This is the title of the web page
This is the title of the web page

Please assign a menu to the primary menu location under menu

Local News

ನಿಷೇಧಾಜ್ಞೆ ಜಾರಿ


ಬೆಳಗಾವಿ, ಆ.೨೨: ಬೆಳಗಾವಿ ನಗರದ ಸರ್ಕಾರಿ ಐಟಿಐ, (ಪುರುಷ), ಕಾಲೇಜು, ಉದ್ಯಮಬಾಗ ೦೧ ಪರೀಕ್ಷಾ ಕೇಂದ್ರದಲ್ಲಿ ಆಗಸ್ಟ್ ೧೮, ೨೦೨೩ ರಿಂದ ಆ.೨೪ ವರೆಗೆ ರಾಜ್ಯ ವೃತ್ತಿ ಪರೀಕ್ಷೆ (ಎನ್‌ಸಿವಿಟಿ) ಪೂರಕ ಪರೀಕ್ಷೆಗಳು ಪರೀಕ್ಷೆ ನಡೆಯಲಿದ್ದು, ಪರೀಕ್ಷೆಗಳ ಕಾಲಕ್ಕೆ ದಂಡ ಪ್ರಕ್ರಿಯೆ ಸಂಹಿತೆಯ ಕಲಂ ೧೪೪ ಸಿ.ಅರ್.ಪಿ.ಸಿ ಅಡಿಯಲ್ಲಿ ಪರೀಕ್ಷಾ ಕೇಂದ್ರ ಸುತ್ತಲೂ ೨೦೦ ಮೀ. ಅಂತರದಲ್ಲಿ ಪರೀಕ್ಷೆಗಳು ನಡೆಯುವ ಸಮಯದಲ್ಲಿ ನಿಷೇದಾಜ್ಞೆ ಜಾರಿಗೊಳಿಸಿ ನಗರ ಪೊಲೀಸ್ ಆಯುಕ್ತರು ಹಾಗೂ ಜಿಲ್ಲಾ ಹೆಚ್ಚುವರಿ ದಂಡಾಧಿಕಾರಿ ಎಸ್.ಎನ್ ಸಿದ್ರಾಮಪ್ಪಾ ಅವರು ಆದೇಶ ಹೊರಡಿಸಿರುತ್ತಾರೆ.
ನಿಷೇಧಾಜ್ಞೆಯ ಅವಧಿಯಲ್ಲಿ ಪರೀಕ್ಷಾ ಕೇಂದ್ರದ ಸುತ್ತಲು ೫ ಕ್ಕಿಂತ ಹೆಚ್ಚು ಜನರು ಗುಂಪು ಸೇರುವುದನ್ನು ನಿಷೇಧಿಸಲಾಗಿದೆ ಹಾಗೂ ಪರೀಕ್ಷಾ ಕೇಂದ್ರದ ಸುತ್ತಲು ೨೦೦ ಮೀಟರ ಸುತ್ತಳತೆಯಲ್ಲಿ ಅಭ್ಯರ್ಥಿಗಳು, ಶಾಲಾ/ ಕಾಲೇಜ ಸಿಬ್ಬಂದಿ ಜನರು ಮತ್ತು ಶಿಕ್ಷಣ ಇಲಾಖೆಯ ಅಧಿಕಾರಿಗಳನ್ನು ಹೊರತುಪಡಿಸಿ ಸಾರ್ವಜನಿಕರು, ಪಾಲಕರಿಗೆ ಪ್ರವೇಶವನ್ನು ನಿಷೇಧಿಸಲಾಗಿದೆ.
ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ಯಾವುದೇ ಸಭೆ/ ಸಮಾರಂಭಗಳು ನಡೆಯದಂತೆ ನಿಷೇಧಾಜ್ಞೆಯನ್ನು ವಿಧಿಸಲಾಗಿದೆ.
ಪರೀಕ್ಷಾ ಕೇಂದ್ರದ ಸುತ್ತಲು ಶಸ್ತ್ರ, ಬಡಿಗೆ, ಬರ್ಚಿ, ಖಡ್ಗ, ಗಧೆ, ಬಂದೂಕು, ಚೂರಿ, ಲಾಠಿ, ಡೊಣ್ಣೆ, ಚಾಕೂ ಅಥವಾ ದೇಹಕ್ಕೆ ಅಪಾಯವನ್ನುಂಟು ಮಾಡಲು ಉಪಯೋಗಿಸಬಹುದಾದ ಯಾವುದೇ ಮಾರಕಾಸ್ತ್ರವನ್ನು ತೆಗೆದುಕೊಂಡು ಹೋಗುವದನ್ನು ಮತ್ತು ತಿರುಗಾಡುವುದನ್ನು ಪ್ರತಿಬಂಧಿಸಲಾಗಿದೆ.
