ಕೊಪ್ಪಳ ಫೆಬ್ರವರಿ ೨೪: ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳಾದ ರಾಹುಲ್ ರತ್ನಂ ಪಾಂಡೆಯ ಅವರ ನಿರ್ದೇಶನದಂತೆ ಜಿಲ್ಲೆಯಾದ್ಯಂತ ಸ್ವೀಪ್ ಚಟುವಟಿಕೆಗಳು ಅಚ್ಚುಕಟ್ಟಾಗಿ ನಡೆಯುತ್ತಿವೆ.
ಅದೇ ರೀತಿ ಕೊಪ್ಪಳ ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಫೆ.೨೪ರಂದು ತಾಲೂಕು ಸ್ವೀಪ್ ಸಮಿತಿಯಿಂದ ಯುವ ಮತದಾರರಿಗೆ ಮತದಾನದ ಕುರಿತು ಜಾಗೃತಿ ಮೂಡಿಸಿ, ಇವಿಎಂ ಮತ್ತು ವಿವಿಪ್ಯಾಟ್‌ಗಳ ನಿರ್ವಹಣೆ ಕುರಿತ ತರಬೇತಿ ನೀಡಲಾಯಿತು.
ಈ ವೇಳೆ ಮಾಸ್ಟರ್ ಟ್ರೈನರ್ ಬಸವರಾಜ್ ಸವಡಿ ಮಾತನಾಡಿ, ಮತದಾನ ಮಾಡುವುದು ಪ್ರತಿಯೊಬ್ಬರ ಕರ್ತವ್ಯವಾಗಿದ್ದು, ೧೮ ವರ್ಷ ಮೇಲ್ಪಟ್ಟ ಎಲ್ಲರೂ ಕಡ್ಡಾಯವಾಗಿ ಮತದಾನ ಮಾಡಲು ಅರ್ಹರಾಗಿರುತ್ತಾರೆ. ಹಾಗಾಗಿ ಎಲ್ಲರೂ ಗುರುತಿನ ಚೀಟಿಯನ್ನು ಮಾಡಿಸಿಕೊಳ್ಳಬೇಕು. ಜೊತೆಗೆ ಯುವ ಮತದಾರರಾದ ತಾವುಗಳು ಯಾವುದೇ ಕಾರಣಕ್ಕೂ ಮತದಾನದಿಂದ ಹೊರಗುಳಿಯದೇ, ಸಂವಿಧಾನಾತ್ಮಕವಾಗಿ ತಮಗೆ ದೊರೆತಿರುವ ಹಕ್ಕನ್ನು ಚಲಾಯಿಸಬೇಕು ಎಂದರು.
ನಂತರ ವಿವಿಪ್ಯಾಟ್ ಹಾಗೂ ಇವಿಎಂ ಮಷಿನ್ ಬಗ್ಗೆ ಪ್ರಾತ್ಯಕ್ಷಿಕೆಯನ್ನು ನೀಡಿ, ವಿದ್ಯಾರ್ಥಿಗಳಿಂದ ಮತದಾನ ಮಾಡಿಸಲಾಯಿತು. ಈ ವೇಳೆ ವಿದ್ಯಾರ್ಥಿಗಳು ತಮಗೆ ಮತದಾನದ ಬಗ್ಗೆ ಇದ್ದಂತಹ ಗೊಂದಲಗಳ ಬಗ್ಗೆ ಮಾಹಿತಿಯನ್ನು ಪಡೆದುಕೊಂಡು, ಎಲ್ಲರೂ ಮತ ಚಲಾಯಿಸಿ ಖುಷಿ ಪಟ್ಟರು. ನಂತರ ಎಲ್ಲಾ ವಿದ್ಯಾರ್ಥಿಗಳಿಗೆ ಮತದಾನದ ಕುರಿತು ಪ್ರತಿಜ್ಞಾ ವಿಧಿಯನ್ನು ಬೋಧಿಸಲಾಯಿತು. ಈ ಸಂದರ್ಭದಲ್ಲಿ ತಾಲೂಕು ಸ್ವೀಪ್ ಸಮಿತಿಯ ಬಸವರಾಜ್, ಪೂರ್ಣೇಂದ್ರಯ್ಯಸ್ವಾಮಿ, ಶಿವಕುಮಾರ್ ಕೆ ಸೇರಿದಂತೆ ವಿದ್ಯಾರ್ಥಿಗಳು ಇದ್ದರು.
Gadi Kannadiga > State > ತಾಲೂಕು ಸ್ವೀಪ್ ಸಮಿತಿಯಿಂದ ಕಾರ್ಯಕ್ರಮ ಯುವ ಮತದಾರರಿಗೆ, ಇವಿಎಂ, ವಿವಿಪ್ಯಾಟ್ ತರಬೇತಿ
More important news
ವಿದ್ಯುತ್ ವ್ಯತ್ಯಯ
23/03/2023
ಚುನಾವಣೆಯಲ್ಲಿ ಮಕ್ಕಳ ಬಳಕೆ ಸಲ್ಲದು
23/03/2023
ಮಾರ್ಚ ೨೪ ರಂದು ನಗರಸಭೆಯಲ್ಲಿ ಸಾಮಾನ್ಯ ಸಭೆ
23/03/2023