ಗದಗ ನವೆಂಬರ್ ೨೫: ಡಿಸೆಂಬರ್ ೩ ರಂದು ಬೆ.೧೦.೩೦ ಗಂಟೆಗೆ ಜಿಲ್ಲಾಡಳಿತ ಸಭಾಂಗಣದಲ್ಲಿ ವಿಶ್ವ ವಿಕಲಚೇತನರ ದಿನಾಚರಣೆಯನ್ನು ಅರ್ಥಪೂರ್ಣವಾಗಿ ವ್ಯವಸ್ಥಿತವಾಗಿ ಆಚರಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಮಾರುತಿ ಎಂ.ಪಿ. ತಿಳಿಸಿದರು.
ಜಿಲ್ಲಾಡಳಿತ ಭವನದಲ್ಲಿನ ಕೇಸ್ವಾನ್ ಮೀಟಿಂಗ್ಹಾಲ್ನಲ್ಲಿ ಗುರುವಾರದಂದು ಜರುಗಿದ ವಿಶ್ವ ವಿಕಲಚೇತನರ ದಿನಾಚರಣೆ ಕುರಿತು ಜರುಗಿದ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ವಿಶ್ವ ವಿಕಲಚೇತನರ ದಿನಾಚರಣೆ ನಿಮಿತ್ಯ ನವೆಂಬರ್ ೩೦ ರಂದು ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಗುತ್ತಿದ್ದು ವಿವಿಧ ಇಲಾಖೆಯ ಅಧಿಕಾರಿಗಳು ದಿನಾಚರಣೆಯನ್ನು ಯಶಸ್ವಿಗೊಳಿಸಲು ಸಹಕರಿಸಬೇಕೆಂದು ಅಪರ ಜಿಲ್ಲಾಧಿಕಾರಿಗಳು ಸೂಚಿಸಿದರು.
ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಕೆ. ಮಹಾಂತೇಶ ಮಾತನಾಡಿ ಜಿಲ್ಲಾ ಮಟ್ಟದಲ್ಲಿ ಕ್ರೀಡಾ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಗಿದ್ದು ದಿನಾಚರಣೆ ನಿಮಿತ್ಯ ಎಲ್ಲ ಸಿದ್ಧತೆಗೆ ಕ್ರಮ ವಹಿಸಲಾಗಿದೆ ಎಂದರು.
ಸಭೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಪರಶುರಾಮ ಶೆಟ್ಟೆಪ್ಪನವರ, ಗದಗ ಬೆಟಗೇರಿ ನಗರಸಭೆ ಆಯುಕ್ತ ರಮೇಶ, ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಜಗದೀಶ ನುಚ್ಚಿನ್ , ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಬಸವಲಿಂಗಪ್ಪ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು, ಸ್ವಯಂ ಸೇವಾ ಸಂಸ್ಥೆಗಳ ಮುಖ್ಯಸ್ಥರು, ವಿವಿದೋದ್ದೇಶ ಪುನರ್ವಸತಿ ಕಾರ್ಯಕರ್ತರು ಹಾಗೂ ಸಿಬ್ಬಂದಿಗಳು ಹಾಜರಿದ್ದರು.
Gadi Kannadiga > State > ವಿಶ್ವ ವಿಕಲಚೇತನರ ದಿನಾಚರಣೆ : ಪೂರ್ವಭಾವಿ ಸಭೆ