ಕೊಪ್ಪಳ:- ಜಿಲ್ಲೆಯ ಕನಕಗಿರಿ ತಾಲ್ಲೂಕಿನ ಹುಲಿಹೈದರ್* ಗ್ರಾಮ ಪಂಚಾಯತಿಗೆ ಅನಿರೀಕ್ಷಿತ ಭೇಟಿ ನೀಡಿದ ಮಾನ್ಯ ಮುಖ್ಯ ಕಾರ್ಯನಿರ್ವಧಿಕಾರಿಗಳಾದ *ಶ್ರೀ ರಾಹುಲ್ ರತ್ನಂ ಪಾಂಡೆಯ* ರವರು ಗ್ರಾಮ ಪಂಚಾಯತಿಯ ಬಾಪೂಜಿ ಸೇವ ಕೇಂದ್ರಕ್ಕೆ ಭೇಟಿ ನೀಡಿ ಗೃಹಲಕ್ಷ್ಮಿ ಯೋಜನೆಯ ಅರ್ಜಿಗಳನ್ನು ನೋಂದಾಯಿಸುವ ಕುರಿತು ಪರಿಶೀಲಿಸಿದರು.
ನಂತರ ಮಾತನಾಡಿದ ಅವರು ಗ್ರಾಮ ಪಂಚಾಯತಿ ಸಿಬ್ಬಂದಿಗಳಿಗೆ ಮತ್ತು ಅಂಗನವಾಡಿ ಕಾರ್ಯಕರ್ತರಿಗೆ ಫಲಾನುಭವಿಗಳ ಪಟ್ಟಿ ಪಡೆದು ಅವರನ್ನು ಸಂಪರ್ಕಿಸಿ ಅರ್ಜಿಗಳನ್ನು ನೋಂದಾಯಿಸಲು ಸೂಚಿಸಿದರು.
ಈ ಸಂದರ್ಭದಲ್ಲಿ ಕನಕಗಿರಿ ತಾಲೂಕ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳಾದ ಶ್ರೀ ಚಂದ್ರಶೇಖರ್ ಬಿ ಕಂದಕೂರು ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಾದ ಶ್ರೀ ಅಮರೇಶ್ ರಾಥೋಡ್, ಅಂಗನವಾಡಿ ಮೇಲ್ವಿಚಾರಕರಾದ ಶ್ರೀಮತಿ ಸುಕನ್ಯಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು ಗ್ರಾಮ ಪಂಚಾಯತ್ ಸಿಬ್ಬಂದಿಗಳು ಹಾಜರಿದ್ದರು.
ಆರ್ ಶರಣಪ್ಪ ಗುಮಗೇರಾ
ಕೊಪ್ಪಳ