ಯಮಕನಮರಡಿ: ೧೮ ರಂದು ಬೆಳಿಗ್ಗೆ ೧೦:೦೦ ಗಂಟೆಗೆ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಒಂದು ದಿನದ ಪ್ರತಿಭಟನೆ ನಡೆಸಲು ಪೊಲೀಸ್ ಇಲಾಖೆ ಅನುಮತಿ £Ãಡಿದೆ ಎಂದು ಬೆಳಗಾವಿ ಜಿಲ್ಲಾ ಯುವ ಗುತ್ತಿಗೆದಾರರ ಸಂಘದ ಅಧ್ಯಕ್ಷ ಎಮ್.ಕೆ. ಮುಲ್ಲಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಮ್ಮ ನಮ್ಮ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಗುತ್ತಿಗೆದಾರರನ್ನು ಕರೆ ತರುವ ಮೂಲಕ ಪ್ರತಿಭಟನೆಯನ್ನು ಯಶಸ್ವಿಗೊಳಿಬೇಕೆಂದು ಕೋರುತ್ತೇವೆ.
ಕೇವಲ ಕುಳಿತು ಪ್ರತಿಭಟನೆ ನಡೆಸಲು ಮಾತ್ರ ಅನುಮತಿ ಸಿಕ್ಕಿದೆ. ಆದ್ದರಿಂದ ಅಂದು ನಾವೆಲ್ಲರೂ ಶಾಂತಿಯುತವಾಗಿ ಪ್ರತಿಭಟನೆ ನಡೆಸಬೇಕು. ರಸ್ತೆ ತಡೆ ಮಾಡುವುದು, ಮೆರವಣಿಗೆ, ಬಸ್, ವಾಹನಗಳನ್ನು ತಡೆಯುವ ಹಾಗಿಲ್ಲ. ಒಂದು ವೇಳೆ ದುರ್ನಡತೆ ಕಂಡು ಬಂದಲ್ಲಿ ಪ್ರಕರಣ ದಾಖಲಿಸುವುದಾಗಿ ಪೊಲೀಸರು ಎಚ್ಚರಿಕೆ £Ãಡಿರುತ್ತಾರೆ. £ಮ್ಮ ಜೊತೆಯಲ್ಲಿ ಆಗಮಿಸುವ ಗುತ್ತಿಗೆದಾರ ಬಂಧುಗಳಿಗೆ ಈ ವಿಷಯವನ್ನು ಮನವರಿಕೆ ಮಾಡಿಕೊಡಿ.
ಪ್ರತಿಭಟನೆ ಕೊನೆಯಲ್ಲ. ಇದು ಆರಂಭ. ಸರಕಾರ ಸ್ಪಂದಿಸದಿದ್ದರೆ ಮುಂದೆ ನಮ್ಮ ಹೋರಾಟವನ್ನು ತೀವ್ರಗೊಳಿಸುತ್ತಾ ಹೋಗೋಣ.
ಪ್ರತಿಭಟನೆಯನ್ನು ಯಶಸ್ವಿಗೊಳಿಸಲು ಅತಿ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಸಹಕರಿಸಬೇಕೆಂದು ಕೋರುತ್ತೇನೆ. ಹೆಚ್ಚಿನ ಮಾಹಿತಿ ಬೇಕಿದ್ದಲ್ಲಿ ಸಂಘದ ಪದಾಧಿಕಾರಿಗಳನ್ನು ಸಂಪರ್ಕಿಸಬಹುದಾಗಿದೆ.
Gadi Kannadiga > Local News > ದಿ. ೧೮ ರಂದು ಗುತ್ತಿಗೆದಾರರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಪ್ರತಿಭಟನೆ
ದಿ. ೧೮ ರಂದು ಗುತ್ತಿಗೆದಾರರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಪ್ರತಿಭಟನೆ
Suresh13/01/2023
posted on