This is the title of the web page
This is the title of the web page

Please assign a menu to the primary menu location under menu

State

ನೀಟ್ (ಓಇಇಖಿ) ಪರೀಕ್ಷಾ ಕೇಂದ್ರಗಳ ಸುತ್ತಲೂ ಪ್ರತಿಬಂಧಕಾಜ್ಞೆ ಜಾರಿ


ಗದಗ ಮೇ ೫: ರಾಷ್ಟ್ರೀಯ ಪರೀಕ್ಷಾ ಏಜನ್ಸಿ ನವದೆಹಲಿ ವತಿಯಿಂದ ವೈದ್ಯಕೀಯ ಕೋರ್ಸುಗಳ ಪ್ರವೇಶಕ್ಕಾಗಿ ( ಓಚಿಣioಟಿಚಿಟ ಇಟigibiಟiಣಥಿ ಛಿum ಇಟಿಣಡಿಚಿಟಿಛಿe ಖಿesಣ ( Uಉ)-೨೦೨೩ ಪರೀಕ್ಷೆಗಳು ಮೇ ೭ ರಂದು ಮಧ್ಯಾಹ್ನ ೨ ಗಂಟೆಯಿಂದ ಸಂಜೆ ೫.೨೦ ಗಂಟೆಯವರೆಗೆ ನಡೆಯಲಿದೆ. ಪರೀಕ್ಷಾ ಸಮಯದಲ್ಲಿ ನಕಲು ಮಾಡುವುದು, ಪರೀಕ್ಷಾರ್ಥಿಗಳ ಬದಲು ಬೇರೆಯವರು ಪರೀಕ್ಷೆಗೆ ಹಾಜರಾಗುವುದು ಮುಂತಾದ ಅವ್ಯವಹಾರ ತಡೆಗಟ್ಟಲು ಮತ್ತು ಪರೀಕ್ಷಾ ಕೇಂದ್ರಗಳಲ್ಲಿ ಶಿಸ್ತು ಮತ್ತು ಶಾಂತಿ ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಪರೀಕ್ಷಾ ಕೇಂದ್ರಗಳ ಸುತ್ತಲೂ ೨೦೦ ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶವನ್ನಾಗಿ ಘೋಷಿಸಿದೆ.
ನೀಟ್ ಪರೀಕ್ಷೆಗಳು ಜರುಗುವ ಜಿಲ್ಲೆಯ ೫ ಪರೀಕ್ಷಾ ಕೇಂದ್ರಗಳ ಸುತ್ತಲೂ ೨೦೦ ಮೀಟರ್ ಪರಿಮಿತಿಯೊಳಗೆ ಮೇ ೭ ರಂದು ಬೆ ೧೧ ಗಂಟೆಯಿಂದ ಸಂಜೆ ೬ ಗಂಟೆಯವರೆಗೆ ಒಳಪಟ್ಟು ಪ್ರತಿಬಂಧಕಾಜ್ಞೆ ಜಾರಿಗೊಳಿಸಲಾಗಿದೆ. ಪರೀಕ್ಷಾರ್ಥಿಗಳು ಹಾಗೂ ಪರೀಕ್ಷೆಯಲ್ಲಿ ಕಾರ್ಯ ನಿರ್ವಹಿಸುವ ಅಧಿಕಾರಿಗಳು ಮತ್ತು ಸಿಬ್ಬಂದಿಗಳನ್ನು ಹೊರತುಪಡಿಸಿ ಇತರ ಯಾವುದೇ ವ್ಯಕ್ತಿ ಅಥವಾ ಐದು ಐದಕ್ಕಿಂತ ಹೆಚ್ಚು ಜನರು ಗುಂಪು ಕೂಡುವುದು ಅಥವಾ ವ್ಯಕ್ತಿಗಳ ಗುಂಪುಗಳ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ಈ ಪ್ರದೇಶ ವ್ಯಾಪ್ತಿಯಲ್ಲಿ ಬರುವ ಝೆರಾಕ್ಸ ಅಂಗಡಿ, ಬುಕ್ ಸ್ಟಾಲ್ , ಫೋಟೋ ಕಾಪಿಯರ್‌ಗಳನ್ನು ಬಂದ್ ಮಾಡಲು ಆದೇಶಿಸಿದೆ. ಪರೀಕ್ಷಾ ಕೇಂದ್ರಗಳಲ್ಲಿ ಮೊಬೈಲ್ ಫೋನ್ ಮತ್ತು ಇತರೇ ಸಂಪರ್ಕ ಸಲಕರಣೆಗಳನ್ನು ತರುವುದನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮತ್ತು ಜಿಲ್ಲಾ ದಂಡಾಧಿಕಾರಿ ವೈಶಾಲಿ ಎಂ.ಎಲ್. ತಿಳಿಸಿದ್ದಾರೆ.


Leave a Reply