ಗದಗ ಮೇ ೧೬: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ೨೦೨೩ ರ ಮೇ ಮತ್ತು ಜೂನ್ ತಿಂಗಳಲ್ಲಿ ದ್ವಿತೀಯ ಪಿ.ಯು.ಸಿ. ಪೂರಕ ಪರೀಕ್ಷೆಗಳನ್ನು ಮೇ ೨೩ ರಿಂದ ಜೂನ್ ೨ ರವರೆಗೆ ಬೆ ೧೦.೧೫ ಗಂಟೆಯಿಂದ ಸಂಜೆ ೫.೩೦ ಗಂಟೆಯವರೆಗೆ ನಡೆಸಲಿದೆ.
ಪರೀಕ್ಷಾ ಸಮಯದಲ್ಲಿ ನಕಲು ಮಾಡುವುದು, ಪರೀಕ್ಷಾರ್ಥಿಗಳ ಬದಲು ಬೇರೆಯವರು ಪರೀಕ್ಷೆಗೆ ಹಾಜರಾಗುವುದು ಮುಂತಾದ ಅವ್ಯವಹಾರ ತಡೆಗಟ್ಟಲು ಮತ್ತು ಪರೀಕ್ಷಾ ಕೇಂದ್ರಗಳಲ್ಲಿ ಶಿಸ್ತು ಮತ್ತು ಶಾಂತಿ ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಜಿಲ್ಲೆಯ ೮ ಪರೀಕ್ಷಾ ಕೇಂದ್ರಗಳ ಸುತ್ತಲೂ ೨೦೦ ಮೀಟರ್ ಪರಿಮಿತಿಯೊಳಗೆ ಮೇ ೨೩ ರಿಂದ ಜೂನ್ ೨ ರವರೆಗೆ ಬೆ. ೯ ಗಂಟೆಯಿಂದ ಸಂಜೆ ೫.೩೦ ಗಂಟೆಯವರೆಗೆ ಪ್ರತಿಬಂಧಕಾಜ್ಞೆ ಜಾರಿಗೊಳಿಸಲಾಗಿದೆ.
ಪರೀಕ್ಷಾರ್ಥಿಗಳು ಹಾಗೂ ಪರೀಕ್ಷೆಯಲ್ಲಿ ಕರ‍್ಯನಿರ್ವಹಿಸುವ ಅಧಿಕಾರಿಗಳು ಮತ್ತು ಸಿಬ್ಬಂದಿಗಳನ್ನು ಹೊರತುಪಡಿಸಿ ಇತರ ಯಾವುದೇ ವ್ಯಕ್ತಿ ಅಥವಾ ಐದು ಐದಕ್ಕಿಂತ ಹೆಚ್ಚು ಜನರು ಗುಂಪು ಕೂಡುವುದು, ಅಥವಾ ವ್ಯಕ್ತಿಗಳ ಗುಂಪುಗಳ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ಈ ಪ್ರದೇಶ ವ್ಯಾಪ್ತಿಯಲ್ಲಿ ಬರುವ ಝೆರಾಕ್ಸ್ ಅಂಗಡಿ, ಬುಕ್‌ಸ್ಟಾಲ್ , ಫೋಟೋ ಕಾಪಿಯರ್‌ಗಳನ್ನು ಬಂದ ಮಾಡಲು ಆದೇಶಿಸಿದೆ. ಪರೀಕ್ಷಾ ಕೇಂದ್ರಗಳಲ್ಲಿ ಮೊಬೈಲ್ ಫೋನ್ ಮತ್ತು ಇತರೇಸಂಪರ್ಕ ಸಲಕರಣೆಗಳನ್ನು ತರುವುದನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮತ್ತು ಜಿಲ್ಲಾ ದಂಡಾಧಿಕಾರಿ ವೈಶಾಲಿ ಎಂ.ಎಲ್. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Gadi Kannadiga > State > ದ್ವಿತೀಯ ಪಿ.ಯು.ಸಿ. ಪೂರಕ ಪರೀಕ್ಷೆ ಪರೀಕ್ಷಾ ಕೇಂದ್ರಗಳ ಸುತ್ತಲೂ ಪ್ರತಿಬಂಧಕಾಜ್ಞೆ ಜಾರಿ
ದ್ವಿತೀಯ ಪಿ.ಯು.ಸಿ. ಪೂರಕ ಪರೀಕ್ಷೆ ಪರೀಕ್ಷಾ ಕೇಂದ್ರಗಳ ಸುತ್ತಲೂ ಪ್ರತಿಬಂಧಕಾಜ್ಞೆ ಜಾರಿ
Suresh16/05/2023
posted on
More important news
ಬೀಟ್ ಮೀಟಿಂಗ್
29/05/2023
ಸಚಿವ ಎಚ್.ಕೆ.ಪಾಟೀಲ ಅವರ ಜಿಲ್ಲಾ ಪ್ರವಾಸ
29/05/2023
ಶ್ರೀ ಯಾಜ್ಞವಲ್ಕö್ಯ ಗುರುಗಳ ಜಯಂತಿ
29/05/2023
ಅಧಿಕಾರ ಸ್ವೀಕಾರ
29/05/2023