This is the title of the web page
This is the title of the web page

Please assign a menu to the primary menu location under menu

State

ಮುದ್ದೆಬಿಹಾಳ ತಾಲೂಕಿನ ಬಿದರಕುಂದಿ ಗ್ರಾಮ ಭೇಟಿ: ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಿದ್ಧತಾ ಸಭೆ


ವಿಜಯಪುರ ಜೂನ್ 22 : ಮುದ್ದೆಬಿಹಾಳ ತಾಲೂಕಿನ ಬಿದರಕುಂದಿ ಗ್ರಾಮದಲ್ಲಿ ಜೂನ್ 24ರಂದು ನಿಗದಿಯಾಗಿರುವ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮದ ಪೂರ್ವಭಾವಿ ಸಿದ್ಧತಾ ಸಭೆಯು ಜಿಲ್ಲಾಧಿಕಾರಿಗಳಾದ ಡಾ.ವಿಜಯಮಹಾಂತೇಶ ದಾನಮ್ಮನವರ ಅಧ್ಯಕ್ಷತೆಯಲ್ಲಿ ಜೂನ್ 22ರಂದು ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ನಡೆಯಿತು.
ಈ ವೇಳೆ ಮಾತನಾಡಿದ ಜಿಲ್ಲಾಧಿಕಾರಿಗಳು, ಕಂದಾಯ ಇಲಾಖೆಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳು ತಿಳಿಸಿದಂತೆ ಪ್ರತಿ ತಿಂಗಳು ಮೂರನೇ ಶನಿವಾರ ಗ್ರಾಮ ಭೇಟಿ ವಾಸ್ತವ್ಯ ಕಾರ್ಯಕ್ರಮ ನಡೆಸಲಾಗುತ್ತದೆ. ಅದರಂತೆ ಮುಖ್ಯವಾಗಿ ಸಹಾಯಕ ಆಯುಕ್ತರು, ತಹಸೀಲ್ದಾರರು, ಕಂದಾಯ ನಿರೀಕ್ಷಕರು ಮತ್ತು ಗ್ರಾಮ ಲೆಕ್ಕಿಗರು ಮತ್ತು ಇನ್ನೀತರ ಅಧಿಕಾರಿಗಳು ಗ್ರಾಮ ಭೇಟಿ ವೇಳೆ ತಿಳಿಸಿದ ಮಾರ್ಗಸೂಚಿಗಳನ್ನು ಪಾಲನೆ ಮಾಡಬೇಕು ಎಂದು ಸೂಚಿಸಿದರು.
ಮಾರ್ಗಸೂಚಿಯಂತೆ ಅಧಿಕಾರಿಗಳು ಗ್ರಾಮದಲ್ಲಿ ಬೆಳಗ್ಗೆ 10 ರಿಂದ ಸಂಜೆ 5ರವರೆಗೆ ಇರಬೇಕು. ಗ್ರಾಮ ಭೇಟಿ ನೀಡುವ ಮೊದಲೇ, ಗ್ರಾಮ ಭೇಟಿ ಕಾರ್ಯಸೂಚಿಗಳನ್ವಯ ಫಲಾನುಭವಿಗಳ ಅರ್ಜಿಗಳನ್ನು ಸಂಗ್ರಹಿಸಿ ಅರ್ಜಿಗಳ ಮೇಲೆ ಯಾರ ಹಂತದಲ್ಲಿ ಕ್ರಮ ತೆಗೆದುಕೊಳ್ಳಬೇಕು ಎನ್ನುವ ಪ್ರಕ್ರಿಯೆಯನ್ನು ಪೂರ್ಣಗೊಳಿಸಿ ಗ್ರಾಮಗಳಿಗೆ ಭೇಟಿ ನೀಡಿದ ಮೇಲೆ ವಿಲೇವಾರಿಯಾಗಿರುವ ಬಗ್ಗೆ ಸಂಬAಧಪಟ್ಟ ಫಲಾನುಭವಿಗಳಿಗೆ ತಿಳಿಸಬೇಕು. ಬೇರೆ ಬೇರೆ ಹಂತದಲ್ಲಿ ವಿಚಾರಣೆ ಅವಶ್ಯಕತೆ ಇದ್ದರೆ ಅದನ್ನು ಸಹ ಪೂರ್ಣಗೊಳಿಸಲು ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿಗಳು ನಿರ್ದೇಶನ ನೀಡಿದರು.
