This is the title of the web page
This is the title of the web page

Please assign a menu to the primary menu location under menu

State

ಫೆ. ೧೫ ರಂದು ಗಂಗಾವತಿಯಲ್ಲಿ ಅಹವಾಲು ಸ್ವೀಕಾರ


ಕೊಪ್ಪಳ ಫೆಬ್ರವರಿ ೧೩ : ಕರ್ನಾಟಕ ಲೋಕಾಯುಕ್ತ ಅಧಿಕಾರಿಗಳು ಫೆಬ್ರವರಿ ೧೫ ರಂದು ಗಂಗಾವತಿಯಲ್ಲಿ ಸಾರ್ವಜನಿಕ ಕುಂದುಕೊರತೆಗಳ ಅಹವಾಲು ಸ್ವೀಕರಿಸಲಿದ್ದಾರೆ.ಗೌರವಾನ್ವಿತ ಲೋಕಾಯುಕ್ತ, ಬೆಂಗಳೂರು ಹಾಗೂ ಅಪರ ಪೊಲೀಸ್ ಮಹಾನಿರ್ದೇಶಕರು, ಕರ್ನಾಟಕ ಲೋಕಾಯುಕ್ತ ಬೆಂಗಳೂರು ರವರ ಆದೇಶದ ಮೇರೆಗೆ ಗಂಗಾವತಿ ತಾಲ್ಲೂಕಿನಲ್ಲಿ ಯಾರಿಗಾದರೂ ಸರ್ಕಾರಿ ಅಧಿಕಾರಿಗಳಿಂದ ತಮಗೆ ಆಗಬೇಕಾದ ಕೆಲಸಗಳಲ್ಲಿ ವಿಳಂಬವಾಗಿದ್ದರೆ ಅಥವಾ ಅಧಿಕಾರಿಗಳು ನ್ಯಾಯಯುತವಾಗಿ ಮಾಡಿ ಕೊಡಬೇಕಾದ ಕೆಲಸಗಳಲ್ಲಿ ವೃಥಾ ತೊಂದರೆ ಕೊಡುತ್ತಿದ್ದರೆ ಅಥವಾ ದುರಾಡಳಿತದಲ್ಲಿ ತೊಡಗಿದ್ದರೆ ಸಾರ್ವಜನಿಕ ಕುಂದುಕೊರತೆಗಳ ಅಹವಾಲು ಸ್ವೀಕರಿಸುವ ಕಾರ್ಯಕ್ರಮವನ್ನು ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಸುವುದನ್ನು ತೀರ್ಮಾನ ಮಾಡಲಾಗಿದೆ. ಲೋಕಾಯುಕ್ತ ಅಧಿಕಾರಿಗಳು ಎಲ್ಲಾ ಇಲಾಖೆಯ ತಾಲ್ಲೂಕ ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ.
ಅದರಂತೆ ಫೆ. ೧೫ ರಂದು ಮಧ್ಯಾಹ್ನ ೩ ಗಂಟೆಗೆ ಗಂಗಾವತಿಯ ಎ.ಪಿ.ಎಂ.ಸಿ. ಸಭಾಂಗಣದಲ್ಲಿ ಪೊಲೀಸ್ ಅಧೀಕ್ಷಕರು, ಕರ್ನಾಟಕ ಲೋಕಾಯುಕ್ತ ರಾಯಚೂರು ಇವರ ಅಧ್ಯಕ್ಷತೆಯಲ್ಲಿ ಅಹವಾಲು ಸ್ವೀಕರ ಸಭೆ ನಡೆಯಲಿದ್ದು, ಸಾರ್ವಜನಿಕರು ತಮ್ಮ ಕುಂದುಕೊರತೆಗಳನ್ನು ನೇರವಾಗಿ ಬಂದು ಸಲ್ಲಿಸಲು ಹಾಗೂ ಸ್ಥಳದಲ್ಲಿಯೇ ಇದ್ದ ಅಧಿಕಾರಿಗಳೊಂದಿಗೆ ಕೆಲಸ ನೆರವೇರಿಸಿಕೊಳ್ಳಲು ಅಥವಾ ಸ್ಥಳದಲ್ಲಿಯೇ ದೂರು ಅರ್ಜಿಯ ಫಾರಂ ನಂ: ೧ & ೨ ತೆಗೆದುಕೊಂಡು ದೂರು ನೀಡಲು ಅನುಕೂಲ ಕಲ್ಪಿಸಲಾಗಿದೆ.
ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು. ಈ ಕುರಿತು ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂ: ೦೮೫೩೯-೨೯೫೨೦೦ & ೨೨೦೫೩೩ ಮತ್ತು ೨೯೫೮೩೩ ಗಳನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ ಲೋಕಾಯುಕ್ತ, ಕೊಪ್ಪಳ ಪೊಲೀಸ್ ಉಪ-ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Gadi Kannadiga

Leave a Reply