ಪರೀಕ್ಷಾ ಕೇಂದ್ರದ ಸುತ್ತಲು ಕಲ್ಲುಗಳನ್ನು ಕ್ಷಾರ ಪದಾರ್ಥ ಇಲ್ಲವೇ ಸ್ಪೋಟಕ ವಸ್ತುಗಳು ಯಾವುದೇ ದಹನಕಾರಿ ವಸ್ತುಗಳು ಇತ್ಯಾದಿಗಳನ್ನು ಸದರಿ ಸ್ಥಳಕ್ಕೆ ತೆಗೆದುಕೊಂಡು ಹೋಗುವುದನ್ನು ಮತ್ತು ಶೇಖರಿಸುವುದನ್ನು ನಿಷೇಧಿಸಲಾಗಿದೆ.
ನಿಷೇಧಾಜ್ಞೆಯ ಅವಧಿಯಲ್ಲಿ ಪರೀಕ್ಷಾ ಕೇಂದ್ರದ ಸುತ್ತಲು ಯಾವುದೇ ವ್ಯಕ್ತಿ ಸಾರ್ವಜನಿಕರಾಗಲಿ ಮೇಲೆ ವಿವರಿಸಿದ ಮಾರಕಾಸ್ತ್ರಗಳು, ಸ್ಪೋಟಕ ವಸ್ತುಗಳು, ವಿನಾಶಕಾರಿ ವಸ್ತುಗಳು ಹಾಗೂ ಇತರೆ ಆಕ್ಷೇಪಾರ್ಹ ವಸ್ತುಗಳು ಹೊಂದಿದ್ದು ಕಂಡುಬಂದ ಕೂಡಲೇ ಅವುಗಳನ್ನು ವಶಪಡಿಸಿಕೊಳ್ಳಲು ಯಾವುದೇ ಪೊಲೀಸ್ ಅಧಿಕಾರಿಗಳಿಗೆ ಅಧಿಕಾರ ಇರುತ್ತದೆ. ಅಂಥಹ ಮಾರಕಾಸ್ತ್ರಗಳನ್ನು ಸರಕಾರಕ್ಕೆ ಮುಟ್ಟುಗೋಲು ಹಾಕಿಕೊಳ್ಳಲಾಗುವುದು ಅಲ್ಲದೆ ಸಂಬಂಧಿಸಿದ ವ್ಯಕ್ತಿಗಳ ಮೇಲೆ ಕಾನೂನು ರೀತ್ಯ ಕ್ರಮ ಜರುಗಿಸಲಾಗುವುದು.
ಪರೀಕ್ಷಾ ಕೇಂದ್ರದ ಸುತ್ತಲಿನ ಸ್ಥಳದಲ್ಲಿ ಬಹಿರಂಗವಾಗಿ ಘೋಷಣೆ ಮಾಡುವುದು, ಪದ ಹಾಡುವುದು, ವಾದ್ಯ ಬಾರಿಸುವುದು, ವ್ಯಾಖನ ಕೊಡುವುದು ಸನ್ನೆ ಅಥವಾ ನಕಲಿ ಪ್ರದರ್ಶನವನ್ನು ಹಾಗೂ ಸಾರ್ವಜನಿಕ ಸಭ್ಯತೆ ಅಥವಾ ನೀತಿಯನ್ನು ಆಕ್ರಮಿಸಬಹುದಾದ ಕÊತ್ಯಗಳನ್ನು ಮಾಡುವುದನ್ನು ನಿಷೇಧಿಸಲಾಗಿದೆ.
ನಿಷೇಧಾಜ್ಞೆಯ ಅವಧಿಯಲ್ಲಿ ಪರೀಕ್ಷಾ ಕೇಂದ್ರದ ಸುತ್ತಮುತ್ತ ೨೦೦ ಮೀಟರ್ ಅಂತರದಲ್ಲಿ ದ್ವನಿವರ್ಧಕ ಉಪಯೋಗಿಸುವದನ್ನು ನಿಷೇಧಿಸಲಾಗಿದೆ ಹಾಗೂ ಪರೀಕ್ಷಾ ಕೇಂದ್ರಗಳ ಸುತ್ತಲೂ ಇರುವ ಸೈಬರ್ ಕೆಫೆ, ಝೆರಾಕ್ಸ್ ಅಂಗಡಿ ಹಾಗೂ ಇನ್ನಿತರ ಅಂತರ್ಜಾಲ ಕೇಂದ್ರಗಳನ್ನು ನಿಷೇಧಾಜ್ಞೆಯ ಕಾಲಕ್ಕೆ ಕಡ್ಡಾಯವಾಗಿ ಮುಚ್ಚಲು ಆದೇಶಿಸಲಾಗಿದೆ.
ಈ ಆಜ್ಞೆಯು ಅಂತ್ಯಕ್ರಿಯೆ ಮೆರವಣಿಗೆಗಳಿಗೆ ಮತ್ತು ಇನ್ನಿತರ ಕಾರಣಗಳಿಗಾಗಿ ಅನುಮತಿ ಪಡೆದು ತೆಗೆಯಿಸಲಾದ ಮೆರವಣಿಗೆಗಳಿಗೆ ಅನ್ವಯಿಸುವದಿಲ್ಲ.
ಸದರಿ ಆಜ್ಞೆಯನ್ನು ಉಲ್ಲಂಘಿಸುವವರ ವಿರುದ್ದ ಕಲಂ ೧೮೮ ಭಾರತೀಯ ದಂಡ ಸಂಹಿತೆಯ ಪ್ರಕಾರ ಕ್ರಮ ಜರುಗಿಸಲಾಗುವುದು ನಗರ ಪೊಲೀಸ್ ಆಯುಕ್ತರು ಹಾಗೂ ಜಿಲ್ಲಾ ಹೆಚ್ಚುವರಿ ದಂಡಾಧಿಕಾರಿ ಎಸ್. ಎನ್. ಸಿದ್ರಾಮಪ್ಪಾ ಅವರು ಆದೇಶದಲ್ಲಿ ತಿಳಿಸಿದ್ದಾರೆ.


Leave a Reply