‍್ಯ ದಿನಾಚರಣೆ ಅಂಗವಾಗಿ ಪೂರ್ವ ಸಿದ್ಧತೆ ಕುರಿತು ತಹಶೀಲ್ದಾರ ಕಚೇರಿ ವತಿಯಿಂದ ಸಭೆ ನಡೆಸಲಾಯಿತು.
ಪಟ್ಟಣದ ಸರಕಾರಿ ಹಿರಿಯ ಪ್ರಾಥಮಿಕ ಶಾಲಾವರಣದಲ್ಲಿ ಸ್ವಾತಂತ್ರ‍್ಯ ದಿನಾಚರಣೆ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ತಹಸೀಲ್ದಾರ್ ಎಮ್. ಎನ್. ಮಠದ ತಿಳಿಸಿದರು.
ಪ್ರತಿ ವರ್ಷದಂತೆ ಈ ವರ್ಷವೂ ಕೂಡ ವಿಜೃಂಭಣೆ ಯಿಂದ ಸ್ವಾತಂತ್ರ‍್ಯ ದಿನಾಚರಣೆ ಆಚರಿಸುವಂತೆ ಚರ್ಚಿಸಲಾಯಿತು. ಶಾಲಾ ಕಾಲೇಜಿನ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಯನ್ನು ಏರ್ಪಡಿಸುವುದು, ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನೆರೆವೇರಿಸಿ ಮಕ್ಕಳಿಗೆ ಪ್ರಥಮ, ದ್ವಿತೀಯ ಬಹುಮಾನಗಳನ್ನು ಆಗಷ್ಟ್ ೧೫ರಂದು ವಿತರಿಸಬೇಕು ಹಾಗೂ ವಿದ್ಯಾರ್ಥಿಗಳಿಗೆ ಸಿಹಿ ಊಟದ ವ್ಯವಸ್ಥೆಯನ್ನು ಮಾಡಲು ನಿರ್ಣಯಿಸಲಾಯಿತು. ಯರಗಟ್ಟಿ ತಾಲೂಕಿನ ಎಲ್ಲಾ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.