ಬೆಳಗಾವಿ: ಬೆಳಗಾವಿಯ ಜನರ ಆಶೀವಾರ್ದವು ನಮಗೆ ಪ್ರೇರಣಾಶಕ್ತಿಯಾಗಿದೆ. ಈ ನೆಲಕ್ಕೆ ಬರುವುದು ಯಾವುದೇ ತೀರ್ಥ ಯಾತ್ರೆಗಿಂತ ಕಡಿಮೆಯಿಲ್ಲ. ಕಿತ್ತೂರು ಚೆನ್ನಮ್ಮ, ಸಂಗೊಳ್ಳಿ ರಾಯಣ್ಣನ ಜನ್ಮಭೂಮಿಯಾಗಿದೆ. ಗುಲಾಮಗಿರಿ ವಿರುದ್ಧ ಹೋರಾಟ ಹಾಗೂ ನವಭಾರತ £ರ್ಮಾಣದಲ್ಲಿ ಬೆಳಗಾವಿಯ ಪಾತ್ರ ಪ್ರಮುಖವಾಗಿದೆ.
ರಾಜ್ಯದಲ್ಲಿ ಈಗ ಸ್ಟಾರ್ಟ್ ಅಪ್ ಗಳ ಚರ್ಚೆಯಾಗುತ್ತಿದೆ. ಆದರೆ ಬೆಳಗಾವಿಯಲ್ಲಿ ನೂರು ವರ್ಷಗಳ ಹಿಂದೆಯೇ ಸ್ಟಾರ್ಟ್ ಅಪ್ ಆರಂಭಗೊಂಡಿತ್ತು. ಅಂದು ಬೆಳಗಾವಿಯಲ್ಲಿ ಬಾಬುರಾವ್ ಪುಸಾಳ್ಕರ್ ಅವರು ಸ್ಟಾರ್ಟ್ ಅಪ್ ಶುರು ಮಾಡಿದ್ದರು.
ಇಂದಿನ ಅಭಿವೃದ್ಧಿ ಕಾಮಗಾರಿಗಳ ಲೋಕಾರ್ಪಣೆಯಿಂದ ಬೆಳಗಾವಿಯ ಅಭಿವೃದ್ಧಿಗೆ ವೇಗ ದೊರೆಯಲಿದೆ. ಬೆಳಗಾವಿಯಿಂದ ಇಂದು ಇಡೀ ದೇಶದ ಕೋಟ್ಯಂತರ ರೈತರಿಗೆ ೧೩ನೇ ಕಂತಿನ ೧೬ ಸಾವಿರ ಕೋಟಿ ರೂಪಾಯಿ ಜಮೆಯಾಗಿರುತ್ತದೆ.ಇಷ್ಟೊಂದು ದೊಡ್ಡ ಮೊತ್ತ ಒಂದು ಕ್ಷಣದಲ್ಲಿ ನೇರವಾಗಿ ರೈತರ ಖಾತೆಗೆ ಜಮೆಯಾಗುತ್ತಿರುವುದು ಸೋಜಿಗದ ಸಂಗತಿ. ಯಾವುದೇ ರೀತಿಯ ಸೋರಿಕೆಯಿಲ್ಲದೇ ಇಷ್ಟೊಂದು ದೊಡ್ಡ ಮೊತ್ತ ಜಮೆಯಾಗಿದೆ.
ದೇಶದ ರೈತರಿಗೆ ಹೋಳಿ ಹಬ್ಬದ ಶುಭಾಶಯಗಳು. ಬದಲಾಗುತ್ತಿರುವ ಇಂದಿನ ಭಾರತ ಒಂದೊಂದು ಹೆಜ್ಜೆ ಅಭಿವೃದ್ಧಿಯತ್ತ ಧಾಪುಗಾಲು ಇಡುತ್ತಿದೆ. ದೇಶದಲ್ಲಿ ಹಿಂದೆ ಸಣ್ಣ ರೈತರನ್ನು £ರ್ಲಕ್ಷಿಸಲಾಗುತ್ತಿತ್ತು. ಆದರೆ ನಮ್ಮ ಸರ್ಕಾರದ ಆದ್ಯತೆ ಸಣ್ಣ ರೈತರಿಗೆ ನೆರವಾಗುವುದಾಗಿದೆ.
