This is the title of the web page
This is the title of the web page

Please assign a menu to the primary menu location under menu

State

ನವೆಂಬರ ೧೨ ರಂದು ರಾಷ್ಟ್ರೀಯ ಲೋಕ ಅದಾಲತ್


ಗದಗ ಸೆಪ್ಟೆಂಬರ್ ೧೪: ಕರ್ನಾಟಕ ಉಚ್ಛ ನ್ಯಾಯಾಲಯ ಹಾಗೂ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಆದೇಶನ್ವಯ ಗದಗ ಜಿಲ್ಲೆಯಲ್ಲಿ ನವೆಂಬರ್ ೧೨ ರಂದು ರಾಷ್ಟ್ರೀಯ ಲೋಕ ಅದಾಲತ್ ಹಮ್ಮಿಕೊಳ್ಳಲಾಗಿದೆ. ಸಾರ್ವಜನಿಕರು, ಪಕ್ಷಗಾರರು ತಮ್ಮ ವ್ಯಾಜ್ಯಗಳನ್ನು ಪರಸ್ಪರ ರಾಜೀಸಂಧಾನ ಮಾಡಿಕೊಳ್ಳುವ ಮೂಲಕ ತಮ್ಮ ಪ್ರಕರಣಗಳನ್ನು ತ್ವರಿತವಾಗಿ ಇತ್ಯರ್ಥಪಡಿಸಿಕೊಳ್ಳಲು ಇದೊಂದು ಸುವರ್ಣಾವಕಾಶವಾಗಿದೆ. ರಾಜೀ ಸಂಧಾನದಲ್ಲಿ ಪಾಲ್ಗೊಂಡು ತಮಗಾಗುವ ಆರ್ಥಿಕ ಹೊರೆ ಹಾಗೂ ಸಮಯ ಪೋಲಾಗುವುದನ್ನು ತಪ್ಪಿಸಲು, ಮೊದಲಿನ ಬಾಂದsವ್ಯ ಉಳಿಸಿಕೊಳ್ಳಲು ತಮ್ಮ ವ್ಯಾಜ್ಯಗಳನ್ನು ಇತ್ಯರ್ಥಪಡಿಸಿಕೊಳ್ಳುವಂತೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಗದಗ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಅದs್ಯಕ್ಷರಾದ ಬಸವರಾಜ ಅವರು ತಿಳಿಸಿದ್ದಾರೆ.
ಗದಗ ಜಿಲ್ಲೆಯಲ್ಲಿ ರಾಜೀ ಸಂಧಾನಕ್ಕಾಗಿ ಸಿವಿಲ್ ದಾವೆಗಳು, ¨ÀsÆಸ್ವಾಧೀನ ಪ್ರಕರಣಗಳು, ಬ್ಯಾಂಕ ವಸೂಲಾತಿ ಪ್ರಕರಣಗಳು, ದರಖಾಸ್ತು ಅರ್ಜಿಗಳು, ಕಾರ್ಮಿಕ ಪ್ರಕರಣಗಳು, ಎಮ್.ಎಮ್.ಆರ್.ಡಿ ಪ್ರಕರಣಗಳು, ಚೆಕ್‌ಬೌನ್ಸ್ ಪ್ರಕರಣಗಳು, ಎಂ.ವಿ.ಸಿ.ಪ್ರಕರಣಗಳು, ವೈವಾಹಿಕ ಪ್ರಕರಣಗಳು ಹಾಗೂ ರಾಜೀ ಆಗಲು ಅರ್ಹವಿರುವ ಕ್ರಿಮಿನಲ್ ಕಂಪೌಂಡೆಬಲ್ ಪ್ರಕರಣಗಳು ಸೇರಿದಂತೆ ಹಲವಾರು ಪ್ರಕರಣಗಳನ್ನು ರಾಜೀಗಾಗಿ ಗುರುತಿಸಲಾಗಿದ್ದು, ಪ್ರತಿದಿನ ರಾಜೀಗಾಗಿ ಆಯ್ಕೆ ಮಾಡಿದ ಪ್ರಕರಣಗಳನ್ನು ಸಂಬಂದsಪಟ್ಟ ವಕೀಲರು ಹಾಗೂ ಪಕ್ಷಗಾರರೊಂದಿಗೆ ಮುಂಚಿತವಾಗಿಯೇ ರಾಜೀ ಸಂಧಾನದಿಂದ ಆಗುವ ಪ್ರಯೋಜನಗಳ ಬಗ್ಗೆ ತಿಳಿಸಿ ಅವರ ಮನ ಒಲಿಸಿ ರಾಜೀ ಸಂಧಾನ ಮಾಡಿಕೊಳ್ಳಲು ತಿಳಿಯಪಡಿಸಲಾಗುವುದು,
ಪ್ರಕರಣಗಳಿಗೆ ಸಂಬಂಧಪಟ್ಟ ವಕೀಲರು, ಕಕ್ಷಿದಾರರು ಹಾಗೂ ವಿವಿದs ಇಲಾಖೆಗಳಿಗೆ ಸಂಬಂದsಪಟ್ಟ ಅಧಿಕಾರಿಗಳು, ಇಲಾಖೆಗಳವರು ನವೆಂಬರ್ ೧೨ ರಂದು ಜರಗುವ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ಪಾಲ್ಗೊಂಡು ತಮ್ಮ ವ್ಯಾಜ್ಯಗಳನ್ನು ರಾಜೀ ಸಂಧಾನ ಮೂಲಕ ಪರಿಹರಿಸಿಕೊಳ್ಳುವಂತೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಕೆ.ಗುರುಪ್ರಸಾದ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.


Gadi Kannadiga

Leave a Reply