ಭೇಟಿ ನೀಡಿದ ಗ್ರಾಮದಲ್ಲಿನ ಎಲ್ಲಾ ಪಹಣಿಯಲ್ಲಿನ ಲೋಪದೋಷಗಳು, ಪಹಣಿ ಕಾಲಂ 3 ಮತ್ತು ಅಕಾರ್ ಬಂದ್ ತಾಳೆ ಹೊಂದಿರುವ ಬಗ್ಗೆ ಖಚಿತಪಡಿಸಿಕೊಳ್ಳಬೇಕು. ಗ್ರಾಮದ ಎಲ್ಲ ಅರ್ಹ ವ್ಯಕ್ತಿಗಳಿಗೆ ಪಿಂಚಣಿ ಸೌಲಭ್ಯ ದೊರೆಯುತ್ತಿರುವ ಬಗ್ಗೆ ಪರಿಶೀಲಿಸಬೇಕು. ಬಿಟ್ಟು ಹೋದಂತಹ ಪ್ರಕರಣಗಳಿಗೆ ಸ್ಥಳದಲ್ಲಿಯೇ ಆದೇಶ ನೀಡಲು ಸಿದ್ಧತೆ ಮಾಡಿಕೊಳ್ಳಬೇಕು ಎಂದು ಸೂಚಿಸಿದರು. ಗ್ರಾಮದಲ್ಲಿ ಸ್ಮಶಾನ ಲಭ್ಯತೆಯ ಬಗ್ಗೆ ಪರಿಶೀಲಿಸಬೇಕು. ಗ್ರಾಮದಲ್ಲಿ ಆಶ್ರಯ ಯೋಜನೆಗೆ ಅವಶ್ಯಕತೆ ಇದ್ದಲ್ಲಿ ಲಭ್ಯ ಜಮೀನು ಕಾಯ್ದಿರಿಸಲು ಕ್ರಮ ವಹಿಸಬೇಕು. ಸರ್ಕಾರಿ ಜಮೀನಿನ ಅಕ್ರಮ ಒತ್ತುವರಿ ತೆರವುಗೊಳಿಸಬೇಕು ಎಂದರು.
ಆಧಾರ್ ಕಾರ್ಡಿನ ಅನುಕೂಲತೆಯ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಬೇಕು. ಜಾತಿ ಮತ್ತು ಆದಾಯ ಪ್ರಮಾಣಪತ್ರವನ್ನು ಆನ್‌ಲೈನ್ ಮೂಲಕ ಸಂಬAಧಿಸಿದ ನಾಡ ಕಚೇರಿಗಳಲ್ಲಿ ಅರ್ಜಿ ಸಲ್ಲಿಸಲು ಅವಕಾಶವಿದೆ ಎಂದು ಸಾರ್ವಜನಿಕರಿಗೆ ತಿಳಿಸುವ ಕಾರ್ಯ ಮಾಡಬೇಕು ಎಂದು ಸಲಹೆ ಮಾಡಿದರು.
ಎಲ್ಲಾ ಅರ್ಹ ಬಡ ಕುಟುಂಬಗಳಿಗೆ ಬಿಪಿಎಲ್ ಕಾರ್ಡ್ ದೊರೆತಿರುವ ಬಗ್ಗೆ ಖಾತ್ರಿ ಪಡಿಸಿಕೊಳ್ಳಬೇಕು. ಗ್ರಾಮ್ ಒನ್ ಕೇಂದ್ರಗಳ ಮೂಲಕ ಎಬಿಆರ್‌ಕೆ ಕಾರ್ಡುಗಳನ್ನು ನೀಡಬೇಕು. ಬಾಕಿ ಇರುವ ರೈತರಿಗೆ ಕಿಸಾನ್ ಕಾರ್ಡ್ ಕೊಡಬೇಕು. ಅರಣ್ಯ ಇಲಾಖೆಯಿಂದ ರೈತರಿಗೆ ನೀಡಬೇಕು. ಕೃಷಿ ಇಲಾಖೆಯಿಂದ ಬೀಜಗಳ ವಿತರಣೆ ಮಾಡಬೇಕು ಎಂದು ಜಿಲ್ಲಾಧಿಕಾರಿಗಳು ಸಲಹೆ ಮಾಡಿದರು.
ಮಳೆಗಾಲ ಸಮಯವಾಗಿದ್ದರಿಂದ ಮಳೆಯಿಂದಾಗಿ ಅರ್ಜಿ ಸ್ವೀಕಾರಕ್ಕೆ ತೊಂದರೆಯಾಗದ ಹಾಗೆ ಸಮುದಾಯ ಭವನ ಇಲ್ಲವೇ ಇನ್ನೀತರ ಕಡೆಗಳಲ್ಲಿ ಕಾರ್ಯಕ್ರಮಕ್ಕೆ ಏರ್ಪಾಡು ಮಾಡಬೇಕು ಎಂದು ತಿಳಿಸಿದರು.
