ಬೆಳಗಾವಿ: ಉದ್ಯೋಗ ಖಾತರಿ ಯೋಜನೆಯಡಿ ಕಾರ್ಯ ನಿರ್ವಹಿಸುತ್ತಿರುವ ಕಾರ್ಮಿಕರಿಗೆ ಲೇಬರ್ ಕಾರ್ಡ್ ಮತ್ತು ಸಾಮಾಜಿಕ ಭದ್ರತೆ ನೀಡಬೇಕೆಂದು ಆಗ್ರಹಿಸಿ ಉದ್ಯೋಗ ಖಾತರಿ ಕಾರ್ಮಿಕರು ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು.
ಸೋಮವಾರ ಅಂಬೇಡ್ಕರ್ ಉದ್ಯಾನವನದಿಂದ ಜಿಲ್ಲಾಧಿಕಾರಿಗಳ ಕಚೇರಿವರೆಗೆ ಬೃಹತ್ ಪ್ರತಿಭಟನೆ ನಡೆಸಿ ಜಿಲ್ಲೆಯಲ್ಲಿರು ಎಲ್ಲ ಉದ್ಯೋಗ ಖಾತರಿ ಯೋಜನೆ ಕಾರ್ಯಮಿಕರಿಗೆ ಕಾರ್ಮಿಕ ಕಾರ್ಡ್ ಹಾಗೂ ಸಾಮಾಜಿಕ ಭದ್ರತೆ ಒದಗಿಸಬೇಕೆಂದು ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿ ಮತ್ತು ಪ್ರಧಾನ ಮಂತ್ರಿಗಳಿಗೆ ಮನವಿ ಸಲ್ಲಿಸಿದರು.
ಬೆಳಗಾವಿ ಜಿಲ್ಲೆಯಲ್ಲಿ 11 ಲಕ್ಷಕ್ಕಿಂತ ಹೆಚ್ಚು ಜನ ಕಾರ್ಮಿಕರು ಉದ್ಯೋಗ ಖಾತ್ರಿ ಯೋಜನೆಯಲ್ಲಿ ಕಾರ್ಯನಿರ್ವಸಿಸುತ್ತಿದ್ದಾರೆ. 2013 ರಿಂದ 2019ರವರೆಗೆ ಉದ್ಯೋಗ ಖಾತರಿ ಕಾರ್ಮಿಕರಿಗೆ ಕಾರ್ಮಿಕ ಕಲ್ಯಾಣ ಮಂಡಳಿಯ ಸದಸ್ಯರನ್ನಾಗಿ ಮಾಡಿ ಅವರಿಗೆ ಸಾಮಾಜಿಕ ಭದ್ರತಾ ಯೋಜನೆಯನ್ನು ಸರಕಾರವು ಜಾರಿಗೆ ತಂದಿತ್ತು ಆದರೆ 2019ರ ನಂತರ ಅದನ್ನು ತೆಗೆದುಹಾಗಿ ಕಾರ್ಮಿಕ ಕಾರ್ಡಗಳನ್ನು ರದ್ದುಗೊಳಿಸಿದೆ. ಇದರಿಂದ ಅವರಿಗೆ ಸಿಗುತ್ತಿದ್ದ ಸಾಮಾಜಿಕ ಭದ್ರತಾ ಕೆಲಸವನ್ನು ಕಿತ್ತುಕೊಳ್ಳವ ಕೆಲಸ ಮಾಡಿದ್ದು ಇದನ್ನು ನಾವು ಖಂಡಿಸುತ್ತವೆ ಎಂದು ಆಗ್ರಹಿಸಿದರು.
ಸರಕಾರವು ನಮ್ಮ ಸಮಸ್ಯೆಗೆ ತಕ್ಷಣ ಸ್ಪಂಧಿಸಿ ಕಾರ್ಮಿಕ ವಿರೋಧಿ ನೀತಿಯನ್ನು ಕೈಬಿಡಬೇಕು ಮತ್ತು ಜಿಲ್ಲೆಯಲ್ಲಿರುವ 11 ಲಕ್ಷ ಉದ್ಯೋಗ ಖಾತರಿ ಕಾರ್ಮಿರಿಗೆ ತಕ್ಷಣವೇ ಲೇಬರ್ ಕಾರ್ಡ್ ನೀಡಬೇಕು ಮತ್ತು ಸಾಮಾಜಿಕ ಭದ್ರತಾ ಯೋಜನೆಯನ್ನು ಜಾರಿಗೆ ತರಬೇಕು ಎಂದು ಒತ್ತಾಯಿಸಿದರು.