ತಲಾ ಎರಡೂವರೆ ಲಕ್ಷ ರೂಪಾಯಿ ಈಗಾಗಲೇ ರೈತರ ಖಾತೆಗೆ ಜಮಾ ಆಗಿದೆ. ಕೃಷಿ ಅಗತ್ಯತೆಗಳಿಗಾಗಿ ಸಾಲಕ್ಕಾಗಿ ರೈತರು ಇತರರ ಕಡೆ ಕೈ ಒಡ್ಡದಂತೆ ಇದರಿಂದ ಅನುಕೂಲವಾಗಿದೆ.
ಕೃಷಿಯನ್ನು ಆಧು£ಕತೆಯೊಂದಿಗೆ ಜೋಡಿಸಿ ಭವಿಷ್ಯತ್ತಿನ ಅವಶ್ಯಕತೆ ಪೂರ್ಣಗೊಳಿಸಲಾಗುವುದು.
೨೦೧೪ ರಲ್ಲಿ ಕೃಷಿಗೆ ಮೀಸಲಿಟ್ಟ ಬಜೆಟ್ ಕೇವಲ ೨೫ ಸಾವಿರ ಕೋಟಿ ಇತ್ತು. ಈ ವರ್ಷ ನಮ್ಮ ಸರಕಾರದ ಬಜೆಟ್ ನಲ್ಲಿ ೧.೨೫ ಲಕ್ಷ ಕೋಟಿ ಮೀಸಲಿಡಲಾಗಿದೆ.
ನಮ್ಮ ಸರಕಾರವು ರೈತರನ್ನುವಕಿಸಾನ್ ಕ್ರೆಡಿಟ್ ಕಾರ್ಡ್ ಜತೆ ಜೋಡಿಸುವ ಕೆಲಸ £ರಂತರವಾಗಿ ನಡೆದಿದೆ. ಸಾವಯವ ಕೃಷಿಗೆ ಒತ್ತ £Ãಡಲಾಗುತ್ತಿದೆ. ಇದಲ್ಲದೇ “ಪಿಎಂ- ಪ್ರಣಾಮ್ ಯೋಜನೆ”ಯಡಿ ರಾಸಾಯ£ಕ ಮುಕ್ತ ಕೃಷಿಗೆ ಪ್ರೋತ್ಸಾಹ £Ãಡಲಾಗುತ್ತಿದೆ. ಪಾರಂಪರಿಕ ಕೃಷಿ ಪದ್ಧತಿಯನ್ನು ನಾವು ಇಂದು ಅಳವಡಿಸಿಕೊಳ್ಳಬೇಕಿದೆ. ಸಿರಿಧಾನ್ಯಬೆಳೆಗಳಿಗೆ ಸಿರಿಅನ್ನ ಯೋಜನೆ ಮೂಲಕ ಪ್ರೋತ್ಸಾಹ £Ãಡಲಾಗುತ್ತಿದೆ.
ಕರ್ನಾಟಕವು ಸಿರಿಧಾನ್ಯಗಳ ತವರು ಭೂಮಿಯಾಗಿದೆ. ಯಡಿಯೂರಪ್ಪ ನವರು ಸಿರಿಧಾನ್ಯ ಹಾಗೂ ಸಾವಯವ ಕೃಷಿಗೆ ಪ್ರೋತ್ಸಾಹ £Ãಡಿದ್ದರು.
ಕಬ್ಬು ಬೆಳೆಗಾರರ ಹಿತರಕ್ಷಣೆಗಾಗಿ ಸರಕಾರವು ಈ ಬಜೆಟ್ ನಲ್ಲಿ ೨೦೧೬-೧೭ ಗಿಂತ ಮುಂಚಿನ ಬಾಕಿ ಬಿಲ್ ಗಳ ಮೇಲೆ ತೆರಿಗೆಗಡ ವಿನಾಯಿತಿಯನ್ನು £Ãಡಲಾಗಿದೆ. ಇದರಿಂದ ಕಬ್ಬು ಬೆಳೆಗಾರರ ಸಹಕಾರಿ ಸಂಘಕ್ಕೆ ಸಹಕಾರಿಯಾಗಲಿದೆ.
