This is the title of the web page
This is the title of the web page

Please assign a menu to the primary menu location under menu

Local News

ಎಸ್. ಟಿ ಮೀಸಲಾತಿ: ಸರ್ಕಾರಕ್ಕೆ ಸದ್ಯದಲ್ಲೇ ಪ್ರಸ್ತಾವನೆ ಉಪ್ಪಾರ ಸಮುದಾಯಕ್ಕೆ ಸರ್ಕಾರದ ವಿವಿಧ ಯೋಜನೆಗಳು ದೊರೆಯಬೇಕು: ಜಿ.ಕೆ ಗಿರೀಶ್ ಉಪ್ಪಾರ


ಬೆಳಗಾವಿ, ಸೆ.೨೧ : ಉಪ್ಪಾರ ಸಮುದಾಯಕ್ಕೆ ಸರ್ಕಾರದ ವಿವಿಧ ಯೋಜನೆಗಳನ್ನು ಇನ್ನೂ ಪಡೆಯಬೇಕಿದೆ. ಈಗಾಗಲೇ ಹಂಪಿ ವಿಶ್ವ ವಿದ್ಯಾಲಯದ ವಿಭಾಗದಿಂದ ಉಪ್ಪಾರ ಸಮುದಾಯದ ಕುಲಶಾಸ್ತ್ರ ಅಧ್ಯಯನ ನಡೆಯುತ್ತಿದೆ. ಅಧ್ಯಯನದ ವರದಿ ಬಂದ ನಂತರ ಎಸ್. ಟಿ ಮೀಸಲಾತಿ ನೀಡುವಂತೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಕರ್ನಾಟಕ ಉಪ್ಪಾರ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಜಿ.ಕೆ ಗಿರೀಶ್ ಉಪ್ಪಾರ ಅವರು ತಿಳಿಸಿದರು.
ನಗರದ ಪ್ರವಾಸಿ ಮಂದಿರದಲ್ಲಿ ಬುಧುವಾರ (ಸೆ.೨೧) ನಡೆದ ಕರ್ನಾಟಕ ಉಪ್ಪಾರ ಅಭಿವೃದ್ಧಿ ನಿಗಮದ ೨೦೨೨-೨೨ನೇ ಸಾಲಿನಲ್ಲಿ ಅನುಷ್ಠಾನಗೊಳಿಸುತ್ತಿರುವ ನಿಗಮದ ಯೋಜನೆಗಳ ಹಾಗೂ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಕುರಿತು ಪತ್ರಿಕಾಗೋಷ್ಠಿಯಲ್ಲಿ ಅವರು ಮಾಹಿತಿ ನೀಡಿದರು.ಉಪ್ಪಾರ ಸಮುದಾಯ ಸರ್ಕಾರದ ವಿವಿಧ ಯೋಜನೆಗಳ ಸೌಲಭ್ಯಗಳನ್ನು ಪಡೆಯುವಲ್ಲಿ ಬಹಳ ಹಿಂದೆ ಉಳಿದಿದೆ. ಈ ನಿಟ್ಟಿನಲ್ಲಿ ಯೋಜನೆಗಳ ಸಮರ್ಪಕ ಬಳಕೆಗೆ ಉಪ್ಪಾರ ಸಮುದಾಯ ಮುಂದಾಗಬೇಕು. ಪ್ರತಿ ವರ್ಷ ಸರ್ಕಾರದ ಮೂಲಕ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಈಗಾಗಲೇ ಅನೇಕ ಅಭಿವೃದ್ಧಿ ಕಾರ್ಯಕ್ರಮಗಳನ್ನು ನಡೆಸಲಾಗಿದೆ ಎಂದು ತಿಳಿಸಿದರು.
ಸಂಘಟನೆಗಳ ಬೆಂಬಲಕ್ಕೆ ಮೆಚ್ಚುಗೆ:
