This is the title of the web page
This is the title of the web page

Please assign a menu to the primary menu location under menu

Local News

ಎಸ್.ಟಿ ಪಂಗಡದ ಮೀಸಲಾತಿ ಹೆಚ್ಚಿಸುವಂತೆ ಆಗ್ರಹಿಸಿ ಬೆಳಗಾವಿಯಲ್ಲಿ ಪ್ರತಿಭಟನೆ


ಬೆಳಗಾವಿ: ಎಸ್.ಸಿ ಎಸ್.ಟಿ ಪಂಗಡಕ್ಕೆ ಶೈಕ್ಷಣಿಕವಾಗಿ ಮತ್ತು ಔದ್ಯೋಗಿಕ ಕ್ಷೇತ್ರದಲ್ಲಿ ಮೀಸಲಾತಿ ಪ್ರಮಾಣ ಹೆಚ್ಚಳಕ್ಕೆ ಸಂಬಂಧಿಸಿದಂತೆ ನ್ಯಾಯಮೂರ್ತಿ ಎಚ್.ಎನ್.ನಾಗಮೋಹನದಾಸ್ ಅವರ ಏಕ ಸದಸ್ಯ ಆಯೋಗದ ವರದಿಯನ್ನು ಕೂಡಲೇ ಜಾರಿಗೊಳಿಸಬೇಕೆಂದು ಆಗ್ರಹಿಸಿ ಕರ್ನಾಟಕ ರಾಜ್ಯ ಸ್ವಾಭಿಮಾನಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೀಸಲಾತಿ ಹೆಚ್ಚಳ ಹೋರಾಟ ಕ್ರಿಯಾ ಸಮೀತಿ ವತಿಯಿಂದ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.

ಶುಕ್ರವಾರ ಬೆಳಗಾವಿ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿ ಪರಿಶಿಷ್ಟ ಪಂಗಡಗಳ ಪಟ್ಟಿಯಲ್ಲಿರುವ ಬುಡಕಟ್ಟುಗಳ ಕೆಲವು ಸಮಾನಾಂತರ ಹೆಸರುಗಳನ್ನು ಎಸ್.ಟಿಗೆ ಸೇರಿಸಲಾಗಿದೆ ಅದರೆ ಮೀಸಲಾತಿ ಮಾತ್ರ ಕೇವಲ ಮೂರರಷ್ಟಿದ್ದು ಇದರಿಂದ ವಿದ್ಯಾರ್ಥಿಗಳಿಗೆ ಹಾಗೂ ನಿರುದ್ಯೋಗಿಗಳಿಗೆ ಅನ್ಯಾಯವಾಗುತ್ತಿದೆ ಆದ್ದರಿಂದ ಮೀಸಲಾತಿ ಪ್ರಮಾಣವನ್ನು ೭.೫ಕ್ಕೆ ಹೆಚ್ಚಿಸಬೇಕೆಂದು ಒತ್ತಾಯಿಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ಈ ವೇಳೆ ಸಂಘಟನೆ ಅಧ್ಯಕ್ಷ ರಾಜಶೇಖರ ತಳವಾರ ಮಾತನಾಡಿ ಪರಿಶಿಷ್ಟ ಪಂಗಡ ಮೀಸಲಾತಿಯನ್ನು ೭.೫ಕ್ಕೆ ಹೆಚ್ಚಿಸುವಂತೆ ಆಗ್ರಹಿಸಿ ಮಹರ್ಷಿ ವಾಲ್ಮೀಕಿ ಗುರುಪೀಠದ ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿಯವರು ಬೆಂಗಳೂರಿನ ಪ್ರೀಡಂ ಪಾರ್ಕಿನಲ್ಲಿ ಪ್ರತಿಭಟನೆ ನಡೆಸುತ್ತಿದ್ದು ನ್ಯಾ. ಎಚ್.ಎನ್ ನಾಗಮೋಹನದಾಸ್ ಅವರ ಏಕ ಸದಸ್ಯ ಆಯೋಗದ ವರದಿ ಜಾರಿಗೆ ತರುವಂತೆ ಆಗ್ರಹಿಸುತ್ತಿದ್ದು ಈ ವೇಳೆ ಸಿಎಂ ಬೊಮ್ಮಾಯಿ ಮತ್ತು ಸಚೀವ ಗೊವಿಂದ ಕಾರಜೋಳ ಸೇರಿದಂತೆ ಸಚಿವರ ತಂಡ ಪ್ರತಿಭಟನೆ ಸ್ಥಳಕ್ಕೆ ಬೇಟಿ ನೀಡಿ ೧೫ ದಿನಗಳಲ್ಲಿ ಸಮಸ್ಯೆಗೆ ಸ್ಪಂಧಿಸುವಂತೆ ಆಶ್ವಾಸನೆ ನೀಡಿದ್ದರು. ಆದರೆ ಎರಡು ತಿಂಗಳಾದರು ಸರಕಾರದಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಕೂಡಲೆ ಮುಖ್ಯಮಂತ್ರಿಗಳು ಇದನ್ನು ಗಂಭೀರವಾಗಿ ಪರಿಗಣಿಸಿ ನ್ಯಾ. ಎಚ್.ಎನ್ ನಾಗಮೋಹನದಾಸ್ ಅವರ ಏಕ ಸದಸ್ಯ ಆಯೋಗದ ವರದಿಯನ್ನು ಜಾರಿಗೆ ತರಬೇಕು ಪ.ಪಂ ಮೀಸಲಾತಿಯನ್ನು ಹೆಚ್ಚಿಸಬೇಕು ಇಲ್ಲವಾದಲ್ಲಿ ಉಗ್ರ ಹೋರಾಟ ಮಾಡಲಾಗುತ್ತದೆ ಎಂದರು.

ಈ ಸಂದರ್ಭದಲ್ಲಿ ದಿನೇಶ ಬಾಗಡೆ, ಭಾವಕನ್ನಾ ಭಂಗ್ಯಾಗೊಳ, ವಾಯ್ ಕೋಳೇಕರ್, ಪಾಂಡುರಂಗ ನಾಯಿಕ್, ಸುನೀಲ್ ಸನಕೆ, ಹುವಪ್ಪಾ ಕಲ್ಲೂರ ಸೇರಿದಂತೆ ಇನ್ನಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು


Leave a Reply