ಕೃಷಿ, ಕೈಗಾರಿಕೆ, ಶಿಕ್ಷಣ, ಆರೋಗ್ಯ ಕ್ಷೇತ್ರದ ಪರಸ್ಪರ ಸಂಪರ್ಕ ದಿಂದ ಅಭಿವೃದ್ಧಿ ಸಾಧ್ಯ. ಆದ್ದರಿಂದ ಕರ್ನಾಟಕ ರಾಜ್ಯದಲ್ಲಿ ಈ ಕ್ಷೇತ್ರಗಳ ಬೆಳವಣಿಗೆಗೆ ಆದ್ಯತೆ £Ãಡಲಾಗುತ್ತಿದೆ. ಕರ್ನಾಟಕದಲ್ಲಿ ಅನೇಕ ರೈಲ್ವೆ ಯೋಜನೆಗಳನ್ನು ಕೈಗೆತ್ತಿಕೊಳ್ಳಲಾಗಿದೆ. ರೈಲುಸಂಪರ್ಕ ಯೋಜನೆಗಳಿಂದ ರಾಜ್ಯದ ಪ್ರಗತಿಗೆ ವೇಗ ದೊರಕಲಿದೆ.
ಲೋಂಡಾ-ಘಟಪ್ರಭಾ ಮಾರ್ಗ ಡಬ್ಲಿಂಗ್ £ಂದ ಪ್ರಯಾಣ ಇನ್ನಷ್ಟು ಸುಗಮವಾಗಲಿದೆ. ಉತ್ತಮ ರೈಲು ಸಂಪರ್ಕದಿಂದ ಇತರೆ ಕ್ಷೇತ್ರಗಳ ಪ್ರಗತಿಗೆ ಅನುಕೂಲವಾಗಲಿದೆ.
ಡಬಲ್ ಎಂಜಿನ್ ಸರಕಾರವು “ ವೇಗ”ದ ಪ್ರಗತಿಗೆ ಸಾಕ್ಷಿಯಾಗಿದೆ. ಜಲಜೀವನ ಮಿಷನ್ ಯೋಜನೆಯ ಅನುಷ್ಠಾನ ಇದಕ್ಕೆ ಸಾಕ್ಷಿಯಾಗಿದೆ.
ಗ್ರಾಮೀಣ ಪ್ರದೇಶದ ಶೇ.೬೫ ಕ್ಕೂ ಅಧಿಕ ಪ್ರದೇಶಗಳಲ್ಲಿ ಜಲಜೀವನ್ ಮಿಷನ್ ಯೋಜನೆ ಮೂಲಕ ಮನೆಮನೆಗೆ ಕುಡಿಯುವ £Ãರು ಒದಗಿಸಲಾಗುತ್ತಿದೆ. ವೇಣುಗ್ರಾಮ ಎಂಬ ಖ್ಯಾತಿಯನ್ನು ಬೆಳಗಾವಿ ಹೊಂದಿದೆ. ನಮ್ಮ ಸರಕಾರವು ಬಿದಿರು ಬೆಳೆ ಹಾಗೂ ಕಟಾವಿಗೆ ಅನುಮತಿ £Ãಡಿರುವುದರಿಂದ ಈ ಭಾಗದ ಕರಕುಶಲ ಕ್ಷೇತ್ರದ ಅಭಿವೃದ್ಧಿಗೆ ಸಹಕಾರಿಯಾಗಲಿದೆ.
