This is the title of the web page
This is the title of the web page

Please assign a menu to the primary menu location under menu

State

ರಾಯಚೂರು ಜಿಲ್ಲಾ ನ್ಯಾಯಾಧೀಶರಾದ ಮಲ್ಲಿಕಾರ್ಜುನ ಗೌಡರನ್ನು ಕೂಡಲೇ ವೃತ್ತಿಯಿಂದ ವಜಾ ಮಾಡಬೇಕೆಂದು ಒತ್ತಾಯ


ಕುಷ್ಟಗಿ:-ಕುಷ್ಟಗಿ ದಂಡಾಧಿಕಾರಿಗಳ ಮೂಲಕ ಮಾನ್ಯ ಮುಖ್ಯ ನ್ಯಾಯಾಧೀಶರು ಉಚ್ಚನ್ಯಾಯಾಲಯ ಕರ್ನಾಟಕ ಸರ್ಕಾರ ಬೆಂಗಳೂರು ರವರಿಗೆ ಮನವಿ ಸಲ್ಲಿಸಿದರು.

ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಸಂವಿಧಾನ ಶಿಲ್ಪಿ. ಡಾ.ಬಿ ಆರ್ ಅಂಬೇಡ್ಕರ್ ರವರ ನೂರಾರು ಅಭಿಮಾನಿಗಳು ರಾಯಚೂರು ಜಿಲ್ಲಾ ನ್ಯಾಯಾಧೀಶ ರ ಮೇಲೆ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಉಪ ತಹಶೀಲ್ದಾರರಿಗೆ ಮನವಿ ಸಲ್ಲಿಸಿದರು.

ಜನೇವರಿ 26 ರಂದು ರಾಯಚೂರು ಕೋರ್ಟ್ ಆವರಣದಲ್ಲಿ ಸಂವಿಧಾನ ದಿನಾಚರಣೆ ಗಣರಾಜ್ಯೋತ್ಸವ ದಿನದಂದು ಡಾಕ್ಟರ್ ಬಿಆರ್ ಅಂಬೇಡ್ಕರ್ ಅವರ ಫೋಟೋ ನಾನು ಕಾರ್ಯಕ್ರಮಕ್ಕೆ ಬರುವುದಿಲ್ಲ ಎಂದು ಹೇಳಿದ ರಾಯಚೂರು ಜಿಲ್ಲಾ ನ್ಯಾಯಾಧೀಶರಾದ ಮಲ್ಲಿಕಾರ್ಜುನ ಇವರು ವೃತ್ತಿ ಗೌರವಕ್ಕೆ ಅವಮಾನ ಮಾಡಿದ್ದಲ್ಲದೆ ಸಂವಿಧಾನಕ್ಕೆ ಮತ್ತು ಸರಕಾರಕ್ಕೆ ಹಾಗೂ ಭಾರತ ರತ್ನ ಮಹಾನಾಯಕ ಸಂವಿಧಾನ ಶಿಲ್ಪಿ ಡಾಕ್ಟರ್ ಬಿಆರ್ ಅಂಬೇಡ್ಕರ್ ಅವರಿಗೆ ಅವಮಾನ ಮಾಡಿರುತ್ತಾರೆ ಹಾಗೂ ನ್ಯಾಯಾಧೀಶರ ಸ್ಥಾನಕ್ಕೆ ಇವರು ಅರ್ಹರಲ್ಲ.ಇದು ರಾಯಚೂರು ಜಿಲ್ಲೆಯ ಮುಖ್ಯ ನ್ಯಾಯಾಧೀಶರ ದೇಶದ್ರೋಹ ಕೃತ್ಯ. ಈ ಕೂಡಲೇ ರಾಷ್ಟ್ರದ್ರೋಹ ಪ್ರಕರಣವನ್ನು ದಾಖಲಿಸಬೇಕು ಹಾಗೂ ಕೂಡಲೇ ವೃತ್ತಿಯಿಂದ ವಜಾಗೊಳಿಸಬೇಕು ಹಾಗೂ ಕೂಡಲೇ ಗಡಿಪಾರು ಮಾಡಲು ಒತ್ತಾಯಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದ ಮತ್ತು ವಿವಿಧ ಸಂಘಟನೆಯ ಮುಖಾಂತರ ಒತ್ತಾಯಿಸಿದ್ದಾರೆ.

ಈ ಸಂದರ್ಭದಲ್ಲಿ ರೈತ ಮುಖಂಡರಾದ ನಜೀರ ಸಾಬ ಮೂಲಿಮನಿ,ಆರ್ ಕೆ ದೇಸಾಯಿ,ಬಸವರಾಜ ಗಾಣಿಗೇರ, ಪುರಸಭೆ ಸದಸ್ಯ ವಸಂತಪ್ಪ ಮೇಲಿನ ಮನಿ,ರಮೇಶ ಛಲವಾದಿ, ಶರಣಪ್ಪ ಹಿರೇಮನಿ,ಚಂದಾಲಿಂಗ ಕಲಾಲಬಂಡಿ,ದುರಗೇಶ ಹಿರೇಮನಿ,ಪ್ರಶಾಂತ ಸೇರಿ ಇನ್ನಿತರರು ಉಪಸ್ಥಿತರಿದ್ದರು.

ಆರ್ ಶರಣಪ್ಪ ಗುಮಗೇರಾ
ಕೊಪ್ಪಳ.


Gadi Kannadiga

Leave a Reply