ಬೆಳಗಾವಿ, ಮೇ.೧೯ : ಕರ್ನಾಟಕ ವಾಯುವ್ಯ ಪಧವಿದರ ಮತ್ತು ಶಿಕ್ಷಕರ ಚುನಾವಣಾ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ತಿಗೆ ಒಬ್ಬ ಸದಸ್ಯರನ್ನು ಚುನಾಯಿಸಲು ಪ್ರಾದೇಶಿಕ ಆಯುಕ್ತರು ಹಾಗೂ ಚುನಾವಣಾಧಿಕಾರಿಯಾದ ಅಮ್ಲಾನ್ ಆದಿತ್ಯ ಬಿಸ್ವಾಸ್ ಅವರು ಅಧಿಸೂಚನೆಯನ್ನು ಹೊರಡಿಸಿರುತ್ತಾರೆ.
ನಾಮ ಪತ್ರಗಳನ್ನು ಉಮೇದುವಾರರು ಅಥವಾ ಅವರ ಸೂಚಕರು ಚುನಾವಣಾಧಿಕಾರಿ ಕಚೇರಿ ಅಥವಾ ಸಹಾಯಕ ಚುನಾವಣಾದಿ üಕಾರಿಯಾದ ಜಿಲ್ಲಾಧಿಕಾರಿಗಳ ಕಾರ್ಯಾಲಯಕ್ಕೆ ಮೇ.೨೬ ರೊಳಗೆ ಬೆಳಿಗ್ಗೆ ೧೧ ಗಂಟೆಯಿಂದ ಮಧ್ಯಾಹ್ನ ೩ ಗಂಟೆಯವರೆಗೆ (ಸರ್ಕಾರಿ ರಜಾ ದಿನಗಳನ್ನು ಹೊರತುಪಡಿಸಿ) ಸಲ್ಲಿಸಬಹುದು ಎಂದು ತಿಳಿಸಲಾಗಿದೆ.ನಾಮ ಪಾತ್ರದ ನಮೂನೆಗಳನ್ನು ಚುನಾವಣಾಧಿಕಾರಿ ಕಚೇರಿ ಹಾಗೂ ಸಹಾಯಕ ಚುನಾವಣಾಧಿಕಾರಿ ಕಾರ್ಯಾಲಯದಲ್ಲಿ ಕಚೇರಿ ವೇಳೆಯಲ್ಲಿ ಪಡೆದುಕೊಳ್ಳಬಹುದಾಗಿದೆ.ಸಲ್ಲಿಕೆಯಾದ ನಾಮ ಪತ್ರಗಳನ್ನು ಬೆಳಗಾವಿಯ ಜಿಲ್ಲಾಧಿಕಾರಿಗಳ ಕಾರ್ಯಾ ಲಯದಲ್ಲಿ ಮೇ.೨೭ ರಂದು ಬೆಳಿಗ್ಗೆ ೧೧ ಗಂಟೆಗೆ ಪರಿಶೀಲನೆಗೆ ತೆಗೆದುಕೊ ಳ್ಳಲಾಗುವುದು. ಉಮೇದುವಾರಿಕೆಯನ್ನು ಹಿಂತೆಗೆದುಕೊಳ್ಳುವ ತಿಳುವಳಿಕೆ ಪತ್ರವನ್ನು ಉಮೇದುವಾರನು ಅಥವಾ ಅವರ ಯಾರೇ ಸೂಚಕರು ಅಥವಾ ಅದನ್ನು ಸಲ್ಲಿಸಲು ಉಮೇದುವಾರನಿಂದ ಲಿಖಿತದಲ್ಲಿ ಅಧಿಕೃತವಾದ ಚುನಾವಣಾ ಏಜೆಂಟರುಗಳು ಸದರಿ ಕಚೇರಿಗಳಿಗೆ ಮೇ.೩೦ ರಂದು ಮಧ್ಯಾಹ್ನ ೩ ಗಂಟೆಯ ಒಳಗಾಗಿ ಸಲ್ಲಿಸಬೇಕು.
ಚುನಾವಣಾಗೆ ಸ್ಪರ್ಧೆ ನಡೆದ ಸಂದರ್ಭದಲ್ಲಿ ಜೂನ್ ೧೩ ರಂದು ಬೆಳಿಗ್ಗೆ ೮ ಗಂಟೆಯಿಂದ ಸಂಜೆ ೪ ಗಂಟೆಯವರೆಗೆ ಮತದಾನ ನಡೆಯಲಿದೆ ಎಂದು ಪ್ರಾದೇಶಿಕ ಆಯುಕ್ತರು ಹಾಗೂ ಕರ್ನಾಟಕ ವಾಯವ್ಯ ಪದವೀಧರ ಮತ್ತು ಶಿಕ್ಷಕರ ಚುನಾವಣಾ ಕ್ಷೇತ್ರದ ಚುನಾವಣಾಧಿಕಾರಿಗಳಾದ ಆಮ್ಲಾನ್ ಆದಿತ್ಯ ಬಿಸ್ವಾಸ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Gadi Kannadiga > Local News > ವಿಧಾನ ಪರಿಷತ್ ಚುನಾವಣೆ: ಅಧಿಸೂಚನೆ ಪ್ರಕಟ
ವಿಧಾನ ಪರಿಷತ್ ಚುನಾವಣೆ: ಅಧಿಸೂಚನೆ ಪ್ರಕಟ
Suresh19/05/2022
posted on