ಜಿಲ್ಲೆಯಲ್ಲಿ ೩ ಲಕ್ಷದವರೆಗೆ ಉಪ್ಪಾರ ಸಮುದಾಯ ಇದ್ದು, ಅನೇಕ ಅಭಿವೃದ್ಧಿ ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆ. ಸಮಾಜದ ಜಾಗೃತಿ ಕಾರ್ಯಕ್ರಮಗಳನ್ನು ನಡೆಸುವುದರ ಮೂಲಕ ಅನೇಕ ಸಂಘಟನೆಗಳು ಬೆಂಬಲ ನೀಡಿ, ಸಮಾಜದ ಉನ್ನತಿಗೆ ನಿರಂತರ ಶ್ರಮಿಸುತ್ತಿವೆ ಎಂದು ಕರ್ನಾಟಕ ಉಪ್ಪಾರ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಜಿ.ಕೆ ಗಿರೀಶ್ ಉಪ್ಪಾರ ಮೆಚ್ಚುಗೆ ವ್ಯಕ್ತಪಡಿಸಿದರು.
ಪ್ರತಿಭಾ ಪುರಸ್ಕಾರ ಕಾರ್ಯಕ್ರಮ:
ಗೋಕಾಕ ತಾಲೂಕಿನ ವ್ಯಾಪ್ತಿಯ ಎಸ್.ಎಸ್.ಎಲ್.ಸಿ, ಪಿಯುಸಿ ಯಲ್ಲಿ ಅತಿ ಹೆಚ್ಚು ಅಂಕ ಗಳಿಸಿ ತೇರ್ಗಡೆಯಾದ ವಿದ್ಯಾರ್ಥಿಗಳಿಗೆ ಸೆಪ್ಟೆಂಬರ್ ೨೪ ರಂದು ಪ್ರತಿಭಾ ಪುರಸ್ಕಾರ ಹಾಗೂ ಅಧಿಕಾರಿಗಳಿಗೆ, ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು. ಶ್ರೀ ಭಗೀರಥ ಪೀಠಾಧ್ಯಕ್ಷರಾದ ಹೊಸದುರ್ಗ ತಾಲೂಕು ಮಧುರೆಯ ಚಿನ್ಮೂಲಾದ್ರಿ ಶಿಲಾಪುರಿ ಮಹಾಸಂಸ್ಥಾನದ ಶ್ರೀ ಪುರುಷೋತ್ತಮಾನಂದಪುರಿ ಮಹಾಸ್ವಾಮೀಜಿ, ಶ್ರೀ ಭಗೀರಥ ಗುರುಪೀಠದ ಶಿಕ್ಷಣ ಸಂಸ್ಥೆಯಿಂದ ಅನ್ನದಾನ, ಉಚಿತ ಶಿಕ್ಷಣ ನೀಡುವುದರ ಮೂಲಕ ಶಾಲಾ ಕಾಲೇಜುಗಳನ್ನು ನಡೆಸಲಾಗುತ್ತಿದೆ. ಇದರಿಂದ ಅನೇಕ ಮಕ್ಕಳ ವಿದ್ಯಾಭ್ಯಾಸ ಪಡೆಯಲು ಸಹಾಯವಾಗುತ್ತಿದೆ ಎಂದು ತಿಳಿಸಿದರು.
ಏಕಶಿಲಾ ಮೂರ್ತಿ ಸ್ಥಾಪನೆ:
ಜೂನ್. ೪ ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶ್ರೀ ಭಗೀರಥ ಗುರುಪೀಠದಲ್ಲಿ ಭಗೀರಥ ಮಹರ್ಷಿಗಳ ದೇವಸ್ಥಾನ ಲೋಕಾರ್ಪಣೆಗೊಳಿಸಿದ್ದಾರೆ. ಅದೇ ಸ್ಥಳದಲ್ಲಿ ಸರ್ಕಾರ ಹಾಗೂ ದಾನಿಗಳ ಸಹಕಾರದಿಂದ ೬೦ ಅಡಿ ಎತ್ತರದ ಏಕಶಿಲಾ ಮೂರ್ತಿಯನ್ನು ಸ್ಥಾಪನೆ ಮಾಡಲಾಗುವುದು ಎಂದು ಶ್ರೀ ಪುರುಷೋತ್ತಮಾನಂದಪುರಿ ಮಹಾಸ್ವಾಮೀಜಿಯವರು ತಿಳಿಸಿದರು.
ಉಪ್ಪಾರ ಸಮುದಾಯದ ಜಿಲ್ಲಾ ಹಾಗೂ ತಾಲೂಕಾ ಮುಖಂಡರು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.


Gadi Kannadiga

Leave a Reply