ಕೊಪ್ಪಳ, ಅ. ೨೦: ಉತ್ತರ ಕನ್ನಡ ಜಿಲ್ಲೆಯ ಹಳಿಯಾಳದ ಕೆನರಾ ಬ್ಯಾಂಕ್ ದೇಶಪಾಂಡೆ ಆರ್ಸೆಟಿ ಸಂಸ್ಥೆ(ರಿ) ವತಿಯಿಂದ ಗ್ರಾಮೀಣ ಭಾಗದ ನಿರುದ್ಯೋಗಿ ಯುವಕರಿಗೆ ೪೫ ದಿನಗಳ ಉಚಿತ ಕಂಪ್ಯೂಟರ್ ಹಾರ್ಡವೇರ್ ಮತ್ತು ನೆಟ್ವರ್ಕಿಂಗ್ ಹಾಗೂ ೩೦ ದಿನಗಳ ಇಲೆಕ್ಟ್ರಿಕಲ್ ಮೋಟರ್ ರಿವೈಂಡಿಂಗ್ ಮತ್ತು ಟಿ.ವಿ ದುರಸ್ತಿ ತರಬೇತಿಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ೧೮ ರಿಂದ ೪೫ ವರ್ಷದೊಳಗಿನ ಬಿಪಿಎಲ್ ಕುಟುಂಬದವರಾಗಿರಬೇಕು. ಆಸಕ್ತರು ತಮ್ಮ ಹೆಸರು, ಜನ್ಮ ದಿನಾಂಕ, ಪೂರ್ಣ ಪೋಸ್ಟಲ್ ವಿಳಾಸ, ಮೊಬೈಲ್ ಸಂಖ್ಯೆ, ವಿದ್ಯಾರ್ಹತೆ, ಇತ್ಯಾದಿ ವಿವರಗಳನ್ನೊಳಗೊಂಡ ಅರ್ಜಿಯನ್ನು ಕೆನರಾ ಬ್ಯಾಂಕ್ ದೇಶಪಾಂಡೆ ಆರ್ಸೆಟ್ ಸಂಸ್ಥೆ, ಹಳಿಯಾಳ, ಉತ್ತರ ಕನ್ನಡ ಜಿಲ್ಲೆ ಈ ವಿಳಾಸಕ್ಕೆ ಸಲ್ಲಿಸಬೇಕು.
ತರಬೇತಿಗಳು ನವೆಂಬರ್ ತಿಂಗಳಲ್ಲಿ ಪ್ರಾರಂಭಿಸಲಾಗುತ್ತಿದ್ದು, ಮೊದಲು ಬಂದವರಿಗೆ ಹಾಗೂ ಗ್ರಾಮೀಣ ಭಾಗದವರಿಗೆ ಮೊದಲ ಆದ್ಯತೆ ನೀಡಲಾಗುವುದು. ತರಬೇತಿಯಲ್ಲಿ ಕೌಶಲ್ಯ, ಸಾಫ್ಟ್ ಸ್ಕೀಲ್ಸ್, ಯೋಗ ತರಬೇತಿ ಹಾಗೂ ಬ್ಯಾಂಕಿಂಗ್, ಸರ್ಕಾರಿ ಯೋಜನೆಗಳು ಮತ್ತು ಯೋಜನಾ ವರದಿ ತಯಾರಿಕೆ ಬಗೆಗಿನ ಮಾಹಿತಿಯನ್ನು ಉಚಿತವಾಗಿ ನೀಡಲಾಗುವುದು. ಈ ಸಮಯದಲ್ಲಿ ಊಟ, ವಸತಿ ಉಚಿತವಾಗಿ ನೀಡಲಾಗವುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: ೯೪೮೩೪೮೫೪೮೯, ೯೪೮೨೧೮೮೭೮೦, ೮೧೯೭೦೨೨೫೦೧, ೮೯೫೧೮೧೯೨೬೦, ೦೮೨೮೪-೨೨೦೮೦೭ ಮತ್ತು ೯೭೪೨೪೩೮೭೯೦ ಗೆ ಸಂಪರ್ಕಿಸಬಹುದು ಎಂದು ಆರ್ಸೆಟಿ ಸಂಸ್ಥೆಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Gadi Kannadiga > State > ಆರ್ಸೆಟಿ : ವಿವಿಧ ತರಬೇತಿಗಳಿಗೆ ಅರ್ಜಿ ಆಹ್ವಾನ