ಅಧಿಕಾರಿಗಳಿಗೆ ನಿರ್ದೇಶನ: ಜಿಲ್ಲಾಧಿಕಾರಿಗಳ ಗ್ರಾಮ ಭೇಟಿಯ ಬಗ್ಗೆ ಜನರಲ್ಲಿ ಸಾಕಷ್ಟು ನಿರೀಕ್ಷೆ ಇರುತ್ತದೆ. ಅದರಂತೆ ಕಾರ್ಯವಾಗಬೇಕು. ಗ್ರಾಮ ಭೇಟಿ ದಿನಂದು ಎಲ್ಲಾ ಅಧಿಕಾರಿಗಳು ಕಡ್ಡಾಯ ಹಾಜರಾಗಬೇಕು. ಅರ್ಜಿಗಳನ್ನು ನಿಯಮಾನುಸಾರ ಪರಿಶೀಲಿಸಿ ಸಾಧ್ಯವಾದಷ್ಟು ಸ್ಥಳದಲ್ಲಿಯೇ ಅರ್ಜಿ ವಿಲೇವಾರಿಗೆ ಒತ್ತು ಕೊಡಬೇಕು ಎಂದು ಜಿಲ್ಲಾಧಿಕಾರಿಗಳು ಎಲ್ಲ ಅಧಿಕಾರಿಗಳಿಗೆ ಸೂಚಿಸಿದರು.
ಜಿಪಂ ಸಿಇಓ ಸಲಹೆ: ಈ ವೇಳೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಹುಲ್ ಶಿಂಧೆ ಅವರು ಮಾತನಾಡಿ, ಗ್ರಾಮದಲ್ಲಿನ ಅಂಗನವಾಡಿಗಳು ಸರಿಯಾಗಿ ಕಾರ್ಯನಿರ್ವಹಿಸಬೇಕು. ಗರ್ಭಿಣಿಯರಿಗೆ ಆರೋಗ್ಯ ತಪಾಸಣೆಗೆ ಏರ್ಪಾಡು ಮಾಡಬೇಕು. ಜಲಜೀವನ ಮಿಷನ್ ಯೋಜನೆಯ ಅನುಷ್ಠಾನದ ಬಗ್ಗೆ ಪರಿಶೀಲಿಸಬೇಕು. ಗ್ರಾಮಸ್ಥರಿಗೆ ಪ್ರೇರೇಪಣೆ ನೀಡಿ ಕೃಷಿ ಹೊಂಡ ನಿರ್ಮಾಣದ ಬಗ್ಗೆ ತಿಳಿಸಬೇಕು. ಗ್ರಾಮದ ವಿಕಲಚೇತನರಿಗೆ ಗುರುತಿನ ಚೀಟಿ ನೀಡಲು ಕ್ರಮ ವಹಿಸಬೇಕು ಎಂದು ಸೂಚಿಸಿದರು.
ಗ್ರಾಮದ ಮಾಹಿತಿ: ಬೀದರಕುಂದಿ ಗ್ರಾಮದಲ್ಲಿ 1755 ಪರುಷರು ಹಾಗೂ 1655 ಮಹಿಳೆಯರು ಸೇರಿ ಒಟ್ಟು 3410 ಜನಸಂಖ್ಯೆ ಇದೆ. ಸಾಕ್ಷರತಾ ಪ್ರಮಾಣ ಶೇ.75ರಷ್ಟಿದೆ. 46 ಜನ ವೃದ್ದಾಪ್ಯ ವೇತನ, 94 ಜನರು ವಿಕಲಚೇತನರ ವೇತನ, 152 ಜನರು ವಿದವಾ ವೇತನ, 210 ಜನರು ಸಂದ್ಯಾ ಸುರಕ್ಷಾ ವೇತನ, 10 ಜನರು ಮನಸ್ವಿನಿ ವೇತನ ಪಡೆಯುತ್ತಿದ್ದಾರೆ. 101 ಅಂತ್ಯೋದಯ, 671 ಬಿಪಿಎಲ್ ಹಾಗೂ 30 ಎಪಿಎಲ್ ಸೇರಿ ಒಟ್ಟು 802 ಪಡಿತರ ಚೀಟಿಗಳಿವೆ. ಗ್ರಾಮ್ ಒನ್ ಕೇಂದ್ರವಿದೆ. 267 ನಲ್ಲಿ ಸಂಪರ್ಕ ನೀಡಲಾಗಿದೆ ಎಂದು ತಹಸೀಲ್ದಾರರು ಸಭೆಗೆ ಮಾಹಿತಿ ನೀಡಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿಗಳಾದ ರಮೇಶ ಕಳಸದ, ವಿಜಯಪುರ ಸಹಾಯಕ ಆಯುಕ್ತರಾದ ಬಲರಾಮ ಲಮಾಣಿ, ಜಿಲ್ಲಾ ಪಂಚಾಯತ್, ಕೃಷಿ, ತೋಟಗಾರಿಕೆ, ಪದವಿಪೂರ್ವ, ಸಾರ್ವಜನಿಕ ಶಿಕ್ಷಣ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿದ್ದರು.


Gadi Kannadiga

Leave a Reply