ಬೆಳಗಾವಿಯ ಜನರು £Ãಡಿದ ಪ್ರೀತಿಯನ್ನು ಬಡ್ಡಿ ಸಮೇತ ಹಿಂದಿರುಗಿಸುವೆ. ಕರ್ನಾಟಕ ಹಾಗೂ ಬೆಳಗಾವಿಯ ಅಭಿವೃದ್ದಿಯೊಂದಿಗೆ £ಮ್ಮ ಪ್ರೀತಿಯ ಋಣ ತೀರಿಸುವೆ ಎಂದು ಪ್ರಧಾನಮಂತ್ರಿ ಅವರು ಭರವಸೆ £Ãಡಿದರು. ಇದಕ್ಕೂ ಮೊದಲು ೨೦೨೩ ಅಂತರಾಷ್ಟ್ರೀಯ ಸಿರಿಧಾನ್ಯ ವರ್ಷದ ಹಿನ್ನೆಲೆಯಲ್ಲಿ ನವಬಗೆಯ ಸಿರಿಧಾನ್ಯಗಳನ್ನು ಮರದ ಮೂಲಕ ಮಣ್ಣಿನ ಮಡಿಕೆಗೆ ತುಂಬುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ £Ãಡಿದರು. ಇದಾದ ಬಳಿಕ ಬಟನ್ ಒತ್ತುವ ಮೂಲಕ ದೇಶದ ಎಂಟು ಕೋಟಿ ರೈತರ ಖಾತೆಗೆ ಕಿಸಾನ್ ಸಮ್ಮಾನ್ ಯೋಜನೆಯಡಿ ೧೩ ನೇ ಕಂತಿನ ತಲಾ ಎರಡು ಸಾವಿರ ರೂಪಾಯಿಯಂತೆ ಒಟ್ಟಾರೆ ೧೬ ಸಾವಿರ ಕೋಟಿ ರೂಪಾಯಿ ಹಣವನ್ನು ಜಮೆ ಮಾಡಿದರು.
ಕೇಂದ್ರ ಕೃಷಿ ಸಚಿವರಾದ ನರೇಂದ್ರ ಸಿಂಗ್ ತೋಮರ್..
ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಅಧಿಕಾರ ವಹಿಸಿಕೊಂಡ ದಿನದಿಂದಲೂ ಕೃಷಿ ಕ್ಷೇತ್ರದ ಬಲವರ್ಧನೆ ಹಾಗೂ ರೈತರ ಆರ್ಥಿಕ ಪ್ರಗತಿಗಾಗಿ ಶ್ರಮಿಸುತ್ತಿದ್ದಾರೆ.
ಅವರ ದೂರದೃಷ್ಟಿಯ ಫಲವಾಗಿ ಇಂದು ಭಾರತವು ಕೃಷಿ ವಲಯದಲ್ಲಿ ವಿಶ್ವದಲ್ಲಿ ಮುಂಚೂಣಿ ಸ್ಥಾನದಲ್ಲಿದೆ ಎಂದರು.
ಸಿರಿಧಾನ್ಯ ಉತ್ಪಾದನೆ ಹಾಗೂ ಬಳಕೆಗೆ ಆದ್ಯತೆ £Ãಡಲಾಗುತ್ತಿದೆ. ಮುಂಬರುವ ದಿನಗಳಲ್ಲಿ ಜಗತ್ತಿನಲ್ಲಿ ಅತ್ಯಧಿಕ ಸಿರಿಧಾನ್ಯ ಮತ್ತು ಸಾವಯವ ಧಾನ್ಯಗಳ ಉತ್ಪಾದನೆಯಲ್ಲಿ ಭಾರತವು ಮೊದಲ ಸ್ಥಾನ ಗಳಿಸಲಿದೆ ಎಂದು ಕೇಂದ್ರ ಕೃಷಿ ಸಚಿವರಾದ ನರೇಂದ್ರ ಸಿಂಗ್ ತೋಮರ್ ಅವರು ವಿಶ್ವಾಸ ವ್ಯಕ್ತಪಡಿಸಿದರು.
Gadi Kannadiga > State > ಬೆಳಗಾವಿಗೆ ಹೊಸ ಶಕ್ತಿ ನೀಡುವ ಯೋಜನೆಗಳು ಜಾರಿ : ಪ್ರಧಾನಿ ನರೇಂದ್ರ ಮೋದಿ