ಕೊಪ್ಪಳ ಮೇ ೧೦: ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ-೨೦೨೩ರ ಹಿನ್ನೆಲೆಯಲ್ಲಿ ಮೇ ೧೩ರಂದು ನಡೆಯಲಿರುವ ಮತ ಎಣಿಕೆ ಸಂಬಂಧವಾಗಿ ಸಾರ್ವಜನಿಕ ಶಾಂತಿ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಕೊಪ್ಪಳ ಜಿಲ್ಲೆಯಾದ್ಯಂತ ಮೇ ೧೨ರ ಸಂಜೆ ೬ರಿಂದ ಮೇ ೧೩ರ ರಾತ್ರಿ ೧೧ ಗಂಟೆಯವರೆಗೆ ಅಪರಾಧ ದಂಡ ಪ್ರಕ್ರಿಯಾ ಸಂಹಿತೆ ೧೯೭೩ರ ಕಲಂ ೧೪೪ರಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿಗಳಾದ ಎಂ.ಸುಂದರೇಶಬಾಬು ಅವರು ಆದೇಶ ಹೊರಡಿಸಿದ್ದಾರೆ.
ಚುನಾವಣೆಯಲ್ಲಿ ಗೆದ್ದ ಅಭ್ಯರ್ಥಿಗಳು ಹಾಗೂ ಅವರ ಬೆಂಬಲಿಗರು ಧ್ವನಿವರ್ಧಕಗಳನ್ನು ಹಾಕುವುದು, ಮೆರವಣಿಗೆ, ಸಭೆ, ಪಟಾಕಿಗಳನ್ನು ಸಿಡಿಸುವುದು ಹಾಗೂ ವಿಜಯೋತ್ಸವ ಆಚರಿಸುವ ಸಾಧ್ಯತೆಗಳಿದ್ದು, ಚುನಾವಣೆಯ ಫಲಿತಾಂಶದಿಂದಾಗಿ ಯಾವುದೇ ಘರ್ಷಣೆಗಳು ಉಂಟಾಗದಂತೆ ಹಾಗೂ ಸಾರ್ವಜನಿಕ ಶಾಂತತೆಗೆ ಮತ್ತು ಕಾನೂನು ಸುವ್ಯವಸ್ಥಗೆ ಧಕ್ಕೆ ಉಂಟಾಗದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಮೇ ೧೨ರ ಸಂಜೆ ೬ರಿಂದ ಮೇ ೧೩ರ ರಾತ್ರಿ ೧೧ ಗಂಟೆಯವರೆಗೆ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ನಿಷೇಧಾಜ್ಞೆ ಅನ್ವಯ ಮತ ಎಣಿಕಾ ಕೇಂದ್ರವಾದ ಕೊಪ್ಪಳ ನಗರದ ಶ್ರೀ ಗವಿಸಿದ್ದೇಶ್ವರ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಪದವಿ ಕಾಲೇಜು ಆವರಣವು ಸಂಪೂರ್ಣ ನಿರ್ಬಂಧಿತ ಪ್ರದೇಶವಾಗಿರುತ್ತದೆ. ಚುನಾವಣಾ ಕರ್ತವ್ಯದಲ್ಲಿ ನಿರತರಾದ ಎಲ್ಲಾ ಅಧಿಕಾರಿಗಳು, ಸಿಬ್ಬಂದಿಗಳು, ಚುನಾವಣಾ ಅಭ್ಯರ್ಥಿಗಳು, ಎಣಿಕಾ ಎಜೆಂಟರು ಹಾಗೂ ಪಾಸ್ ಹೊಂದಿರುವ ಮಾಧ್ಯಮದವರಿಗೆ ಮಾತ್ರ ಮತ ಎಣಿಕಾ ಕೇಂದ್ರದಲ್ಲಿ ಪ್ರವೇಶಕ್ಕೆ ಅವಕಾಶವಿರುತ್ತದೆ. ಈ ಆದೇಶವು ಮದುವೆ, ಶವ ಸಂಸ್ಕಾರಕ್ಕೆ ಮತ್ತು ಇನ್ನಿತರ ಧಾರ್ಮಿಕ ಕಾರ್ಯಕ್ರಮಗಳಿಗೆ ಅನ್ವಯವಾಗುವುದಿಲ್ಲ ಎಂದು ಜಿಲ್ಲಾಧಿಕಾರಿಗಳು ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.
Gadi Kannadiga > State > ವಿಧಾನಸಭಾ ಚುನಾವಣೆ: ಮತ ಎಣಿಕೆ ದಿನ ನಿಷೇಧಾಜ್ಞೆ ಜಾರಿ
ವಿಧಾನಸಭಾ ಚುನಾವಣೆ: ಮತ ಎಣಿಕೆ ದಿನ ನಿಷೇಧಾಜ್ಞೆ ಜಾರಿ
Suresh10/05/2023
posted on
More important news
ಪ್ರತಿಬಂಧಕಾಜ್ಞೆ ಜಾರಿ
08/06/2023